ದೇವರ ನಾಡು ಉಡುಪಿಯಲ್ಲಿಯೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕುಕೃತ್ಯವೆಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪರಾರಿ

ಉಡುಪಿಯ ಕುಂದಾಪುರ ತಾಲೂಕಿನ ಅಮಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಆತ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಬ್ಲಾಕ್ ಮೈಲ್ ಮಾಡುತ್ತಿದ್ದ.

ದೇವರ ನಾಡು ಉಡುಪಿಯಲ್ಲಿಯೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕುಕೃತ್ಯವೆಸಗಿ ವಿಡಿಯೋ ಮಾಡುತ್ತಿದ್ದ ಕಾಮುಕ ಪರಾರಿ
ಶ್ರೇಯಸ್ ನಾಯ್ಕ
Follow us
| Updated By: ಆಯೇಷಾ ಬಾನು

Updated on:Jun 03, 2024 | 11:52 AM

ಉಡುಪಿ, ಜೂನ್.02: ಇತ್ತೀಚೆಗೆ ಇಡೀ ರಾಜ್ಯ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಪಾತ್ರವಾದ ಲೈಂಗಿಕ ಕಿರುಕುಳ ಪ್ರಕರಣವೊಂದು ನಡೆದಿತ್ತು. ಅದೇ ರೀತಿ ಈಗ ಉಡುಪಿ ಜಿಲ್ಲೆಯಲ್ಲೂ ಅಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಡುಪಿ (Udupi) ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್​ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ತಾನು ನೀಡುತ್ತಿದ್ದ ಕಿರುಕುಳ ಪ್ರಸಂಗಗಳನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ಶ್ರೇಯಸ್ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

ಇದನ್ನೂ ಓದಿ:  ಪ್ರಜ್ವಲ್‌ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್​ಗೂ ಮುನ್ನ ಎಸ್​ಐಟಿ ಮೆಗಾ ಪ್ಲಾನ್

ಇನ್ನು ಮತ್ತೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಾ.ರಾಬರ್ಟ್ ರೆಬೆಲ್ಲೋ ಅವರನ್ನು ತಕ್ಷಣದಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ. ಹಾಗೂ ಡಾ.ರಾಬರ್ಟ್ ರೆಬೆಲ್ಲೊ ತಕ್ಷಣವೇ ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಬೆಂಗಳೂರು ಇವರಿಗೆ ವರದಿ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:09 am, Sun, 2 June 24

ತಾಜಾ ಸುದ್ದಿ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!