ಉಡುಪಿ: ಬೈಂದೂರು (Baindur) ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ನಿನ್ನೆ (ಅಗಸ್ಟ್ 8) ರಂದು ಕಾಲು ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಎರಡನೇ ತರಗತಿಯ ವಿದ್ಯಾರ್ಥಿನಿ (Student) ಸನ್ನಿಧಿಗಾಗಿ ( 7) ಶೋಧಕಾರ್ಯ ಮುಂದುವರಿದಿದೆ. ಅಗ್ನಿಶಾಮಕ ದಳ, ಈಜು ತಜ್ಞರಿಂದ ಶೋಧ ಕಾರ್ಯ ನಡೆಯುತ್ತಿದೆ. ಬಾಲಕಿ ಅರೆ ಶಿರೂರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾಳೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಕುರ್ಮಾ ರಾವ್ ಹಾಗೂ ಎಸಿ ರಾಜು ಭೇಟಿ ನೀಡಿದ್ದಾರೆ.
ಗ್ರಾಮಸ್ಥರು ಹಲವು ವರ್ಷಗಳಿಂದ ಸೇತುವೆಗಾಗಿ ಬೇಡಿಕೆ ಇಟ್ಟಿದ್ದಾರೆ. ಬೀಜಮಕ್ಕಿ ಪರಿಸರದಲ್ಲಿ ಹತ್ತಕ್ಕೂ ಅಧಿಕ ಕಾಲುಸಂಕಗಳು ಇವೆ. ಆದರೆ ಶಾಶ್ವತ ಸೇತುವೆಗಾಗಿ ಗ್ರಾಮಸ್ಥರು ಮನವಿ ಮಾಡಿ ಬೇಸತ್ತಿದ್ದಾರೆ.
ನಡೆದಿದ್ದೇನು?
ಉಡುಪಿ: ನಿನ್ನೆ (ಅಗಸ್ಟ್ 8) ರಂದು ಕಾಲು ಸಂಕ ದಾಟುವಾಗ ಎರಡನೇ ತರಗತಿಯ ವಿದ್ಯಾರ್ಥಿನಿ ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿತ್ತು. ಚಪ್ಪರಿಕೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ 7 ವರ್ಷದ ಸನ್ನಿಧಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ಮಕ್ಕಿಮನೆ ಪ್ರದೀಪ್ ಪೂಜಾರಿ, ಸುಮಿತ್ರಾ ದಂಪತಿ ಪುತ್ರಿ. ಬಾಲಕಿ ನಿವಾಸಕ್ಕೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಬೈಂದೂರು ತಹಶೀಲ್ದಾರ್ ಕಿರಣ್ ಗೋರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಂಪ್ಲಿ ಸೇತುವೆ ಮುಳುಗಡೆ ಹಿನ್ನಲೆ ಬಲಗೆ ಬಿದ್ದ ಮೀನುಗಳು: ಕಂಪ್ಲಿ ಸೇತುವೆ ಮುಳುಗಡೆಯಾದ ಹಿನ್ನೆಲೆ ದೊಡ್ಡ ದೊಡ್ಡ ಮೀನುಗಳು ಬಲಗೆ ಬಿದ್ದಿವೆ. ಮೀನುಗಾರರು ಸೇತುವೆ ಪಕ್ಕದ ನೀರಿನಲ್ಲಿ ಬಲೆ ಹಾಕಿದ್ದರು. ದೊಡ್ಡ ದೊಡ್ಡ ಮೀನು ಕಂಡು ಮೀನುಗಾರರು ಖುಷಿಯಾಗಿದ್ದಾರೆ.
Published On - 3:18 pm, Tue, 9 August 22