AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪಕ್ಷ ನಾಯಕ ಹುದ್ದೆಗೆ ಆರ್ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್ ವಾಗ್ದಾಳಿ

ಮಂಗಳೂರು ಪಬ್ ದಾಳಿಕೋರರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ಬಗ್ಗೆ ಮಂಗಳೂರು, ಉಡುಪಿಯಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ ತಣ್ಣಗಾಗಿಲ್ಲ. ಇದೀಗ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಶೋಕ್ ವಿರುದ್ಧ ಕೆಂಡಕಾರಿದ್ದಾರೆ. ಅಶೋಕ್ ಪ್ರತಿಪಕ್ಷ ನಾಯಕರಾಗಲು ನಾಲಾಯಕ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಹುದ್ದೆಗೆ ಆರ್ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್ ವಾಗ್ದಾಳಿ
ಪ್ರಮೋದ್ ಮುತಾಲಿಕ್ & ಆರ್ ಅಶೋಕ
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on: Feb 23, 2024 | 2:23 PM

Share

ಉಡುಪಿ, ಫೆಬ್ರವರಿ 23: ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ (R Ashoka) ನಾಲಾಯಕ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಶುಕ್ರವಾರ ವಾಗ್ದಾಳಿ ನಡೆಸಿದರು. ಇದರೊಂದಿಗೆ, ಮಂಗಳೂರು ಪಬ್ ದಾಳಿಕೊರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಅಶೋಕ್ ಹೇಳಿಕೆ ಕುರಿತ ಹಿಂದೂ ಸಂಘಟನೆಗಳ ಮುನಿಸು ಇನ್ನೂ ತಣಿದಿಲ್ಲ ಎಂಬುದು ಸ್ಪಷ್ಟವಾಗಿದೆ. ಪಬ್ ದಾಳಿ ಮಾಡಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಅಶೋಕ್ ಹೇಳಿದ್ದರು. ಆದರೆ, ಮಂಗಳೂರು ಪಬ್ ದಾಳಿ (Mangaluru Pub Attack) ಮಾಡಿದ್ದು ಬಜರಂಗದಳ ಅಲ್ಲ, ಶ್ರೀರಾಮ ಸೇನೆ ಎಂದು ಸಾಮಾಜಿ ಜಾಲತಾಣಗಳಲ್ಲಿ ಶ್ರೀರಾಮ ಸೇನೆ ಸಂದೇಶ ಪ್ರಕಟಿಸಿದೆ.

ಮಂಗಳೂರು ಪಬ್ ದಾಳಿ ನಡೆಸಿದ್ದು ಶ್ರೀರಾಮ ಸೇನೆ ಕಾರ್ಯಕರ್ತರು. ಆ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಯಾವುದೇ ಗುಂಡಾ ಕಾಯ್ದೆ ಹಾಕಿರಲಿಲ್ಲ. ಆದರೆ, ಹಿಂದೂ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಥಮ ಬಾರಿ ಪ್ರಕರಣ ದಾಖಲಿಸಿದವರೇ ಆರ್. ಅಶೋಕ್. ಕಾಂಗ್ರೆಸ್​ನವರು ಯಾವತ್ತೂ ಹಿಂದೂ ಕಾರ್ಯಕರ್ತರ ಮೇಲೆ ಗುಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಲ್ಲ. ಈ ವಿಚಾರವನ್ನು ನಾನೇ ಆರ್ ಅಶೋಕ್​​ಗೆ ಹೇಳಿದ್ದೆ. ಅಶೋಕ್ ನಂತರ ಕಾಂಗ್ರೆಸ್​​​ನವರು ಕೂಡ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಮುತಾಲಿಕ್ ಹೇಳಿದರು.

ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು ಹಿಂದೂ ಕಾರ್ಯಕರ್ತರಿಗೆ ಆರ್ ಅಶೋಕ್ ಕೊಟ್ಟ ಕೊಡುಗೆ. ಅವರು ಗೃಹ ಸಚಿವರಾಗಿದ್ದಾಗ ಪಿಎಫ್​ಐ ಗಲಾಟೆ ಮಾಡಿತ್ತು. ಆದರೆ ಆ ಬಗ್ಗೆ ಗೃಹ ಸಚಿವರಾಗಿ ಅಶೋಕ್ ಒಂದೇ ಒಂದು ಪತ್ರ ಕೇಂದ್ರಕ್ಕೆ ಬರೆದಿರಲಿಲ್ಲ ಎಂದು ಮುತಾಲಿಕ್ ಕಿಡಿ ಕಾರಿದರು.

ಆರ್ ಅಶೋಕ್ ಮತ್ತು ಜಮೀರ್ ಜೋಡಿಗಳು: ಮುತಾಲಿಕ್

ಚಾಮರಾಜಪೇಟೆಯಲ್ಲಿ ಗಣಪತಿ ಇಡದೇ ಇರಲು ಕಾರಣವೇ ಆರ್ ಅಶೋಕ್. ಅವರು ಮತ್ತು ಜಮೀರ್ ಅಹ್ಮದ್ ಜೋಡಿಗಳು. ಸರಿಯಾಗಿ ವಾದಮಂಡನೆ ಮಾಡದೆ ಸಹಕಾರ ಕೊಡದಿರುವುದರಿಂದ ಹೀಗಾಗಿದೆ. ಆರ್ ಅಶೋಕ್ ತಮ್ಮ ಬಾಯಿಯಿಂದಲೇ ಬಣ್ಣ ಬಯಲು ಮಾಡಿಕೊಂಡಿದ್ದಾರೆ. ವಿಪಕ್ಷ ನಾಯಕನಾಗಲು ಆರ್ ಅಶೋಕ್ ಅಯೋಗ್ಯ ಎಂದು ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿದ್ದು ನಿಜ: ಹಿಂದೂ ಮುಖಂಡನ ಪಕ್ಷ ಸೇರ್ಪಡೆ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಬಿಜೆಪಿ ರಾಜ್ಯಾಧ್ಯಕ್ಷರು ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕ ಹುದ್ದೆಯಿಂದ ತೆಗೆದು ಹಾಕಬೇಕು. ಮಂಡ್ಯದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನ ಗೆಲ್ಲದಿರಲು ಆರ್ ಅಶೋಕ್ ಕಾರಣ. ಕರ್ನಾಟಕದ ಯಾವ ಜಿಲ್ಲೆಯಲ್ಲೂ ಆರ್ ಅಶೋಕ್ ಹಿಂದೂಗಳಿಗೆ ಬೆಂಬಲ ಕೊಟ್ಟಿಲ್ಲ. ಈ ವಿಚಾರವನ್ನು ಖಂಡಿಸುತ್ತೇನೆ, ವಿರೋಧಿಸುತ್ತೇನೆ. ಅವರನ್ನು ಅಮಾನತು ಮಾಡಲು ಪಕ್ಷಕ್ಕೆ ಒತ್ತಾಯ ಮಾಡುತ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?