ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat jodo yatra) ರಾಹುಲ್ ಗಾಂಧಿಯ ಫಿಟ್ನೆಸ್ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ (Udupi) ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಲೇವಡಿ ಮಾಡಿದ್ದಾರೆ. ದೇಶದ ನಾಯಕತ್ವ ವಹಿಸಲು ರಾಹುಲ್ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ಫಿಟ್ನೆಸ್ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.
ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್ಗೆ ಅವಕಾಶ ಕೊಡಬಾರದು
ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.
ಮುಸ್ಲಿಂ ಮಹಿಳೆಯರಿಗೆ ಅವರ ಮನೆಯವರು, ಗಂಡಸರು ಹಿಜಾಬ್ಗೆ ಒತ್ತಾಯ ಮಾಡುತ್ತಿದ್ದಾರೆ. ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್ಗೆ ಅವಕಾಶ ಕೊಡಬಾರದು. ನಮ್ಮ ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣ ಉದ್ಯೋಗ ಸಿಗುವುದು ಮುಖ್ಯ. ಗಂಡಸರು ಹಾಕುವ ತಾಳಕ್ಕೆ ಕುಣಿದು ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳಬೇಡಿ. ಪ್ರಗತಿಶೀಲ ದೇಶಗಳು ಧರ್ಮಗಳಲ್ಲಿ ಇರುವ ತಪ್ಪುಗಳನ್ನು ಗುರುತಿಸಿ ಸರಿ ಮಾಡಬೇಕು. ಇರಾನ್ ನ ಮುಸ್ಲಿಂ ಮಹಿಳೆಯರು ಭಾರತಕ್ಕೆ ಮಾರ್ಗದರ್ಶಕ ಆಗಬೇಕು ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:31 pm, Fri, 14 October 22