AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Press Meet: ಭಾರತವನ್ನು ಒಡೆಯುತ್ತಿರುವುದು ಬಿಜೆಪಿ, ಆರ್​ಎಸ್​ಎಸ್​, ರಾಹುಲ್ ಗಾಂಧಿ ವಾಗ್ದಾಳಿ

ಭಾರತ್ ಐಕ್ಯತಾ ಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿಯಾಗುತ್ತಿದ್ದಾರೆ. ಜೆಡಿಎಸ್ ಜೊತೆ ಒಪ್ಪಂದ ಬಗ್ಗೆ ರಾಜ್ಯ ನಾಯಕ ಜತೆ ಚರ್ಚಿಸಬೇಕು. -ರಾಹುಲ್ ಗಾಂಧಿ

Rahul Gandhi Press Meet: ಭಾರತವನ್ನು ಒಡೆಯುತ್ತಿರುವುದು ಬಿಜೆಪಿ, ಆರ್​ಎಸ್​ಎಸ್​, ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
TV9 Web
| Updated By: Digi Tech Desk|

Updated on:Oct 08, 2022 | 3:09 PM

Share

ತುಮಕೂರು : ಭಾರತ್ ಜೋಡೋ ಯಾತ್ರೆ(Bharat Jodo Yatra) ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸುದ್ದಿಗೋಷ್ಠಿ ನಡೆಸಿದ್ದಾರೆ. ತುಮಕೂರು ಜಿಲ್ಲೆ ತುರುವೇಕೆರೆಯ ಕಾಸ್ಮೋ ಪಾಲಿಟನ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿಜೆಪಿ, RSS ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಭಾರತವನ್ನು ಒಡೆಯುತ್ತಿರುವುದು ಬಿಜೆಪಿ, ಆರ್ಎಸ್ಎಸ್ ಎಂದು ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ಸಿಗರು ಸೇರಿದಂತೆ ಹಲವರ ಬಲಿದಾನವಾಗಿದೆ. ಸಾವರ್ಕರ್ ಸೇರಿದಂತೆ ಹಲವರು ಬ್ರಿಟಿಷರ ಜೊತೆ ನಿಂತಿದ್ದರು. ದೇಶದಲ್ಲಿ ಕೃಷಿ ಕ್ರಾಂತಿ, ಕೈಗಾರಿಕಾ ಕ್ರಾಂತಿ ಮಾಡಿದವರು ನಾವು. ಆದರೆ ಬಿಜೆಪಿ ಜನರ ನಡುವೆ ದ್ವೇಷ ಬಿತ್ತಿ ದೇಶ ಒಡೆಯುತ್ತಿದೆ. ಅದನ್ನು ಸರಿಪಡಿಸಲು ನಾವು ಐಕ್ಯತಾ ಯಾತ್ರೆ ಮಾಡುತ್ತಿದ್ದೇವೆ. ಭಾರತ್ ಐಕ್ಯತಾ ಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿಯಾಗುತ್ತಿದ್ದಾರೆ. ಜೆಡಿಎಸ್ ಜೊತೆ ಒಪ್ಪಂದ ಬಗ್ಗೆ ರಾಜ್ಯ ನಾಯಕ ಜತೆ ಚರ್ಚಿಸಬೇಕು. ಕರ್ನಾಟಕದಲ್ಲಿ JDS ಜೊತೆ ಹೊಂದಾಣಿಕೆ ಅಗತ್ಯವೇ ಬೀಳುವುದಿಲ್ಲ. ಚುನಾವಣೆಯಲ್ಲಿ ಯಾರ ಸಹಾಯವೂ ಇಲ್ಲದೆ ನಾವು ಗೆಲ್ಲುತ್ತೇವೆ ಎಂದರು.

ನರೇಂದ್ರ ಮೋದಿ ಈವರೆಗೆ ಒಂದೇ ಒಂದು ಸುದ್ದಿಗೋಷ್ಠಿ ಮಾಡಿಲ್ಲ

ರಾಜ್ಯದಲ್ಲಿ 40% ಸರ್ಕಾರದಿಂದ ಜನರ ಕಷ್ಟ ಅನುಭವಿಸುತ್ತಿದ್ದಾರೆ. ರೈತರು, ಬಡವರು, ನಿರುದ್ಯೋಗಿಗಳ ಕಷ್ಟ ಕೇಳುವವರೇ ಇಲ್ಲ. ಹೀಗಾಗಿ ಕರ್ನಾಟಕ ರಾಜ್ಯದ ಜನ ಬದಲಾವಣೆ ಬಯಸುತ್ತಿದ್ದಾರೆ. ನನ್ನನ್ನು ಅಪ್ರಯೋಜಕ ಎಂದು ಬಿಂಬಿಸಲು ಭಾರತೀಯ ಜನತಾ ಪಕ್ಷ ಕೋಟಿ ಕೋಟಿ ಹಣ ಖರ್ಚು ಮಾಡ್ತಿದೆ. ಬಿಜೆಪಿ ನನ್ನನ್ನು ನಿರಂತರವಾಗಿ ಹೀಯಾಳಿಸುವ ಕೆಲಸ ಮಾಡುತ್ತಿದೆ. ನಾನು ಕೆಲಸದಲ್ಲಿ ನಂಬಿಕೆ ಇಟ್ಟವನು. ಜನರ ನಡುವೆ ಓಡಾಡುವಾಗ ಅವರ ಕಷ್ಟ ನೋವು ಅರ್ಥವಾಗುತ್ತೆ. ಭಾರತ್​ ಜೋಡೋ ಯಾತ್ರೆಯಲ್ಲಿ ಒಳ್ಳೆಯ ಅನುಭವವಾಗುತ್ತಿದೆ. ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ, ವಿಶ್ವಾಸವಿಲ್ಲ. ಬಿಜೆಪಿಯವರಿಗೆ ಪ್ರಶ್ನೆ ಕೇಳಲು ಪತ್ರಕರ್ತರಿಗೆ ಅವಕಾಶ ನೀಡಲ್ಲ. ನರೇಂದ್ರ ಮೋದಿ ಈವರೆಗೆ ಒಂದೇ ಒಂದು ಸುದ್ದಿಗೋಷ್ಠಿ ಮಾಡಿಲ್ಲ. ಆದರೆ ಕಾಂಗ್ರೆಸ್​ ಪಕ್ಷ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದೆ. ಹಾಗಾಗಿಯೇ ಸುದ್ದಿಗೋಷ್ಠಿಯಲ್ಲಿ ಅವಕಾಶ ಮಾಡಿಕೊಟ್ಟಿದೆ. ಇದನ್ನೂ ಓದಿ: ಸ್ವಂತ ಸಾಮರ್ಥ್ಯದಲ್ಲಿ 180 ಸೀಟು ಗೆದ್ದುಕೊಡಬಲ್ಲರಾದರೆ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಲಿ: ಬಸನಗೌಡ ಯತ್ನಾಳ್ 

ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಭಾಗಿಯಾಗಿದ್ದಾರೆ. ಈ ಹಿಂದೆ ಕೇರಳದಲ್ಲಿ ಮೊದಲ ಬಾರಿ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ ಇದೀಗ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

ಟಿವಿ9 ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರ

ಕಾಂಗ್ರೆಸ್ ನಲ್ಲಿ ಆಂತರಿಕ ಸಂಘರ್ಷ ಹಿನ್ನೆಲೆ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟು ಕಾಯ್ದುಕೊಳ್ಳಬೇಕು. ಭಿನ್ನಾಭಿಪ್ರಾಯ ಮರೆತು ಎಲ್ರೂ ಚುನಾವಣೆಗೆ ಕೆಲಸ ಮಾಡಲೇಬೇಕಾಗುತ್ತದೆ ಎಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಆಕ್ಸಿಜನ್ ಸಿಲಿಂಡರ್ ತರಹ ಇದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಚೆನ್ನಾಗಿದೆ. ಎಲ್ಲರ ಅಭಿಪ್ರಾಯಗಳಿಗೂ ನಾವು ಮನ್ನಣೆ ನೀಡುತ್ತೇವೆ, ನೀಡಬೇಕಾಗುತ್ತದೆ ಎಂದರು.

Published On - 1:35 pm, Sat, 8 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!