ಕೊಲ್ಲೂರು ಮೂಕಾಂಬಿಕಾ ದೇವಾಲಯದ ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್
Kollur Mookambika Temple: ಕೊಲ್ಲೂರು ಮೂಕಾಂಬಿಕಾ ದೇವಾಲಯದ ಅತಿ ಸಮೀಪದಲ್ಲೇ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವುದು, ಅದಕ್ಕಾಗಿ ಭೂಸ್ವಾಧೀನ ಮಾಡುವುದನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್, ಸದ್ಯದ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ.
ಬೆಂಗಳೂರು, ಫೆಬ್ರವರಿ 21: ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯದ (Kollur Mookambika Temple) ಪಕ್ಕದಲ್ಲೇ ರಾಷ್ಟ್ರೀಯ ಹೆದ್ದಾರಿಗೆ (National Highway) ಭೂಸ್ವಾಧೀನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿಗೆ ಭೂಸ್ವಾಧೀನಕ್ಕೆ ಸೂಚಿಸಲಾಗಿದೆ. ಇದನ್ನು ಪ್ರಶ್ನಿಸಿ ಕೊಲ್ಲೂರಿನ ಗುರುಪ್ರಸಾದ್ ಎಂಬುವರು ಪಿಐಎಲ್ ಸಲ್ಲಿಸಿದ್ದಾರೆ.
ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಿಜೆ ಪಿ.ಎಸ್. ದಿನೇಶ್ ಕುಮಾರ್, ನ್ಯಾ. ಟಿ.ಜಿ. ಶಿವಶಂಕರೇಗೌಡರಿದ್ದ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.
ಯೋಜನೆಯೆ ಪ್ರಕಾರ ಕಾಮಗಾರಿ ನಡೆದರೆ, ದೇವಾಲಯದ ಗೋಡೆಯ 3 ಅಡಿ ಪಕ್ಕದಲ್ಲೇ ಹೆದ್ದಾರಿ ನಿರ್ಮಾಣವಾಗಲಿದೆ. ಹೆದ್ದಾರಿಯಲ್ಲಿ ಪ್ರತಿದಿನ ಅಂದಾಜು ಹದಿನೈದು ಸಾವಿರ ವಾಹನಗಳು ಹಾದುಹೋಗಲಿವೆ. ಇದರಿಂದ ಸಾವಿರಾರು ವರ್ಷಗಳ ಹಳೆಯ ದೇಗುಲಕ್ಕೆ ಅಪಾಯವಿದೆ ಎಂದು ಅರ್ಜಿದಾರರ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡನೆ ಮಾಡಿದೆ.
ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಪೀಠ, ಹೆದ್ದಾರಿ ಪ್ರಾಧಿಕಾರಕ್ಕೆ ನೋಟಿಸ್ ನೀಡಿ ವಿವರಣೆ ಕೇಳಿದೆ. ಜತೆಗೆ, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ.
ಉಡುಪಿ ಜಿಲ್ಲೆ, ಬೈಂದೂರು ತಾಲೂಕಿನಲ್ಲಿರುವ ದೇಗುಲ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿದೆ. ಇದು ಮಾತೃ ದೇವತೆಗೆ ಸಂಬಂಧಿಸಿದ ಹಿಂದೂ ದೇವಾಲಯ. ಇದು ಕೊಡಚಾದ್ರಿ ಬೆಟ್ಟಗಳ ತಪ್ಪಲಿನಲ್ಲಿ ಸೌಪರ್ಣಿಕಾ ನದಿಯ ದಕ್ಷಿಣ ದಡದಲ್ಲಿದೆ. ಗೋಕರ್ಣ ಮತ್ತು ಕನ್ಯಾಕುಮಾರಿ ನಡುವಿನ ಭೂಮಿಯಲ್ಲಿ ನೆಲೆಗೊಂಡಿದ್ದು, ಋಷಿ ಪರಶುರಾಮರಿಂದ ಪ್ರತಿಷ್ಠಾಪಿಸಲ್ಪಟ್ಟದ್ದು ಎಂಬ ನಂಬಿಕೆ ಇದೆ. ದೇಗುಲದಲ್ಲಿ ಮೂಕಾಂಬಿಕಾ ದೇವಿಯ ನಾಲ್ಕು ಕೈಗಳ ಪಂಚಲೋಹದ ವಿಗ್ರಹವನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ: 10 ವರ್ಷಗಳಿಂದ ಮತ ಹಾಕಿದ ನಮಗಾಗಿ ನೀವು ಮಾಡಿದ್ದೇನು? ಶೋಭಾ ಕರಂದ್ಲಾಜೆಗೆ ಮೀನುಗಾರರು ಕ್ಲಾಸ್
ದೇವಾಲಯದಲ್ಲಿ ಗಣಪತಿ, ಶಿವ, ವಿಷ್ಣು, ಹನುಮಂತ, ಸುಬ್ರಹ್ಮಣ್ಯ, ವೀರಭದ್ರ ಮತ್ತು ನಾಗದೇವತೆಗಳ ಗುಡಿಗಳಿವೆ. ಫಾಲ್ಗುಣ ಮಾಸದ ರಥೋತ್ಸವ ಮತ್ತು ನವರಾತ್ರಿ ಈ ದೇವಾಲಯದ ಪ್ರಮುಖ ಹಬ್ಬಗಳಾಗಿವೆ.
ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್!
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ಟ್ರಸ್ಟ್ ಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಭಕ್ತರಿಗೆ ನಕಲಿ ಲಿಂಕ್‌ಗಳನ್ನು ಹರಿಬಿಟ್ಟು ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಇಬ್ಬರು ನಿವಾಸಿಗಳು ಇದೀಗ ನಕಲಿ ಟ್ರಸ್ಟ್ ವಿರುದ್ಧ ಕ್ರಮ ಕೋರಿ ಕೊಲ್ಲೂರು ಪೊಲೀಸರಿಗೆ ಮನವಿ ಮಾಡಿರುವ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ. ಕೇರಳದ ಎರ್ನಾಕುಲಂನಲ್ಲಿ ನಕಲಿ ಟ್ರಸ್ಟ್ ರಚನೆಯಾಗಿದೆ ಎನ್ನಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ