Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ಜಿಲ್ಲೆಯಿಂದ ವಿದ್ಯುತ್ ಖರೀದಿಗೆ ಚಿಂತನೆ: ಶೀಘ್ರದಲ್ಲೇ ಲೋಡ್​ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಬಯಲು ಸೀಮೆ ಕಡೆ ಕೂಡಾ ಸಮಸ್ಯೆ ಬಹಳ ಇದೆ ಅದನ್ನು ಸರಿಪಡಿಸಬೇಕು ಎಂಬುದು ಸರ್ಕಾರದ ಉದ್ದೇಶ. ಶೀಘ್ರದಲ್ಲೇ ಲೋಡ್​ ಶೆಡ್ಡಿಂಗ್ ಸಮಸ್ಯೆ ಸರಿಪಡಿಸುತ್ತೇವೆ. ಹೊರ ಜಿಲ್ಲೆಯಿಂದ ವಿದ್ಯುತ್ ಖರೀದಿ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಎಷ್ಟೇ ದುಬಾರಿಯಾದರೂ ವಿದ್ಯುತ್ ಖರೀದಿ ಮಾಡಲೇಬೇಕಾಗುತ್ತದೆ ಎಂದಿದ್ದಾರೆ.

ಹೊರ ಜಿಲ್ಲೆಯಿಂದ ವಿದ್ಯುತ್ ಖರೀದಿಗೆ ಚಿಂತನೆ: ಶೀಘ್ರದಲ್ಲೇ ಲೋಡ್​ ಶೆಡ್ಡಿಂಗ್ ಸಮಸ್ಯೆಗೆ ಪರಿಹಾರ: ಸಚಿವ ಚೆಲುವರಾಯಸ್ವಾಮಿ
ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 14, 2023 | 4:38 PM

ಉಡುಪಿ, ಅಕ್ಟೊಬರ್​​​​ 14: ವಿದ್ಯುತ್ ಉತ್ಪಾದನೆ ಕಡಿಮೆಯಾಗಿದ್ದು, ರಾಜ್ಯದಲ್ಲಿ ತುಂಬಾ ಸಮಸ್ಯೆ ಇದೆ. ಒಂದು ವಾರದ ಒಳಗೆ ಸಮಸ್ಯೆ ಬಗೆ ಹರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಬಯಲು ಸೀಮೆ ಕಡೆ ಕೂಡಾ ಸಮಸ್ಯೆ ಬಹಳ ಇದೆ ಅದನ್ನು ಸರಿಪಡಿಸಬೇಕು ಎಂಬುದು ಸರ್ಕಾರದ ಉದ್ದೇಶ. ಶೀಘ್ರದಲ್ಲೇ ಲೋಡ್​ ಶೆಡ್ಡಿಂಗ್ ಸಮಸ್ಯೆ ಸರಿಪಡಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (N chaluvaraya swamy) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ಜಿಲ್ಲೆಯಿಂದ ವಿದ್ಯುತ್ ಖರೀದಿ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ದುಬಾರಿಯಾದರೂ ವಿದ್ಯುತ್ ಖರೀದಿ ಮಾಡಲೇಬೇಕಾಗುತ್ತದೆ ಎಂದಿದ್ದಾರೆ.

ಕುಟುಂಬದವರನ್ನು ರಾಜಕೀಯ ಸ್ಪರ್ಧೆಗಿಳಿಸುವ ಬಗ್ಗೆ ಆಲೋಚನೆ ಮಾಡಿಲ್ಲ

ಸಚಿವ ಚೆಲುವರಾಯಸ್ವಾಮಿ ಪತ್ನಿಗೆ ಮಂಡ್ಯ ಎಂಪಿ ಟಿಕೆಟ್ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನನ್ನ ಕುಟುಂಬದವರನ್ನು ರಾಜಕೀಯದಲ್ಲಿ ಸ್ಪರ್ಧೆಗಿಳಿಸುವ ಬಗ್ಗೆ ಆಲೋಚನೆ ಮಾಡಿಲ್ಲ. ಅಭ್ಯರ್ಥಿ ಯಾರೆಂದು ಕಾರ್ಯಕರ್ತರು ಮತ್ತು ಕಾಂಗ್ರೆಸ್ ಪಕ್ಷ ತೀರ್ಮಾನ ಮಾಡುತ್ತದೆ. ಸ್ನೇಹಿತರು ಪಕ್ಷದ ಮುಖಂಡರುಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ನಡೆಯುತ್ತಿರುವ ಕಮಿಷನ್​​ ಲಾಬಿಗಳು ಬಹಿರಂಗ: ಬಸವರಾಜ ಬೊಮ್ಮಾಯಿ

ಮಂತ್ರಿಗಳ ಕುಟುಂಬದಲ್ಲೇ ಒಬ್ಬರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದಾರೆ. ಅವರ ಅಭಿಪ್ರಾಯ ತಪ್ಪು ಎಂದು ನಾನು ಹೇಳಕ್ಕಾಗಲ್ಲ. ಕುಟುಂಬದ ಒಬ್ಬರಿಗೆ ಅಭ್ಯರ್ಥಿತನ ಕೊಡಬೇಕು ಎಂದು ಅವರ ಅಭಿಪ್ರಾಯ ನಾನು ಈವರೆಗೆ ಆಲೋಚನೆ ಮಾಡಿಲ್ಲ. ಹೈಕಮಾಂಡ್ ಪಕ್ಷದ ಲೀಡರ್​ಗಳು ಎಲ್ಲರೂ ಕುಳಿತು ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ.

ಗುಜರಿ ವಿಲೇವಾರಿ ವಿಚಾರದಲ್ಲಿ ಗೋಲ್ ಮಾಲ್

ಬ್ರಹ್ಮಾವರ ಶುಗರ್ ಫ್ಯಾಕ್ಟರಿ ಗುಜುರಿ ಗೋಲ್ ಮಾಲ್​​ ವಿಚಾರವಾಗಿ ಮಾತನಾಡಿ, ಗುಜರಿ ವಿಲೇವಾರಿ ವಿಚಾರದಲ್ಲಿ ಗೋಲ್ ಮಾಲ್ ನಡೆದಿರುವೆ ಎಂಬ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಗಮನಕ್ಕೆ ತರಲಾಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಬ್ರಹ್ಮಾವರದಲ್ಲಿ ಹೊಸ ಶುಗರ್ ಫ್ಯಾಕ್ಟರಿ ಆರಂಭದ ಬಗ್ಗೆ ಚರ್ಚೆ ಮಾಡುತ್ತೇವೆ. ಪ್ರಕರಣ ತನಿಖೆಗೆ ಆದೇಶ ಮಾಡುವ ಹಂತದಲ್ಲಿ ಇದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಇದನ್ನೂ ಓದಿ: ಕಲಾವಿದರ ಬಳಿ ಕಮಿಷನ್ ಕೇಳಿದವರು ಲಕ್ವಾ ಹೊಡೆದು ಸಾಯುತ್ತಾರೆ: ಕೆಎಸ್ ಈಶ್ವರಪ್ಪ

ರಾಜ್ಯದ ಎಲ್ಲಾ ಜಿಲ್ಲೆಯಿಂದ 15 ಕಡೆ ಕೃಷಿ ಕಾಲೇಜಿಗೆ ಬೇಡಿಕೆ ಇದೆ. ಕೃಷಿ ಕಾಲೇಜಿಗೆ ಸಂಶೋಧನಾ ಕೇಂದ್ರ, ಜಮೀನು -ಕಟ್ಟಡ ಎಲ್ಲವೂ ಉಡುಪಿಯಲ್ಲಿದೆ. ಕೃಷಿ ಕಾಲೇಜಿಗೆ ಉಡುಪಿ ಉತ್ತಮ ಜಿಲ್ಲೆ ಎಂದು ಅನಿಸುತ್ತಿದೆ. ಕೃಷಿ ವಿವಿ ಮತ್ತು ಸರ್ಕಾರದ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೈತ್ರಿ ಬಗ್ಗೆ ಸಚಿವ ಚಲುವರಾಯಸ್ವಾಮಿ ಲೇವಡಿ

ಬಿಜೆಪಿ-ಜೆಡಿಎಸ್​ ಮೈತ್ರಿ ಬಗ್ಗೆ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದು, ಬಿಜೆಪಿ, ಜೆಡಿಎಸ್​ನವರಿಗೆ ಈ ಹಿಂದಿನ ಒಂದು ಕಹಿ ಅನುಭವವಾಗಿದೆ. ಕಾಂಗ್ರೆಸ್, ಜೆಡಿಎಸ್ ಈ ಹಿಂದೆ ದೋಸ್ತಿ ಮಾಡಿಕೊಂಡಿದ್ದೆವು. ಬಿಜೆಪಿಗೆ ಈಗ ಒಂದು ಹೊಸ ಅನುಭವ. ದೇವೇಗೌಡರ ಮಾತನ್ನು ಕೇಳದೆ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಪಕ್ಷದ ಭಿನ್ನಾಭಿಪ್ರಾಯ ಬದಿಗೊತ್ತಿ ಮೈತ್ರಿ ಮಾಡಿಕೊಂಡಿದ್ದಾರೆ. ಈ ಮೈತ್ರಿಯಿಂದ ಬಿಜೆಪಿ ಹಾಗೂ ಜೆಡಿಎಸ್​ಗೆ ಉಪಯೋಗ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಸೀಟ್ ಗೆಲ್ಲಲಿದೆ. ಉಳಿದ 8ರಲ್ಲಿ ಯಾರಿಗೆ ಎಷ್ಟು ಎಂದು ಅವರೇ ಲೆಕ್ಕ ಹಾಕಿಕೊಳ್ಳಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ