ಸ್ಥಳ ಮಹಜರಿಗಾಗಿ ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸ್

2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2023ರ ನವೆಂಬರ್​ನಲ್ಲಿ ಶ್ರೀಮತಿಯನ್ನು ಕೇರಳದಲ್ಲಿ ಅರೆಸ್ಟ್ ಮಾಡಲಾಗಿತ್ತು.

Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು

Updated on:Feb 15, 2024 | 2:51 PM

ಉಡುಪಿ, ಫೆ.15: ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ (Karkala) ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತಂದಿದ್ದಾರೆ. 2023ರ ನವೆಂಬರ್​ನಲ್ಲಿ ಶ್ರೀಮತಿಯನ್ನು ಕೇರಳದಲ್ಲಿ (Kerala) ಅರೆಸ್ಟ್ ಮಾಡಲಾಗಿತ್ತು. ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಶ್ರೀಮತಿ ಸೆರೆಯಾಗಿದ್ದಳು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ.

ಇದನ್ನೂ ಓದಿ: ರೌಡೀಶೀಟರ್​ ಜೈಲಿನಿಂದ ಯುವತಿಯ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಜನರ ಶಂಕಿತ ನಕ್ಸಲರ ತಂಡ ಭೇಟಿ ವದಂತಿ ಕೆಲವು ದಿನಗಳ ಹಿಂದೆ ಹಬ್ಬಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಸ್ಥಳೀಯ ವ್ಯಕ್ತಿಯೊಬ್ಬರು ನನ್ನ ಮನೆಯ ಪಕ್ಕದಲ್ಲಿ ನಕ್ಸಲರ ತಂಡ ಹಾದು ಹೋಗಿದ್ದರು, ನಾನು ಅದನ್ನು ಗಮನಿಸಿದ್ದೇನೆ ಎನ್ನುವ ಹೇಳಿಕೆ ನೀಡಿದ್ದರು. ಅಲ್ಲದೆ ನಕ್ಸಲರನ್ನು ನೋಡಿದ್ದೇನೆ ಎಂದು ಬೆಂಗಳೂರಿನಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇದರ ಮಾಹಿತಿಯನ್ನು ಕೂಡ ರವಾನಿಸಿದ್ದರು. ಹೀಗಾಗಿ ತಕ್ಷಣಕ್ಕೆ ಆಕ್ಟಿವ್ ಆದ ನಕ್ಸಲ್ ನಿಗ್ರಹ ದಳ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಕೂಂಬಿಂಗ್ ಕೂಡ ನಡೆಸಿದೆ. ಅತಿ ಆಧುನಿಕ ಡ್ರೋನ್ ಬಳಸಿ ನಕ್ಸಲ್ ಪಡಿ ಅನ್ನು ಪತ್ತೆಹಚ್ಚುವ ಕೆಲಸವನ್ನ ಕೂಡ ಮಾಡಿರುವ ನಕ್ಸಲ್ ನಿಗ್ರಹ ಪಡೆಗೆ ಇದುವರೆಗೆ ಯಾವುದೇ ನಕ್ಸಲರು ಕೂಡ ಗೋಚರವಾಗಿಲ್ಲ. ಹೀಗಾಗಿ ಸದ್ಯ ಮುದುರು, ಉದಯನಗರ ವ್ಯಾಪ್ತಿಯಲ್ಲಿ ಸ್ಥಳೀಯರು ಮಾತ್ರ ನಕ್ಸಲರು ಬಂದಿರುವುದು ಹೌದು ಅಥವಾ ಇನ್ಯಾವುದೋ ದಂಧೆಗೋಸ್ಕರ ಹೆಸರನ್ನ ಬಳಸಿಕೊಳ್ಳಲಾಗುತ್ತಿದೆಯೋ ಎನ್ನುವ ಚರ್ಚೆ ಮಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:23 am, Thu, 15 February 24

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ