ಭವಿಷ್ಯದ ದೃಷ್ಟಿಯಿಂದ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿ; ಮುಸ್ಲಿಂ ಧರ್ಮಗುರುಗಳಿಂದ ಶಿಕ್ಷಣದ ಬಗ್ಗೆ ಬುದ್ಧಿಮಾತು
ದೂರದೃಷ್ಟಿ ಇಟ್ಟುಕೊಂಡು ನಾವು ನಿರ್ಧಾರ ಮಾಡಬೇಕು. ಉಲಾಮಾಗಳು ಖಾಜಿಗಳು ಹೇಳಿದಂತೆ ಶೈಕ್ಷಣಿಕ್ಕೂ ಜೀವನಕ್ಕೂ ಮಹತ್ವ ಕೊಡಬೇಕು. ಹಿಜಬ್ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಎಲ್ಲವೂ ಪೂರಕವಾಗುವ ನಿರೀಕ್ಷೆ ಇದೆ ಎಂದು ಉಡುಪಿಯ ಧಾರ್ಮಿಕ ಮುಖಂಡ ರೆಹಮಾನ್ ರಜ್ವೀ ಕರೆ ನೀಡಿದ್ದಾರೆ.
ಉಡುಪಿ: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ(SSLC Exam) ಹಿನ್ನೆಲೆಯಲ್ಲಿ ಮುಸ್ಲಿಂ ಧರ್ಮಗುರುಗಳು ಶಿಕ್ಷಣದ ಬಗ್ಗೆ ಬುದ್ಧಿಮಾತು ಹೇಳಿದ್ದಾರೆ. ಈ ವರ್ಷ ಶೈಕ್ಷಣಿಕ ವರ್ಷ ಮುಗಿದಿದೆ ಪರೀಕ್ಷೆಗಳು ಆರಂಭವಾಗಿದೆ. ಭವಿಷ್ಯದ ದೃಷ್ಟಿಯಿಂದ ಮಕ್ಕಳನ್ನು(Children) ಪರೀಕ್ಷೆಗೆ ಕಳುಹಿಸಿ. ಹೆತ್ತವರು ಮಕ್ಕಳ ಭವಿಷ್ಯದ ಬಗ್ಗೆ ಗಮನ ಹರಿಸಬೇಕು. ದೂರದೃಷ್ಟಿ ಇಟ್ಟುಕೊಂಡು ನಾವು ನಿರ್ಧಾರ ಮಾಡಬೇಕು. ಉಲಾಮಾಗಳು ಖಾಜಿಗಳು ಹೇಳಿದಂತೆ ಶೈಕ್ಷಣಿಕ್ಕೂ ಜೀವನಕ್ಕೂ ಮಹತ್ವ ಕೊಡಬೇಕು. ಹಿಜಬ್ (Hijab) ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಎಲ್ಲವೂ ಪೂರಕವಾಗುವ ನಿರೀಕ್ಷೆ ಇದೆ ಎಂದು ಉಡುಪಿಯ ಧಾರ್ಮಿಕ ಮುಖಂಡ ರೆಹಮಾನ್ ರಜ್ವೀ ಕರೆ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ 14022 ವಿದ್ಯಾರ್ಥಿಗಳು
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿ 14022 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 7229 ಬಾಲಕರು, 6793 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 56 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಸಾವಿರದ ಇನ್ನೂರಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಹಿಜಬ್ಗೆ ಅವಕಾಶವಿಲ್ಲ. ಹೀಗಾಗಿ ಗೊಂದಲಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಲು ಇಲಾಖೆ ತಯಾರಿ ನಡೆಸಿದೆ.
ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿ
ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾಳೆ. ಈ ವೇಳೆ ಪ್ರಶ್ನಿಸಿದಾಗ, ನನಗೆ ಶಿಕ್ಷಣ ಇಲಾಖೆಯ ಆದೇಶ ಗೊತ್ತಿಲ್ಲ. ನೋ ಐಡಿಯಾ ಎಂದಿದ್ದಾಳೆ. ಶಾಲೆಯಲ್ಲಿ ನಮಗೆ ಈ ಆದೇಶದ ಬಗ್ಗೆ ಹೇಳಿಲ್ಲ. ಹಿಜಾಬ್ ತೆಗೆಯಿರಿ ಅಂದರೆ ರಿಮೂವ್ ಮಾಡಿ ಹೋಗುತ್ತೇವೆ. ಇಲ್ಲ ಅಂದರೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ ಎಂದಿದ್ದಾಳೆ.
ಮನೆಯಲ್ಲೂ ನಮ್ಮ ಪೋಷಕರು ಹೇಳಿ ಕಳುಹಿಸಿದ್ದಾರೆ. ಹಿಜಾಬ್ಗೆ ಅವಕಾಶ ನೀಡಿಲ್ಲ ಅಂದರೆ ತೆಗೆದು ಪರೀಕ್ಷೆ ಬರೆಯಲು ಸೂಚಿಸಿದ್ದಾರೆ. ಅದರಂತೆ ಪರೀಕ್ಷೆ ಬರೆಯುತ್ತೇವೆ ಅಂತ ಶಿವಾಜಿನಗರದ ಬಳಿಯ ಸರ್ಕಾರಿ ವಿಕೆಓ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಹೇಳಿದ್ದಾಳೆ.
ಇನ್ನು ರಾಯಚೂರು ನಗರದ ಸರ್ಕಾರಿ ಶಾಲೆಗೆ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದಿದ್ದಾರೆ. ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತೆಗೆದಿದ್ದಾರೆ. ಹಿಜಾಬ್ ತೆಗೆದ ಬಳಿಕ ಪರೀಕ್ಷಾ ಕೇಂದ್ರದೊಳಗೆ ಸಿಬ್ಬಂದಿ ಅನುಮತಿ ನೀಡಿದ್ದಾರೆ. ರಾಮನಗರದಲ್ಲೂ ವಿದ್ಯಾರ್ಥಿನಿಯರು ಹಿಜಾಬ್, ಬುರ್ಕಾ ಧರಿಸಿ ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದ್ದಾರೆ. ಹಿಜಾಬ್ ಕಳಚಿ ಬರುವಂತೆ ಶಿಕ್ಷಕರು ಸೂಚನೆ ನೀಡಿದ್ದು, ಹಿಜಾಬ್, ಬುರ್ಕಾ ತೆಗೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:
ಹಿಜಾಬ್ ಧರಿಸಿಕೊಂಡು ಬಂದ್ರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಇಲ್ಲ ಎಂಟ್ರಿ; ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: 3444 ಕೇಂದ್ರಗಳಲ್ಲಿ ಸಕಲ ಸಿದ್ಧತೆ
Published On - 10:26 am, Mon, 28 March 22