Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಜಿಲ್ಲೆಯ ಹೆಸರಾಂತ ಸಮಾಜಸೇವಕ ನಾಟಕ ಸಂಸ್ಥೆಯ ಸಂಸ್ಥಾಪಕ ತಮ್ಮ ಪತ್ನಿಯ ಜೊತೆಗೆ ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ.‌ ಕಾಪು ತಾಲೂಕಿನ ರಂಗ ತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ. ಲೀಲಾದರ ಶೆಟ್ಟಿ(68) ಮತ್ತು ಅವರ ಪತ್ನಿ ವಸುಂದರ ಶೆಟ್ಟಿ(58) ಆತ್ಮಹತ್ಯೆಗೆ ಶರಣಾದವರು.

ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು
ಲೀಲಾಧರ ಶೆಟ್ಟಿ, ಪತ್ನಿ ವಸುಂಧರಾ ಎಲ್ ಶೆಟ್ಟಿ
Follow us
TV9 Web
| Updated By: ಆಯೇಷಾ ಬಾನು

Updated on: Dec 14, 2023 | 11:30 AM

ಉಡುಪಿ, ಡಿ.14: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ನಿವಾಸದಿಂದ 17 ವರ್ಷದ ದತ್ತು ಮಗಳು ನಾಪತ್ತೆಯಾದ ಕೆಲವೇ ಗಂಟೆಗಳ ನಂತರ, ಖ್ಯಾತ ರಂಗಭೂಮಿ ಕಲಾವಿದ (Theatre Artist), ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದ ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ (59) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಶೆಟ್ಟಿ ದಂಪತಿಗಳು ಸುಮಾರು 16 ವರ್ಷಗಳ ಹಿಂದೆ ಓರ್ವ ಬಾಲಕಿಯನ್ನು ದತ್ತು ಪಡೆದಿದ್ದರು. ಕಾಪು ತಾಲೂಕಿನ ಮಜೂರು ಗ್ರಾಮದ ಕರಂದಾಡಿ ಗ್ರಾಮದಲ್ಲಿ ವಾಸವಿದ್ದ ದಂಪತಿ ಮಂಗಳವಾರ ಮಗಳು ನಾಪತ್ತೆಯಾಗಿದ್ದರಿಂದ ತೀವ್ರ ನೊಂದುಕೊಂಡಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಡಿಸೆಂಬರ್ 12ರ ರಾತ್ರಿ 11:20 ರಿಂದ ಡಿಸೆಂಬರ್ 13 ರ ಬೆಳಗ್ಗೆ 12:30 ರ ನಡುವೆ ದಂಪತಿ ಸೀರೆ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಮತ್ತೊಂದೆಡೆ ಮೃತ ದಂಪತಿ ಮಗಳು ಕಾಣೆಯಾದ ಬಗ್ಗೆ ಮೃತ ಲೀಲಾಧರ್ ಅವರ ಸಂಬಂಧಿ ಮೋಹನ್ ಕುಮಾರ್ ಡಿ ಶೆಟ್ಟಿ ಅವರು ದೂರು ನೀಡಿದ್ದು ದೂರಿನ ಆಧಾರದ ಮೇಲೆ ಕಾಪು ಪೊಲೀಸರು ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಲ್ಲು ಹೃದಯ ಹಿಂಡುವ ಪ್ರಕರಣ, ಜೋಗಿ ಸಿನಿಮಾ ರೀತಿ ಹೆತ್ತ ತಾಯಿಯ ಹೆಣದ ಮುಂದೆ ಅಬೋಧ ಕಂದಮ್ಮ ಕಿಲಕಿಲ

ಈ ಹಿಂದೆ ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೀಲಾಧರ್ ಅವರು ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರ ಹೆಸರಾಂತ ನಾಟಕ ತಂಡವು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಮತ್ತು ಅವರು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ನಿಕಟ ಒಡನಾಟವನ್ನು ಹೊಂದಿದ್ದರು.

ಇದಲ್ಲದೇ ಕಾಪು ಬಂಟರ ಸಂಘದ ಮುಂಚೂಣಿಯಲ್ಲಿದ್ದು ಪ್ರವೀಣ ನಟ-ನಿರ್ದೇಶಕರಾಗಿ ಮನ್ನಣೆ ಗಳಿಸಿದ್ದರು. ಜಿಲ್ಲೆಯ ಹೆಸರಾಂತ ಸಮಾಜಸೇವಕ ರಂಗ ತರಂಗ ನಾಟಕ ಸಂಸ್ಥೆಯ ಸಂಸ್ಥಾಪಕರಾಗಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ