AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ

ಅತ್ಯಂತ ರುಚಿಕರ ಉಡುಪಿ ಅಡುಗೆ ಸಂಸತ್ತಿನಲ್ಲಿ ಘಮಘಮಿಸಿದ್ದು, ಇದನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಸವಿದಿದ್ದಾರೆ.

ಸಂಸತ್ ಭವನದಲ್ಲಿ ಘಮ ಘಮಿಸಿದ ಉಡುಪಿ ಊಟ, ಬಾಳೆ ಎಲೆಯಲ್ಲಿ ಸವಿದ ಪ್ರಧಾನಿ ನರೇಂದ್ರ ಮೋದಿ
ಭೋಜನಕೂಟ
TV9 Web
| Edited By: |

Updated on: Aug 08, 2023 | 12:00 PM

Share

ಉಡುಪಿ.ನವದೆಹಲಿ, (ಆಗಸ್ಟ್ 08): ಉಡುಪಿ (Udupi) ಶೈಲಿಯ ಆಹಾರ ಎಷ್ಟು ರುಚಿ ಅಂತ ಈಗ ದಿಲ್ಲಿಯವರೆಗೂ ಗೊತ್ತಾಗಿದೆ. ಹೌದು.. ಉಡುಪಿಯ ಸಾಂಪ್ರದಾಯಿಕ ಆಹಾರ (Udupi Style Food) ದೇಶದ ಶಕ್ತಿ ಕೇಂದ್ರ ಸಂಸತ್ತಿನಲ್ಲಿ(parliament) ಘಮಿ ಘಮಿಸಿವೆ. .ಆಗಸ್ಟ್ 03ರಂದು ಸಂಸತ್ ಭವನದ ಒಳಾಂಗಣದಲ್ಲಿ ನಡೆದ ಎನ್​ಡಿಎ ಸಂಸದರ ಸಭೆಯ ನಂತರ ಏರ್ಪಡಿಸಲಾಗಿದ್ದ ಭೋಜನಕೂಟದಲ್ಲಿ ಉಡುಪಿ ಖಾದ್ಯಗಳನ್ನು ತಯಾರಿಸಲಾಗಿದ್ದು,  ಸ್ವತಃ ಪ್ರಧಾನಿ ನರೇಂದ್ರ ಮೋದಿ ಸವಿದಿದ್ದಾರೆ.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಉಡುಪಿ ಸಾರು, ಪತ್ರೊಡೆ, ಸುಕುರುಂಡೆ, ಹಲಸಿನ ಹಣ್ಣಿನ ಗಟ್ಟಿ, ತಿಮರೆ ಚಟ್ನಿ ಮೊದಲಾದ ಆಹಾರವನ್ನು ತಯಾರಿಸಲಾಗಿದ್ದು, ಅದನ್ನು ಮೋದಿ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಎನ್​ಡಿಎ ಸಂಸದರು ರುಚಿ ನೋಡಿದ್ದಾರೆ. ಕರ್ನಾಟಕ, ಆಂಧ್ರ, ತಮಿಳುನಾಡಿನ ಕೆಲವು ಖಾದ್ಯಗಳ ಭೋಜವನ್ನು ಸವಿದಿರುವ ಬಗ್ಗೆ ಮೋದಿ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದರು.

ಉಡುಪಿಯ ಬುಡ್ನಾರು ಸುಬ್ರಹ್ಮಣ್ಯ ಆಚಾರ್ಯರು ದೆಹಲಿಗೆ ತೆರಳಿ ಉಡುಪಿ ಅಡುಗೆಯನ್ನು ಸಿದ್ಧಪಡಿಸಿದ್ದರು. ಸುಬ್ರಹ್ಮಣ್ಯರ ಜೊತೆ ಸಹಾಯಕರಾಗಿ ರಾಜಶೇಖರ್ ತೆರಳಿದ್ದರು. ಇನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ, ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರೂ ಸುಬ್ರಹ್ಮಣ್ಯರ ಅಡುಗೆಯ ರುಚಿ ಪ್ರಶಂಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ