ಉಡುಪಿ, ಜೂನ್.02: ಇತ್ತೀಚೆಗೆ ಇಡೀ ರಾಜ್ಯ ದೇಶ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಖ್ಯಾತಿಗೆ ಪಾತ್ರವಾದ ಲೈಂಗಿಕ ಕಿರುಕುಳ ಪ್ರಕರಣವೊಂದು ನಡೆದಿತ್ತು. ಅದೇ ರೀತಿ ಈಗ ಉಡುಪಿ ಜಿಲ್ಲೆಯಲ್ಲೂ ಅಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಡುಪಿ (Udupi) ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.
ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ತಾನು ನೀಡುತ್ತಿದ್ದ ಕಿರುಕುಳ ಪ್ರಸಂಗಗಳನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ಶ್ರೇಯಸ್ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಮೊಂಡಾಟ: ಹಾಸನ ಲೋಕಸಭೆ ರಿಸಲ್ಟ್ಗೂ ಮುನ್ನ ಎಸ್ಐಟಿ ಮೆಗಾ ಪ್ಲಾನ್
ಇನ್ನು ಮತ್ತೊಂದೆಡೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬಲ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ವೈದ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪವಿದ್ದು, ಮಹಿಳಾ ಸಹೋದ್ಯೋಗಿ ನೀಡಿದ ದೂರಿನ ಮೇರೆಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ.ರಾಬರ್ಟ್ ರೆಬೆಲ್ಲೋ ಅವರನ್ನು ತಕ್ಷಣದಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಆದೇಶಿಸಿದ್ದಾರೆ. ಹಾಗೂ ಡಾ.ರಾಬರ್ಟ್ ರೆಬೆಲ್ಲೊ ತಕ್ಷಣವೇ ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಬೆಂಗಳೂರು ಇವರಿಗೆ ವರದಿ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:09 am, Sun, 2 June 24