ಜಿಲ್ಲಾಡಳಿತ ನಿರ್ಬಂಧ ನಡುವೆಯೂ ಗಂಗೊಳ್ಳಿಯಲ್ಲಿ ಮುತಾಲಿಕ್ ಪ್ರತ್ಯಕ್ಷ; ಬಿಜೆಪಿ ಸರ್ಕಾರವೇ ನಿರ್ಬಂಧ ಹೇರುತ್ತಿರುವುದು ಬೇಸರ ತರಿಸಿದೆ ಎಂದ್ರು
ಬಿಜೆಪಿ ಸರ್ಕಾರವೇ ನಿರ್ಬಂಧ ಹೇರುತ್ತಿರುವುದು ಬೇಸರ ತರಿಸಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ಗೆ ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಮುತಾಲಿಕ್ ಪ್ರತ್ಯಕ್ಷರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಇಂದಿನ ಗಂಗೊಳ್ಳಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದ್ರೆ ನಿನ್ನೆ ರಾತ್ರಿಯೇ ಗಂಗೊಳ್ಳಿಗೆ ಆಗಮಿಸಿ ಮುತಾಲಿಕ್ ತೆರಳಿದ್ದಾರೆ. ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ಜತೆ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರವೇ ನಿರ್ಬಂಧ ಹೇರುತ್ತಿರುವುದು ಬೇಸರ ತರಿಸಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಗುರುವಾರ ಆದೇಶ ಹೊರಡಿಸಿದ್ದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕರ ಹಿತ ಕಾಪಾಡುವ ದೃಷ್ಟಿಯಿಂದ ಏಪ್ರಿಲ್ 15 ರಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಸಿ.ಆರ್.ಪಿ.ಸಿ ಸೆಕ್ಷನ್ 133, 143 ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದರು.
ಕುಂದಾಪುರ ಸಮೀಪದ ಗಂಗೊಳ್ಳಿ ಪೇಟೆಯಲ್ಲಿ ಮುತಾಲಿಕ್ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಭಾಷಣ ಮಾಡಿ ಕೋಮುಗಲಭೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ತಿಳಿಸಿದ್ದರು. ಹೀಗಾಗಿ ಉಡುಪಿ ಜಿಲ್ಲೆಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಆದ್ರೆ ಪ್ರಮೋದ್ ಮುತಾಲಿಕ್ಗೆ ಜಿಲ್ಲಾಡಳಿತ ನಿರ್ಬಂಧ ಹಿನ್ನೆಲೆ ಒಂದು ದಿನ ಮೊದಲೇ ಗಂಗೊಳ್ಳಿಯಲ್ಲಿ ಮುತಾಲಿಕ್ ಪ್ರತ್ಯಕ್ಷರಾಗಿದ್ದಾರೆ.
ಇದನ್ನೂ ಓದಿ: Woman Scientist: ನಿಮ್ಮ ಟೈಮ್ಲೈನ್; ‘ಕೋಪ, ರೋಷ ನನ್ನನ್ನು ಬಡಿದೆಬ್ಬಿಸಿತು’ ಮೂಷಕ ತಜ್ಞೆ ಡಾ. ಶಕುಂತಲಾ ಶ್ರೀಧರ
Skin Care Tips: ಬೇಸಿಗೆಯಲ್ಲಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
Published On - 10:07 am, Fri, 15 April 22