ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಪೊಲೀಸರ ಕೈಸೇರಿದ ಸಂತ್ರಸ್ಥೆ ಬ್ಲಡ್ ರಿಪೋರ್ಟ್

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಬ್ಲಡ್ ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ಈ ಕುರಿತು ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್‌ ಮಾಹಿತಿ ನೀಡಿದ್ದಾರೆ. ಹಾಗಾದರೆ ವರದಿಯಲ್ಲಿ ಏನಿದೆ ಅಂತೀರಾ? ಈ ಸ್ಟೋರಿ ಓದಿ.

ಕಾರ್ಕಳದಲ್ಲಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಪ್ರಕರಣ; ಪೊಲೀಸರ ಕೈಸೇರಿದ ಸಂತ್ರಸ್ಥೆ ಬ್ಲಡ್ ರಿಪೋರ್ಟ್
ಆರೋಪಿ ಅಲ್ತಾಫ್​, ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್‌
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 25, 2024 | 9:07 PM

ಉಡುಪಿ, ಆ.25: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಯನ್ನು ಜಿಲ್ಲೆಯ ಕಾರ್ಕಳ(Karkala) ದ ಅಲ್ತಾಫ್‌ ಎಂಬ ಯುವಕ ಭೇಟಿಗೆ ಕರೆದು ಮದ್ಯದ ಜೊತೆಗೆ ಮಾದಕ ವಸ್ತು ಮಿಶ್ರಣ ಮಾಡಿ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಬ್ಲಡ್ ರಿಪೋರ್ಟ್ ಪೊಲೀಸರ ಕೈ ಸೇರಿದ್ದು, ಈ ಕುರಿತು ಮಾತನಾಡಿದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್‌, ‘ರಕ್ತದಲ್ಲಿ ಮಾದಕ ವಸ್ತುಗಳು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಜೊತೆಗೆ ಆರೋಪಿಗಳಾದ ಅಲ್ತಾಫ್‌, ರಿಚರ್ಡ್‌ ಬ್ಲಡ್ ರಿಪೋರ್ಟ್ ನೆಗೆಟಿವ್ ಆಗಿದೆ ಎಂದರು.

ಇನ್ನು ಕಾರಿನಲ್ಲಿ ಪತ್ತೆಯಾದ ಡ್ರಗ್ಸ್ ಬಗ್ಗೆ ಪೊಲೀಸರು ಅಲ್ತಾಫ್​​ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈಗಾಗಲೇ ಯುವತಿಗೆ ಡ್ರಗ್ಸ್ ನೀಡಿದ್ದ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಕಾರಿನಲ್ಲಿ ಪತ್ತೆಯಾದ ಡ್ರಗ್ಸ್‌ ಪುಡಿಯನ್ನು FSLಗೆ ಪೊಲೀಸರು ರವಾನಿಸಲಾಗಿದೆ. ಈ ಹಿನ್ನಲೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಯಾವ ಮಾದರಿ ಡ್ರಗ್ಸ್‌ ಎಂದು ವರದಿಗಾಗಿ ಕಾಯುತ್ತಿದ್ದೇವೆ.

ಇದನ್ನೂ ಓದಿ:ಕಾರ್ಕಳ ಅತ್ಯಾಚಾರ ಪ್ರಕರಣ; ಕ್ರಿಮಿನಲ್​ಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ: ಸುನೀಲ ಕುಮಾರ, ಶಾಸಕ

ಇನ್ನು ಅಲ್ತಾಫ್ ಡ್ರಗ್ಸ್ ಪಡೆದ ಸ್ಥಳದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಂತ್ರಸ್ತ ಯುವತಿ ಜಡ್ಜ್ ಮುಂದೆ ಹೇಳಿಕೆ ಪಡೆಯುವ ಪ್ರಕ್ರಿಯೆ ಬಾಕಿಯಿದೆ. ಸಂಪೂರ್ಣ ಚೇತರಿಕೆ ಬಳಿಕ ಯುವತಿಯನ್ನು ಪೊಲೀಸರು ಕೋರ್ಟ್‌ ಮುಂದೆ ಹಾಜರುಪಡಿಸಲಿದ್ದಾರೆ. ಆದಷ್ಟು ಬೇಗ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

ಘಟನೆ ವಿವರ

ನಿನ್ನೆ(ಆ.24) ಯುವತಿಗೆ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ಥ ಯುವತಿ ತಾಯಿ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಮುಂಜಾನೆ ಅಲ್ತಾಫ್​ ಯುವತಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದು, ಅಲ್ಲಿ ಯುವತಿಗೆ ಮಾದಕ ವಸ್ತು ನೀಡಿ, ಸಂಜೆಯವರೆಗೆ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಿ, ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿತ್ತು. ಇನ್ನು ಯುವತಿಗೆ ಅಲ್ತಾಫ್​​ ಇನ್​ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ