ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ಮೋದಿಗೆ ಆತಿಥ್ಯ ನೀಡಿದ್ದು ಕುಂದಾಪುರದ ಆನಂದ ಪೂಜಾರಿ!
ಅಂದಹಾಗೆ ಇಂತಹದ್ದೊಂದು ಅವಕಾಶವನ್ನು ಆನಂದ ಪೂಜಾರಿ ದಂಪತಿ ಪಡೆದುಕೊಂಡಿದ್ದು ಇದೇ ಮೊದಲಲ್ಲ.
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಊಟೋಪಚಾರ ಸಹಿತ ಆತಿಥ್ಯದ ನೇತೃತ್ವ ವಹಿಸಿದವರು ಉಡುಪಿ ಜಿಲ್ಲೆಯ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೋಟೆಲ್ ಉದ್ಯಮಿ ಆನಂದ ಪೂಜಾರಿ! ಅಂದಹಾಗೆ ಇಂತಹದ್ದೊಂದು ಅವಕಾಶವನ್ನು ಆನಂದ ಪೂಜಾರಿ ದಂಪತಿ ಪಡೆದುಕೊಂಡಿದ್ದು ಇದೇ ಮೊದಲಲ್ಲ. ಪ್ರಧಾನಿ ಮೋದಿ ಈ ಹಿಂದೆ ಅಮೇರಿಕಾಕ್ಕೆ ಹೋಗಿದ್ದಾಗಲೂ ಈ ದಂಪತಿ ಆತಿಥ್ಯ ನೀಡಿದ್ದುಂಟು.
ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಕಳೆದ ಮೂರು ದಶಕಗಳಿಂದ ನೆಲೆಸಿದ್ದಾರೆ. ಅಲ್ಲಿ ಭವ್ಯ ವುಡ್ ಲ್ಯಾಂಡ್ಸ್ ಹೊಟೇಲ್ ನಡೆಸುತ್ತಿದ್ದಾರೆ. ಈಬಾರಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಅವಕಾಶವನ್ನು ಈ ದಂಪತಿ ಪಡೆದಿದ್ದಾರೆ.
ಪ್ರಧಾನಿ ಮೋದಿಯವರು ಅಮೆರಿಕದಲ್ಲಿದ್ದರೂ ಭಾರತೀಯ ಶೈಲಿಯ ಊಟಕ್ಕೆ ಆದ್ಯತೆ ನೀಡುತ್ತಿದ್ದು, ದಕ್ಷಿಣ ಭಾರತೀಯ ಖಾದ್ಯಗಳಿಗೆ ಮಾರುಹೋಗಿದ್ದಾರೆ ಎನ್ನುತ್ತಾರೆ ಆನಂದ ಪೂಜಾರಿ ಅವರು. ಮೂಲತಃ ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರರಾದ ಇವರು, ಅಮೆರಿಕದಲ್ಲಿ ನೆಲೆಸಿದ್ದರೂ ಊರಿಗೆ ಆಗಾಗ ಆಗಮಿಸುತ್ತಾರೆ.
ಇದನ್ನೂ ಓದಿ:
ಭಾರತ ಅಭಿವೃದ್ಧಿಯಾದರೆ ವಿಶ್ವವೇ ಅಭಿವೃದ್ಧಿಯಾಗುತ್ತದೆ; ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ
(PM Narendra Modi in America Anand Poojary of Byndoor treats hims)