ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ: ಶೋಭಾ ಕರಂದ್ಲಾಜೆ

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ: ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 14, 2022 | 6:40 PM

ಉಡುಪಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat jodo yatra) ರಾಹುಲ್​ ಗಾಂಧಿಯ ಫಿಟ್ನೆಸ್​ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ (Udupi) ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಲೇವಡಿ​ ಮಾಡಿದ್ದಾರೆ. ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು

ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಮಹಿಳೆಯರಿಗೆ ಅವರ ಮನೆಯವರು, ಗಂಡಸರು  ಹಿಜಾಬ್​ಗೆ ಒತ್ತಾಯ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು. ನಮ್ಮ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ಉದ್ಯೋಗ ಸಿಗುವುದು ಮುಖ್ಯ. ಗಂಡಸರು ಹಾಕುವ ತಾಳಕ್ಕೆ ಕುಣಿದು ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ. ಪ್ರಗತಿಶೀಲ ದೇಶಗಳು ಧರ್ಮಗಳಲ್ಲಿ ಇರುವ ತಪ್ಪುಗಳನ್ನು ಗುರುತಿಸಿ ಸರಿ ಮಾಡಬೇಕು. ಇರಾನ್ ನ ಮುಸ್ಲಿಂ ಮಹಿಳೆಯರು ಭಾರತಕ್ಕೆ ಮಾರ್ಗದರ್ಶಕ ಆಗಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Fri, 14 October 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್