ಸಿದ್ದರಾಮಯ್ಯ ಸಾಲುಸಾಲು 7 ಬಾರಿ ಪಕ್ಷ ಬದಲಿಸಿದ್ದಾರೆ, ನನ್ನ ತಂದೆ ತಮ್ಮ ಹಣದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರು -ಪ್ರಮೋದ್ ಮಧ್ವರಾಜ್

ಉಡುಪಿ ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಇವರು ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. -ಪ್ರಮೋದ್ ಮಧ್ವರಾಜ್

ಸಿದ್ದರಾಮಯ್ಯ ಸಾಲುಸಾಲು 7 ಬಾರಿ ಪಕ್ಷ ಬದಲಿಸಿದ್ದಾರೆ, ನನ್ನ ತಂದೆ ತಮ್ಮ ಹಣದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರು -ಪ್ರಮೋದ್ ಮಧ್ವರಾಜ್
ಪ್ರಮೋದ್ ಮಧ್ವರಾಜ್
Follow us
TV9 Web
| Updated By: ಆಯೇಷಾ ಬಾನು

Updated on: Jan 27, 2023 | 1:37 PM

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಪ್ರಮೋದ್ ಮಧ್ವರಾಜ್(Pramod Madhwaraj) ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. ನಾನು ಹುಟ್ಟಿನಿಂದ ಕಾಂಗ್ರೆಸ್ ಈಗ ಬಿಜೆಪಿ ಸೇರಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪ್ರಮೋದ್ ಮಧುರಾಜ್ ಅವರನ್ನು ಡಿಕೆ ಶಿವಕುಮಾರ್(DK Shivakumar) ಹಾಗೂ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ಗೆ ಪ್ರಮೋದ್ ಮಧ್ವರಾಜ್​ ತಿರುಗೇಟು ನಿಡಿದ್ದಾರೆ.

ಸಿದ್ದರಾಮಯ್ಯ 1978 ರಲ್ಲಿ ರೈತಸಂಘದಲ್ಲಿದ್ದರು. 1983ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು. ಬೇರೆ ಪಕ್ಷದಿಂದ ಕಾಂಗ್ರೆಸ್​ಗೆ ಬರಬೇಡಿ ಎಂದು ಘೋಷಿಸಲಿ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ಗೆ ಮಧ್ವರಾಜ್ ಸವಾಲು ಹಾಕಿದ್ದಾರೆ.

ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ. ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ. ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು? ಸಿದ್ದರಾಮಯ್ಯ ವಿರುದ್ಧ ಕೆಟ್ಟ ಮಾತನಾಡಲು ಎಲ್ಲರಿಗೂ ಬರುತ್ತದೆ. ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Congress Vs BJP: ಇವತ್ತೇ ಲೋಕಸಭಾ ಚುನಾವಣೆಯಾದರೆ ಯಾರು ಗೆಲ್ತಾರೆ? ಚರ್ಚೆಯಾಗ್ತಿದೆ ರಾಜಕೀಯ ಸಮೀಕ್ಷೆಯ ವಿವರ

ಉಡುಪಿ ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್​ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ ಖಂಡಿಸುತ್ತೇನೆ. ಜೆಡಿಎಸ್ ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ನಿಂದ ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದರು.

ಲಂಚದ ಹಣದಿಂದ ಇನ್ನೊಬ್ರ ಕಿಸೆಯಿಂದ ಕಿತ್ಕೊಂಡು ಪಕ್ಷ ಕಟ್ಟಿಲ್ಲ

ಇದೇ ವೇಳೆ ಡಿಕೆ ಶಿವಕುಮಾರ್ ವಿರುದ್ಧ ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಮಾಡಿದ್ದಾರೆ. ನನ್ನ ತಂದೆ ಸ್ವಂತ ಹಣದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ. ಸಂಪೂರ್ಣ ನೆಲಕ್ಕಚ್ಚಿದ ಕಾಂಗ್ರೆಸನ್ನು ನಾನು ಪುನರುಜ್ಜೀವನ ಮಾಡಿದ್ದೆ. ಲಂಚದ ಹಣದಿಂದ ಇನ್ನೊಬ್ರ ಕಿಸೆಯಿಂದ ಕಿತ್ಕೊಂಡು ಪಕ್ಷ ಕಟ್ಟಿಲ್ಲ. ಸ್ವಜನ ಪಕ್ಷಪಾತ, ಲಂಚ ಪಡೆಯಲು ಪಕ್ಷವನ್ನು ಉಪಯೋಗಿಸಿಲ್ಲ. ಎಸ್. ಎಂ ಕೆ ಪದ್ಮಭೂಷಣ ಪಡೆದಿದ್ದಾರೆ ನನ್ನ ಅಭಿನಂದನೆ ಇದೆ. ಡಿಕೆಎಸ್ ಎಂಕೆಯನ್ನು ಯಾಕೆ ಟೀಕಿಸಿಲ್ಲ? ಕೃಷ್ಣ ಮೊಮ್ಮಗನಿಗೆ ಮಗಳನ್ನು ಕೊಟ್ಟಾಗ ಪಕ್ಷಾಂತರ ನೆನಪಾಗಿಲ್ವಾ? 2023 ರ ಚುನಾವಣೆಯಲ್ಲಿ ಬಿಜೆಪಿ ಐದಕ್ಕೈದು ಸ್ಥಾನ ಗೆಲ್ಲುತ್ತದೆ. ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಪ್ರಮೋದ್ ಜೊತೆ ಒಬ್ಬನೂ ಸೇರಿಲ್ಲ ಎಂದಿದ್ದಾರೆ. ಸಂಘರ್ಷದ ಸಂದರ್ಭದಲ್ಲಿ ಸೇರ್ಪಡೆ ಮಾಡಿಲ್ಲ. ಚುನಾವಣೆ ಹತ್ತಿರವಾಗುವವರೆಗೆ ಕಾಯಿರಿ. ಈಗಲೇ ಕಾರ್ಯಕರ್ತರಿಗೆ ಅಭಿನಂದನೆ ಕೊಡಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ