ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ
ಆರೋಪಿ ಅನಂತ ಸೇರಿಗಾರ್

ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

TV9kannada Web Team

| Edited By: sandhya thejappa

Aug 07, 2021 | 9:00 AM

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪದಲ್ಲಿ 65 ವರ್ಷ ಪ್ರಾಯದ ಅನಂತ ಸೇರಿಗಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ನೀಡಿದ್ದಳು. ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು. ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್ ಕೇರಳ ಹೈಕೋರ್ಟ್ ಶುಕ್ರವಾರ ಭಾರತದಲ್ಲಿ ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತವಾದ ಕಾರಣ ಎಂಬ ಒಂದು ಮಹತ್ವದ ತೀರ್ಪು ನೀಡಿದೆ. ಲೈವ್ ಲಾ ವರದಿಯ ಪ್ರಕಾರ, “ಪತ್ನಿಯ ದೇಹ ನನಗೆ ಸೇರಿದ್ದು ಎಂದು ಆಕೆಯ ಸಮ್ಮತಿಯಿಲ್ಲದೆಯೂ ಬಳಸಿಕೊಳ್ಳಬಹುದು ಎಂಬ ಪತಿಯ ಮನೋಭಾವವು ವೈವಾಹಿಕ ಅತ್ಯಾಚಾರವಾಗಿದೆ. ಶಿಕ್ಷಿಸಲಾಗದಿದ್ದರೂ, ಅದು ದೈಹಿಕ ಮತ್ತು ಮಾನಸಿಕ ಕ್ರೌರ್ಯದ ಚೌಕಟ್ಟಿನಲ್ಲಿ ಬರುತ್ತದೆ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮೈಸೂರು ವಿವಿ ಹೆಸರು ಕೆಡುತ್ತಿದೆ; ಪ್ರಾಧ್ಯಾಪಕರಿಬ್ಬರಿಗೂ ನೊಟೀಸ್ ನೀಡಲು ಚಿಂತನೆ

ವೈವಾಹಿಕ ಅತ್ಯಾಚಾರವು ವಿಚ್ಛೇದನಕ್ಕೆ ಸೂಕ್ತ ಕಾರಣ: ಕೇರಳ ಹೈಕೋರ್ಟ್

(Police have arrested a man who sexually abused a minor Girl at Udupi)

Follow us on

Related Stories

Most Read Stories

Click on your DTH Provider to Add TV9 Kannada