ಬಿಜೆಪಿಯ ಹಿರಿಯ ಮುಖಂಡ ಎ.ಜಿ.ಕೊಡ್ಗಿ ನಿಧನ
ಬಿಜೆಪಿಯ ಹಿರಿಯ ಮುಖಂಡ ಎ.ಜಿ.ಕೊಡ್ಗಿ (93) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಉಡುಪಿ: ಬಿಜೆಪಿಯ (BJP) ಹಿರಿಯ ಮುಖಂಡ ಎ.ಜಿ.ಕೊಡ್ಗಿ (AG Kudgi) (93) ಮಣಿಪಾಲದ (Manipal) ಕೆಎಂಸಿ (KIMS) ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಎ.ಜಿ.ಕೊಡ್ಗಿ ಕಾಂಗ್ರೆಸ್ ಪಕ್ಷದಿಂದ 2 ಬಾರಿ ಬೈಂದೂರು ಶಾಸಕರಾಗಿದ್ದರು. ಮಾಜಿ ಶಾಸಕ ಎ.ಜಿ.ಕೊಡ್ಗಿ ಅವರು 1993ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ಆಡಳಿತದಲ್ಲಿ 3ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದರು. ಪ್ರಗತಿಪರ ಕೃಷಿ, ಸೌರ ವಿದ್ಯುತ್, ಗ್ರಾಮೀಣಾಭಿವೃದ್ಧಿ, ನದಿ ಜೋಡಣೆ ಇವರ ಆಸಕ್ತಿಯ ಕ್ಷೇತ್ರಗಳಾಗಿದ್ದವು. ತನ್ನೂರು ಅಮಾಸೆಬೈಲಿನ ಸಮಗ್ರ ಅಭಿವೃದ್ಧಿಗೆ ಕಾರಣರಾಗಿದ್ದರು. ಅಮಾಸೆಬೈಲು ಸೋಲಾರ್ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ದೇವರಾಜ ಅರಸು ಕಾಲದಲ್ಲಿ ಭೂಮಸೂದೆ ಕಾನೂನು ಅನುಷ್ಠಾನ ದಲ್ಲಿ ಮುಂಚೂಣಿಯಲ್ಲಿದ್ದರು. 2013ರಲ್ಲಿ ರಾಜಕೀಯ ನಿವೃತ್ತಿ ಹೊಂದಿ ಸಂಪೂರ್ಣ ಗ್ರಾಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ