ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ: ನಳಿನ್ ಕುಮಾರ್ ಕಟೀಲ್

| Updated By: preethi shettigar

Updated on: Jul 25, 2021 | 1:33 PM

ಡಾ.ಜಿ.ಪರಮೇಶ್ವರ್‌ರನ್ನು ಮೂಲೆಗುಂಪು ಮಾಡಿದ್ದರು. ಹೀಗಿರುವಾಗ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ದಲಿತರನ್ನು ಸಿಎಂ ಮಾಡಿ ಎನ್ನುವುದು ಎಷ್ಟು ಸರಿ? ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ: ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
Follow us on

ಉಡುಪಿ: ಸಿದ್ದರಾಮಯ್ಯ ಅಹಿಂದ ಹೋರಾಟ ಮಾಡಿ ಮುಖ್ಯಮಂತ್ರಿ ಆಗಿದ್ದರು. ಮುಖ್ಯಮಂತ್ರಿ ಆದ ಮೇಲೆ ಅಹಿಂದ ಮರೆತರು. ಅವರು ಸಿಎಂ ಆಗಿದ್ದಾಗ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ. ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಅವರು ಮುಚ್ಚಿಹಾಕಿದರು. ಡಾ.ಜಿ.ಪರಮೇಶ್ವರ್‌ರನ್ನು ಮೂಲೆಗುಂಪು ಮಾಡಿದ್ದರು. ಹೀಗಿರುವಾಗ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ದಲಿತರನ್ನು ಸಿಎಂ ಮಾಡಿ ಎನ್ನುವುದು ಎಷ್ಟು ಸರಿ? ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ವಾಜಪೇಯಿ ಸರ್ಕಾರ ಮುಸ್ಲಿಂ ಬಂಧುವನ್ನು ರಾಷ್ಟ್ರಪತಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದಲಿತ ರಾಷ್ಟ್ರಪತಿಯನ್ನು ದೇಶಕ್ಕೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಗೋವಿಂದ ಕಾರಜೋಳರನ್ನು ಡಿಸಿಎಂ ಮಾಡಿದ್ದಾರೆ. ಕೇಂದ್ರದಲ್ಲಿ ನಾರಾಯಣಸ್ವಾಮಿ ಸಚಿವರಾಗಿದ್ದಾರೆ. ಕಾಂಗ್ರೆಸ್ ದಲಿತರಿಗಾಗಿ ಏನು ಮಾಡಿದೆ ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಳಿನ್‌ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ
ಎಲ್ಲಾ ಸಚಿವರು ತಮ್ಮ ಕ್ಷೇತ್ರದಲ್ಲಿ ಇರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಹೀಗಾಗಿ ಎಲ್ಲರೂ ಆಯಾಯ ಜಿಲ್ಲೆಯಲ್ಲಿದ್ದು, ನೆರೆ ಪರಿಹಾರದ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಬಿಎಸ್‌ವೈ ಕೂಡ ಪ್ರವಾಹಪೀಡಿತ ಪ್ರದೇಶಕ್ಕೆ ಹೋಗಿದ್ದಾರೆ ಎಂದು ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮೊದಲು ರೈತರ ಬಜೆಟ್ ಮಂಡನೆ ಮಾಡಿದವರು ಯಡಿಯೂರಪ್ಪ: ನಳಿನ್ ಕುಮಾರ್ ಕಟೀಲ್
ಕೇದಾರೋತ್ಥಾನ ಟ್ರಸ್ಟ್​ನ ಕೃಷಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು, ಕೃಷಿಗೆ ಪ್ರಧಾನ ಆದ್ಯತೆ ಕೊಟ್ಟಿರುವುದು ಬಿಜೆಪಿ ಸರ್ಕಾರ. ಈ ರಾಜ್ಯದಲ್ಲಿ ಮೊದಲು ರೈತರ ಬಜೆಟ್ ಮಂಡನೆ ಮಾಡಿದವರು ಯಡಿಯೂರಪ್ಪ, ರೈತ ಗೀತೆಗೆ ಗೌರವ ಕೊಟ್ಟವರು ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡಿದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ. ಅಲ್ಲದೇ ನರೇಂದ್ರ ಮೋದಿ ರೈತರಿಗೆ ಕಿಸಾನ್ ಸಮ್ಮಾನ್ ಮೂಲಕ ಆರು ಸಾವಿರ ರೂ. ಪ್ರೋತ್ಸಾಹಧನ‌ಕೊಟ್ಟುರು. ಇದು ಕಡಿಮೆ ಆಯಿತು ಎಂದು 4000 ರೂಪಾಯಿ ಹೆಚ್ಚುವರಿ ಕೊಟ್ಟವರು ಯಡಿಯೂರಪ್ಪ. ಹೀಗಾಗಿ ಕೃಷಿಗೆ ಆದ್ಯತೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಗದ್ದೆ ನಾಟಿ ಮಾಡಿದ ನಳಿನ್ ಕುಮಾರ್ ಕಟೀಲ್
ಉಡುಪಿಯ ಸಣ್ಣಕ್ಕಿಬೆಟ್ಟು ಎಂಬಲ್ಲಿ ಗದ್ದೆಗಿಳಿದು ನಳಿನ್ ಕುಮಾರ್ ನಾಟಿ ಮಾಡಿದ್ದು, ನಾಟಿ ಯಂತ್ರದ ಮೂಲಕ ಹಡಿಲು ಗದ್ದೆಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಕೂಡ ನಳಿನ್ ಕುಮಾರ್ ಕಟೀಲ್ ಅವರಿಗೆ ಸಾಥ್​ ನೀಡಿದ್ದಾರೆ.

ರಾಜಕೀಯಕ್ಕೆ ಬರುವ ಇಚ್ಛೆ ನನಗೆ ಇರಲಿಲ್ಲ: ನಳಿನ್ ಕುಮಾರ್ ಕಟೀಲ್
ನಾನು ರಾಜಕಾರಣದಲ್ಲಿ ಖುಷಿ ಕಂಡವನು ಅಲ್ಲ. ಅಲ್ಲದೇ ನಾನು ರಾಜಕೀಯಕ್ಕೆ ಬರಬೇಕೆಂದು ಬಯಸಿ ಬಂದವನಲ್ಲ. ಜೀವನದಲ್ಲಿ ಕೃಷಿಕನಾಗಿ ಇರಬೇಕು ಎಂದು ಬಯಸಿದ್ದೆ. ಹಿರಿಯರ ಅಪೇಕ್ಷೆಯಂತೆ ರಾಜಕೀಯಕ್ಕೆ ಬಂದಿದ್ದೇನೆ. ಭಗವಂತ ಕೆಲವೊಮ್ಮೆ ಒಳ್ಳೇದು ಬರೆಯುತ್ತಾನೆ. ಅದರಂತೆ ನನ್ನ ಹಣೆಯಲ್ಲಿ ಒಳ್ಳೆಯದನ್ನು ಬರೆದಿದ್ದಾನೆ ಎಂದು ಉಡುಪಿಯ ಸಣ್ಣಕ್ಕಿಬೆಟ್ಟು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

 

ಇದನ್ನೂ ಓದಿ:
ನಳೀನ್ ಕುಮಾರ್​ದು ಎನ್ನಲಾದ ಆಡಿಯೋ ವೈರಲ್: ಆಪ್ತರ ಮೂಲಕ ಆಡಿಯೋ ಮಾಹಿತಿ ಪಡೆದುಕೊಂಡ ಉಸ್ತುವಾರಿ ಅರುಣ್ ಸಿಂಗ್

ಬಿಜೆಪಿ ಭ್ರಷ್ಟರ ಪಕ್ಷ: ಯಡಿಯೂರಪ್ಪ ಬಳಿಕ ಮತ್ತೊಬ್ಬ ಭ್ರಷ್ಟ ಸಿಎಂ ಬರುತ್ತಾರೆ – ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಾಖ್ಯಾನ

Published On - 12:52 pm, Sun, 25 July 21