AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರು ತನ್ನನ್ನು ಹಿಂದೂ ಎಂದು ಕರೆಯದಂತೆ ಹೇಳಿದ್ದರು; ಇವತ್ತಿಗೂ ಕಾಂಗ್ರೆಸ್ಸಿನಲ್ಲಿ ಅದೇ ಪರಂಪರೆ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್

ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಬಿ.ಟಿ.ಲಲಿತಾ ನಾಯಕ್ ದೈವಾರಾಧಕರಿಗೆ ಮಾಸಾಶನ ವಿರೋಧಿಸಿದ್ದರು. ದೇವಸ್ಥಾನದಲ್ಲಿ ತೀರ್ಥ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಇದು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸಚಿವ ಸುನಿಲ್ ಕುಮಾರ್ ಮಾರ್ಮಿಕವಾಗಿ ಹೇಳಿದರು.

ನೆಹರು ತನ್ನನ್ನು ಹಿಂದೂ ಎಂದು ಕರೆಯದಂತೆ ಹೇಳಿದ್ದರು; ಇವತ್ತಿಗೂ ಕಾಂಗ್ರೆಸ್ಸಿನಲ್ಲಿ ಅದೇ ಪರಂಪರೆ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್
ನೆಹರು ತನ್ನನ್ನು ಹಿಂದೂ ಎಂದು ಕರೆಯಬಾರದೆಂದು ಹೇಳಿದ್ದರು, ಕಾಂಗ್ರೆಸ್ಸಿನಲ್ಲಿ ನೆಹರು ಪರಂಪರೆ ಇವತ್ತಿಗೂ ಮುಂದುವರೆದಿದೆ -ಸಚಿವ ಸುನಿಲ್ ಕುಮಾರ್
TV9 Web
| Edited By: |

Updated on:Nov 08, 2022 | 1:35 PM

Share

ಉಡುಪಿ: ದೆಗುಲ ನಗರದಲ್ಲಿ ಸ್ವಾಭಿಮಾನಿ ಹಿಂದೂ ಅಭಿಮಾನ ಇಂದಿನಿಂದ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಕ್ಷಮೆ ಯಾಚಿಸಲೇಬೇಕು. ಕಾಂಗ್ರೆಸ್‌ ನ ಕಾರ್ಯಾಧ್ಯಕ್ಷನಾಗಿ ಜಾರಕಿಹೋಳಿ ಹೇಳಿಕೆ ಕೊಟ್ಟಿದಾರೆ. ಹಿಂದೂ ಪದ ಅಶ್ಲೀಲ ಎಂದು ಸತೀಶ್ ಜಾರಕಿಹೊಳಿ ಹೇಳಿರೋದು ನಾಚಿಕೆಗೇಡು ಸಂಗತಿ. ಈ ಅಪಮಾನ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಹುಟ್ಟಿನಿಂದ ಇವತ್ತಿನವರೆಗೆ ಹಿಂದು ಭಾರತೀಯತೆ ಮೇಲೆ ಹಲವು ಬಾರಿ ಅವಮಾನ ಮಾಡಿದೆ. ನೆಹರು ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ನೆಹರು ಹಾಕಿಕೊಟ್ಟ ಪರಂಪರೆ ಇವತ್ತಿಗೂ ಮುಂದುವರೆಯುತ್ತಾ ಬಂದಿದೆ. ಅವಕಾಶ ಸಿಕ್ಕಾಗಲೆಲ್ಲ ಹಿಂದುತ್ವ ಮತ್ತು ಭಾರತೀಯತೆ ಬಗ್ಗೆ ಕಾಂಗ್ರೆಸ್ ಅಪಮಾನ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ಭಗವದ್ಗೀತೆಯನ್ನು ಜಿಹಾದ್ ಗೆ ಹೋಲಿಸಿದ್ದರು. ಸಿದ್ದರಾಮಯ್ಯನವರಿಗೆ ತಿಲಕ ಕಂಡರೆ ಆಗುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಸಾವರ್ಕರ್ ಬಗೆಗೂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ಸಿಗೆ ಹಿಂದೂಗಳನ್ನು ಕಂಡರೆ ಅಸಹನೆ. ಭಾರತೀಯತೆಯನ್ನು ಕಾಂಗ್ರೆಸ್ ಯಾವತ್ತೂ ಒಪ್ಪಿಲ್ಲ ಎಂದು ಹೇಳಿದರು.

ಹಿಂದುತ್ವಕ್ಕೆ ಧಕ್ಕೆಯಾದಾಗಲೆಲ್ಲ ನಾವು ಎದ್ದು ನಿಂತಿದ್ದೇವೆ. ಈ ವಿಚಾರವನ್ನು ನಾವು ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಈ ಹೇಳಿಕೆಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಭಾರತೀಯತೆ ಹಿಂದೂ ಜೀವನ ಪದ್ಧತಿಯನ್ನು ಒಪ್ಪದ ಕಾಂಗ್ರೆಸ್ ಸಮಾಜದ ಕ್ಷಮೆ ಕೇಳಬೇಕು. ಜಾರಕಿಹೊಳಿ ಶಾಲೆಗೆ ಸೇರುವಾಗ, ಚುನಾವಣೆಗೆ ಸ್ಪರ್ಧಿಸುವಾಗ ಹಿಂದೂ ಪರಿಶಿಷ್ಟ ಜಾತಿ ಎಂದು ಹೇಳಿದ್ದಿರೋ ಅಥವಾ ಅಶ್ಲೀಲ ಹಿಂದೂ ಎಂದು ಹೇಳಿ ಶಾಲೆಗೆ ಸೇರಿದ್ದೀರೋ? ಕಾಂಗ್ರೆಸ್ ಈ ಹೇಳಿಕೆಗೆ ಬಹಳ ದೊಡ್ಡ ಪ್ರಮಾಣದ ಬೆಲೆ ತರಬೇಕಾಗುತ್ತದೆ.

ಇಂದು ಬೆಳಿಗ್ಗೆ ನಾನೇ ಟ್ವೀಟ್ ಮಾಡಿದ್ದೇನೆ. ಹಿಂದುತ್ವಕ್ಕೆ ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ಅಪಮಾನ ಮಾಡಿದೆ. ಈ ನಡೆಯ ವಿರುದ್ಧ ಯುವಕರು ರಸ್ತೆಗೆ ಬರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಯುವಕರು ಇದನ್ನು ಖಂಡಿಸಬೇಕು. ನಾನು ಸ್ವಾಭಿಮಾನಿ ಹಿಂದೂ. ಹಿಂದುತ್ವಕ್ಕೆ ಧಕ್ಕೆಯಾದಾಗ ಸೆಟೆದು ನಿಲ್ಲುತ್ತೇನೆ. ದೇಶದ ಅಸ್ಮಿತೆಗೆ ಧಕ್ಕೆಯಾದಾಗ ಹೋರಾಟ ಮಾಡುತ್ತೇನೆ ಎಂಬುದನ್ನು ತೋರಿಸಿಕೊಡಬೇಕು. ರಸ್ತೆಗೂ ಬನ್ನಿ, ಸಾಮಾಜಿಕ ಜಾಲತಾಣಗಳಲ್ಲೂ ಕಾಂಗ್ರೆಸ್ ನಡೆಯನ್ನು ಖಂಡಿಸಿ. ಕನ್ನಡ ಸಂಸ್ಕೃತಿ ಸಚಿವರಾಗಿದ್ದ ಬಿ.ಟಿ.ಲಲಿತಾ ನಾಯಕ್ ದೈವಾರಾಧಕರಿಗೆ ಮಾಸಾಶನ ವಿರೋಧಿಸಿದ್ದರು. ದೇವಸ್ಥಾನದಲ್ಲಿ ತೀರ್ಥ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಇದು ನಿಮ್ಮ ಮಾನಸಿಕತೆಯನ್ನು ತೋರಿಸುತ್ತದೆ. ದೈವ ನರ್ತಕ ರಿಗೆ ಮಾಸಾಶನ ಕೊಟ್ಟಾಗ ಸಮಾಜ ಅದನ್ನು ಸ್ವಾಗತಿಸಿದೆ ಎಂದು ಸಚಿವ ಸುನಿಲ್ ಕುಮಾರ್ ಮಾರ್ಮಿಕವಾಗಿ ಹೇಳಿದರು.

Published On - 1:31 pm, Tue, 8 November 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್