AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ: ಹೋಗುತ್ತಾರಾ ಸಿಎಂ?

ಉಡುಪಿಯಲ್ಲಿ ಆಗಸ್ಟ್ 1 ರಿಂದ ಸೆಪ್ಟೆಂಬರ್ 15 ರವರೆಗೆ ನಡೆಯುವ 48 ದಿನಗಳ ಮಂಡಲ ಉತ್ಸವಕ್ಕೆ ಪುತ್ತಿಗೆ ಮಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದೆ. ದಶಕಗಳಿಂದ ಕೃಷ್ಣಮಠದೊಂದಿಗೆ ಅಂತರ ಕಾಯ್ದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಆಹ್ವಾನದ ಮೇರೆಗೆ ಕಾರ್ಯಕ್ರಮಕ್ಕೆ ಹೋಗುತ್ತಾರೆಯೇ ಕಾದು ನೋಡಬೇಕಿದೆ.

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ: ಹೋಗುತ್ತಾರಾ ಸಿಎಂ?
ಕೃಷ್ಣ ಜನ್ಮಾಷ್ಟಮಿಗೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on:Jun 28, 2025 | 5:23 PM

Share

ಉಡುಪಿ, ಜೂನ್​ 28: ಶ್ರೀ ಕೃಷ್ಣ ಜನ್ಮಾಷ್ಟಮಿ (Krishna Janmashtami) ನಿಮಿತ್ತ ಉಡುಪಿಯಲ್ಲಿ (Udupi) ನಡೆಯುವ 48 ದಿನಗಳ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಆಹ್ವಾನ ನೀಡಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಆಗಸ್ಟ್ 1ರಿಂದ ಸೆಪ್ಟೆಂಬರ್ 15ರವರೆಗೆ 48 ದಿನಗಳ ಕಾಲ ಮಂಡಲ ಉತ್ಸವ ಕಾರ್ಯಕ್ರಮ ನಡೆಯಲಿದೆ. ಈ ಮಂಡಲ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳ ಕಾರ್ಯದರ್ಶಿ ರತೀಶ್ ತಂತ್ರಿ ಮತ್ತು ಬೆಂಗಳೂರು ಶಾಖಾ ಮಠದ ಎ ಬಿ ಕುಂಜಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಇನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಶ್ರೀ ಕೃಷ್ಣ ಮಠದಿಂದ ಹಲವು ದಶಕಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕೃಷ್ಣಮಠದಿಂದ ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಗಿತ್ತು. ಮುಖ್ಯಮಂತ್ರಿಗಳು ಉಡುಪಿಗೆ ಭೇಟಿ ನೀಡಿದಾಗಲೂ, ಕೃಷ್ಣ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ಆದರೆ, ಈ ಬಾರಿಯ ಕೃಷ್ಣ ಜನ್ಮಾಷ್ಟಮಿಗೆ ಸಿದ್ದರಾಮಯ್ಯ ತೆರಳುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಮೈಸೂರು ದಸರಾ: ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಅಧಿಕಾರಿಗಳಿಗೆ ಸಿಎಂ ಸೂಚನೆ

ಇದನ್ನೂ ಓದಿ
Image
ಈವರೆಗೆ ಯಾರೂ ಮಾಡದ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ!
Image
ಜಾತಿ ಸಮೀಕ್ಷೆ: ಸರ್ವೆ ಮಾಡದೆ ಮನೆಗಳಿಗೆ ಸ್ಟಿಕ್ಕರ್​ ಅಂಟಿಸಿದ ಅಧಿಕಾರಿಗಳು
Image
ಬೆಂಗಳೂರು ಕಾಲ್ತುಳಿತ: ಪೊಲೀಸರನ್ನ ಸಸ್ಪೆಂಡ್ ಮಾಡಿದ್ದಕ್ಕೆ​ ಸಿಎಂ ಬೇಸರ
Image
ಚರ್ಚೆ ಹುಟ್ಟು ಹಾಕಿದ ಹೊಸಬಾಳೆ 'ಸಮಾಜವಾದ-ಜಾತ್ಯಾತೀತ' ಹೇಳಿಕೆ

ದಶಕಗಳ ಹಿಂದೆ ಶ್ರೀಕೃಷ್ಣ ಮಠದಲ್ಲಿ ಕನಕ ಗೋಪುರ ವಿವಾದಕ್ಕೆ ಕಾರಣವಾಗಿತ್ತ್ತು. ಮಠದ ವಿರುದ್ಧದ ಪ್ರತಿಭಟನೆಯ ನೇತೃತ್ವವನ್ನು ಸಿದ್ದರಾಮಯ್ಯ ಅವರೇ ವಹಿಸಿಕೊಂಡಿದ್ದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಶಕಗಳಿಂದಲೂ ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ ಎಂದು ತಿಳಿದುಬಂದಿದೆ.

ಏನಿದು ಕನಕ ಗೋಪುರ ವಿವಾದ?

ದಶಕಗಳ ಹಿಂದೆ ಉಡುಪಿ ಶ್ರೀ ಕೃಷ್ಣ ದೇಗುಲ ಹೊರಭಾಗದಲ್ಲಿ ಪುರಸಭೆ ಜಾಗದಲ್ಲಿದ್ದ ಹಳೆಯ ಕನಕ ಗೋಪುರ ಶಿಥಿಲಗೊಂಡಿತ್ತು. ಹೀಗಾಗಿ, ಕನಕ ಗೋಪುರವನ್ನು ತೆರವುಗೊಳಿಸಲಾಗಿತ್ತು. ಈ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಉಡಪಿ ಶ್ರೀ ಕೃಷ್ಣ ಮಠದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಈ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಹಿಸಿಕೊಂಡಿದ್ದರು.

ಬಳಿಕ, ವಿಶ್ವೇಶತೀರ್ಥ ಶ್ರೀಪಾದರು ಪ್ರತಿಭಟನಾಕಾರರನ್ನು ಕರೆಸಿ ಮಾತನಾಡಿ, ಕನಕ ಪ್ರತಿಮೆ ಸಹಿತ ಗೋಪುರ ನಿರ್ಮಾಣ ಮಾಡಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಣೆಯಾಗುವಂತೆ ಮಾಡಿದರು. ಅಂದಿನಿಂದ ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಮಠದೊಂದಿಗೆ ಯಾವುದೇ ಭಾಂದವ್ಯ ಹೊಂದಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Sat, 28 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ