ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಪರ ಸಂಘಟನೆಯಿಂದ ದಾಳಿ

ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಆದರೆ, ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶ ಇದೆ. ಮತಾಂತರಿಗಳಿಗೆ ಕೊವಿಡ್ ನಿಯಮ ಪಾಲನೆ ಇಲ್ಲವೇ? ಕರಾವಳಿ ಜಿಲ್ಲೆಗಳಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ: ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ

ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿ ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ; ಹಿಂದೂ ಪರ ಸಂಘಟನೆಯಿಂದ ದಾಳಿ
ಮತಾಂತರ ಕೇಂದ್ರದಲ್ಲಿ ಕಂಡುಬಂದ ದೃಶ್ಯ
Follow us
TV9 Web
| Updated By: Skanda

Updated on: Sep 10, 2021 | 1:49 PM

ಉಡುಪಿ: ಮಕ್ಕಳು, ಮಹಿಳೆಯರನ್ನು ಕೂಡಿಹಾಕಿಕೊಂಡು ಅಕ್ರಮವಾಗಿ ಮತಾಂತರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಮಂತಾತರ ಕೇಂದ್ರದ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದಲ್ಲಿರುವ ಪ್ರಗತಿ ಸೆಂಟರ್ ಮೇಲೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದು, ಇಲ್ಲಿ ಹಲವಾರು ವರ್ಷಗಳಿಂದ ಮತಾಂತರ ನಡೆಯುತ್ತಿದೆ. ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ ಎಂದು ಆರೋಪಿಸಿದ್ದಾರೆ.

ಉಡುಪಿಯಲ್ಲಿ ಹಲವಾರು ವರ್ಷಗಳಿಂದ ಮತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ. ಕಳೆದ ಹತ್ತು ವರ್ಷಗಳಿಂದ ಮತಾಂತರ ಕೆಲಸದಲ್ಲಿ ನಿರತವಾಗಿರುವ ಪ್ರಗತಿ ಸೆಂಟರ್ ಸಂಪೂರ್ಣ ಅಕ್ರಮವಾಗಿದ್ದು,​ ಯಾವುದೇ ಅನುಮತಿ ಪಡೆಯದೇ ಇದನ್ನು ನಡೆಸಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಅಕ್ರಮ ಮತಾಂತರ ಕೇಂದ್ರಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನುಗ್ಗಿದ ಕೂಡಲೇ ಪರಿಸ್ಥಿತಿ ಬಿಗಡಾಯಿಸಿದ್ದು, ಕೇಂದ್ರದಲ್ಲಿದ್ದ ಪ್ರಾರ್ಥನಾನಿರತರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಸಂಘರ್ಷಕ್ಕೆ ಕಾರಣವಾಗಿದೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಉಡುಪಿ ಜಿಲ್ಲೆಯ ಕುಕ್ಕುಂದೂರು ನಕ್ರೆ ಆನಂದಿ ಮೈದಾನದಲ್ಲಿರುವ ಸದರಿ ಕೇಂದ್ರದಲ್ಲಿ ಅನೇಕ ಸಮಯದಿಂದ ಇಂತಹ ಚಟುವಟಿಕೆಗಳು ನಡೆಯುತ್ತಿವೆ. ಬೆನಡಿಕ್ಟ್ ನೇತೃತ್ವದಲ್ಲಿ ಮತಾಂತರ ಕಾರ್ಯ ನಡೆಯುತ್ತಿದೆ. ಯಾವುದೇ ಅನುಮತಿ ಪಡೆಯದೇ ಅಕ್ರಮವಾಗಿ ಪ್ರಾರ್ಥನಾಲಯ ನಡೆಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.

UDUPI CONVERSION

ಕಾರ್ಯಕರ್ತರು ಹಾಗೂ ಪ್ರಾರ್ಥನಾನಿರತರ ನಡುವೆ ವಾಗ್ವಾದ

ಆರಂಭದಿಂದಲೂ ಹಿಂದೂ ಜಾಗರಣ ವೇದಿಕೆ ಈ ಬಗ್ಗೆ ಹೋರಾಟ ನಡೆಸುತ್ತಲೇ ಇದೆ. ಸೂಕ್ತ ಮಾಹಿತಿಗಳು ಇದ್ದ ಹಿನ್ನೆಲೆಯಲ್ಲಿ ಈಗ ದಾಳಿ ಮಾಡಿದ್ದೇವೆ. ಪೊಲೀಸರು ಮತಾಂತರ ಕೇಂದ್ರಕ್ಕೆ ಹೋಗಿ ವಿಚಾರಿಸಿದ್ದಾರೆ. ಅದ್ದೂರಿ ಗಣೇಶೋತ್ಸವಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಆದರೆ, ಪ್ರಾರ್ಥನೆಯ ಹೆಸರಿನಲ್ಲಿ ಮತಾಂತರಕ್ಕೆ ಅವಕಾಶ ಇದೆ. ಮತಾಂತರಿಗಳಿಗೆ ಕೊವಿಡ್ ನಿಯಮ ಪಾಲನೆ ಇಲ್ಲವೇ? ಕರಾವಳಿ ಜಿಲ್ಲೆಗಳಲ್ಲಿ ಹಲವಾರು ಮತಾಂತರ ಕೇಂದ್ರಗಳಿವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾವು ದಾಳಿ ಮುಂದುವರಿಸುತ್ತೇವೆ. ಪರಿಸ್ಥಿತಿ ಹದಗೆಡಲು ಅವಕಾಶ ಕೊಡಬೇಡಿ ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ಇದೇ ವೇಳೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ 

ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳಿಗೆ ಮತಾಂತರವಾಗುವ ದಲಿತರಿಗೆ ಮೀಸಲಾತಿ ಸೌಲಭ್ಯಗಳಿಲ್ಲ: ರವಿಶಂಕರ್ ಪ್ರಸಾದ್

(Pro Hindu leaders attack on Christian Missionary converting Hindu Women and Children Illegally in Udupi)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್