ಧಾರ್ಮಿಕ ನೆಲೆಯಲ್ಲಿ 13 ವರ್ಷ ದಾಟಿದರೆ ಪ್ರೌಢ ಎಂದು ಅರ್ಥ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಪೇಜಾವರ ಶ್ರೀ

ಧಾರ್ಮಿಕ ನೆಲೆಯಲ್ಲಿ ಹದಿಮೂರು ವರ್ಷ ದಾಟಿದ್ರೆ ಪ್ರೌಢ ಅಂತ ಅರ್ಥ. ಶಿರೂರು ಮಠಕ್ಕೆ ನೇಮಕವಾದ ವ್ಯಕ್ತಿಗೆ ಹದಿಮೂರು ವರ್ಷ ಆಗಿದೆ. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಇದು ಬಾಲ್ಯ ಸನ್ಯಾಸ ಅಂತ ಆಗುದಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

ಧಾರ್ಮಿಕ ನೆಲೆಯಲ್ಲಿ 13 ವರ್ಷ ದಾಟಿದರೆ ಪ್ರೌಢ ಎಂದು ಅರ್ಥ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಪೇಜಾವರ ಶ್ರೀ
ಪೇಜಾವರ ಶ್ರೀ
Follow us
TV9 Web
| Updated By: ganapathi bhat

Updated on: Sep 29, 2021 | 6:17 PM

ಉಡುಪಿ: ಇಲ್ಲಿನ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ನೂತನ ಪೀಠಾಧಿಪತಿ ನೇಮಕ, ಪೀಠಾಧಿಕಾರಿ ಆಯ್ಕೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ. ಪೇಜಾವರ ತೀರ್ಥರು ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಧಾರ್ಮಿಕ ಗ್ರಂಥದಲ್ಲಿ ಪ್ರೌಢತೆ ವಯಸ್ಸನ್ನು ಹದಿಮೂರರ ಬಳಿಕ ಅಂತ ಗುರುತಿಸಲಾಗಿದೆ. ಹದಿಮೂರರ ಬಳಿಕ ಪ್ರೌಢ ಅಂತ ಮಹಾಭಾರತದಲ್ಲೇ ಉಲ್ಲೇಖ ಇದೆ. ಮೊದಲು ಎಂಟು ವರ್ಷದವರೆಗೆ ಬಾಲ್ಯ ಅಂತ ಇತ್ತು. ನಂತರ ಅಣಿಮಾಂಡವ್ಯ ಖುಷಿಗಳು ಅದನ್ನು 13 ವರ್ಷಕ್ಕೆ ವಿಸ್ತಾರ ಮಾಡಿದ್ರು. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಹದಿಮೂರು ವರ್ಷ ದಾಟಿದ್ರೆ ಪ್ರೌಢ ಅಂತ ಅರ್ಥ. ಶಿರೂರು ಮಠಕ್ಕೆ ನೇಮಕವಾದ ವ್ಯಕ್ತಿಗೆ ಹದಿಮೂರು ವರ್ಷ ಆಗಿದೆ. ಹೀಗಾಗಿ ಧಾರ್ಮಿಕ ನೆಲೆಯಲ್ಲಿ ಇದು ಬಾಲ್ಯ ಸನ್ಯಾಸ ಅಂತ ಆಗುದಿಲ್ಲ ಎಂದು ಉಡುಪಿಯಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.

ಶೀರೂರು ಮಠಕ್ಕೆ 16 ವರ್ಷ ವಯಸ್ಸಿನ ಅನಿರುದ್ಧ ಸರಳತ್ತಾಯ ಎಂಬವರನ್ನು (ಪ್ರಸ್ತುತ ವೇದವರ್ಧನ ತೀರ್ಥ) ಪೀಠಾಧಿಪತಿಯಾಗಿ ನೇಮಿಸಿದ್ದನ್ನು ಪಿಐಎಲ್ ಮೂಲಕ ಪ್ರಶ್ನಿಸಲಾಗಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್​ನ ವಿಭಾಗೀಯ ಪೀಠ ತಿರಸ್ಕರಿಸಿದೆ. ನ್ಯಾ. ಸತೀಶ್ ಚಂದ್ರ ಶರ್ಮ ಹಾಗೂ ಸಚಿನ್ ಶಂಕರ್ ಮಗದುಮ್ ಅವರು ಅರ್ಜಿ ತಿರಸ್ಕಾರ ಮಾಡಿ ತೀರ್ಪು ನೀಡಿದ್ದಾರೆ.

ಬೌದ್ಧ ಮತ್ತು ಇತರ ಧರ್ಮಗಳಲ್ಲಿ ಸಣ್ಣ ವಯಸ್ಸಿನವರು ಭಿಕ್ಕುಗಳಾಗಿದ್ದಾರೆ. ಯಾವ ವಯಸ್ಸಿನಲ್ಲಿ ಸನ್ಯಾಸ ಅಥವಾ ಭಿಕ್ಷೆ ನೀಡಬೇಕು ಎಂಬ ಬಗ್ಗೆ ಯಾವುದೇ ನಿಯಮಗಳಿಲ್ಲ ಎಂದು ಹೇಳಿದ್ದಾರೆ. ಧಾರ್ಮಿಕ ಪೀಠಗಳಿಗೆ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಿಸುವುದಕ್ಕೆ ನಿರ್ಬಂಧ ಹಾಕಲಾಗದು. ಅದು ಪರಂಪರೆ. ಹಾಗಾಗಿ ತಾನು ಆ ವಿಷಯದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

800 ವರ್ಷಗಳಿಂದ ಅಷ್ಟ ಮಠಗಳಲ್ಲಿ ಪರಂಪರೆ ಜಾರಿಯಲ್ಲಿದೆ. ಈ ಪರಂಪರೆಯಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ಮತ್ತು ನ್ಯಾ. ಸಚಿನ್‌ ಮಗದುಮ್ ಅವರಿದ್ದ ಪೀಠ ಮೇಲಿನ ತೀರ್ಪು ನೀಡಿತು. ಶಿರೂರು ಮಠಕ್ಕೆ ಅನಿರುದ್ಧ ಸರಳತ್ತಾಯರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ಪೀಠಾಧಿಪತಿ ನೇಮಕವಾಗಿತ್ತು.

ಇದನ್ನೂ ಓದಿ: ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕ ಊರ್ಜಿತ, ಈ ಪರಂಪರೆಯಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ: ಹೈಕೋರ್ಟ್

ಇದನ್ನೂ ಓದಿ: ಶಿರೂರು ಮಠಕ್ಕೆ ನೂತನ ಯತಿಯಾಗಿ ಅಪ್ರಾಪ್ತರ ನೇಮಕಕ್ಕೆ ಆಕ್ಷೇಪ; ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ