ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ, ದೇವರು ಎಲ್ಲರೊಳಗಿದ್ದಾನೆ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ ಎಂದು

ಸಿದ್ದರಾಮಯ್ಯರೊಳಗೂ ರಾಮನಿದ್ದಾನೆ: ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Jan 03, 2024 | 3:06 PM

ಉಡುಪಿ, ಜನವರಿ 03: ಆಯೋಧ್ಯೆಯಲ್ಲಿರುವುದು (Ayodhye) ಬಿಜೆಪಿ (BJP) ರಾಮ, ನಮಗೆ ಸಿದ್ದರಾಮಯ್ಯನವರೇ (Siddaramaiah) ರಾಮ (Rama) ಎಂಬ ಮಾಜಿ ಸಚಿವ ಹೆಚ್​​ ಆಂಜನೇಯ (H Anjaneya) ಹೇಳಿಕೆಗೆ ಸಂಬಂಧಿಸಿದಂತೆ ರಾಮ ಬೇರೆಯಲ್ಲ ಮತ್ತು ಕೃಷ್ಣ ಬೇರೆಯಲ್ಲ. ದೇವರು ಮಂದಿರದಲ್ಲಿ ಮಾತ್ರವಲ್ಲ ಎಲ್ಲರೊಳಗಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಳಗೂ ದೇವರು ಇದ್ದಾನೆ. ರಾಮಮಂದಿರ ಬಿಜೆಪಿ ಮಂದಿರವೆಂದು ಯಾಕೆ ಹಾಗೆ ಅಂದುಕೊಳ್ಳಬೇಕು? ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Theertha Swamiji) ಹೇಳಿದರು.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾವು ಭಾರತೀಯರು ರಾಮಮಂದಿರ ಎಲ್ಲರಿಗೂ ಸೇರಿದೆ. ಇದು ಪಕ್ಷದ ಮಂದಿರ ಅಲ್ಲ, ಬಿಜೆಪಿಯವರು ಮಾತ್ರ ದೇಣಿಗೆ ಕೊಟ್ಟಿದ್ದಾರಾ? ಪಕ್ಷ ಹಾಗೂ ಸರ್ಕಾರದ ದೇಣಿಗೆಯಿಂದ ರಾಮಮಂದಿರ ನಿರ್ಮಿಸಿಲ್ಲ. ಜಗತ್ತಿನಲ್ಲಿರುವ ರಾಮ ಭಕ್ತರ ದೇಣಿಗೆಯಿಂದ ಕಾರ್ಯಕ್ರಮ ನಡೆಯುತ್ತಿದೆ.

 ನಮ್ಮ ರಾಮ ಸಿದ್ದರಾಮಯ್ಯ ಹೆಚ್​. ಆಂಜನೇಯ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಪ್ರಭು ಶ್ರೀರಾಮಚಂದ್ರನ ದೇವಸ್ಥಾನ ಜನವರಿ 22 ರಂದು ಉದ್ಘಾಟನೆಯಾಗಲಿದೆ. ಈ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬಂದಿಲ್ಲ ಎಂದು ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್​ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ. ನಮ್ಮ ರಾಮ ಸಿದ್ದರಾಮಯ್ಯ ಎಂದು ಹೇಳಿದ್ದರು.

ಇದನ್ನೂ ಓದಿ: 22 ರಂದು ಗೋಧ್ರಾ ರೀತಿಯ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯ ಯಾತ್ರಿಗಳಿಗೆ ಸರ್ಕಾರ ರಕ್ಷಣೆ ನೀಡಲಿ: ಬಿಕೆ ಹರಿಪ್ರಸಾದ್

ಬಸನಗೌಡ ಪಾಟೀಲ್​​ ಯತ್ನಾಳ್​ ಟಾಂಗ್​​

ಹೆಚ್​ ಆಂಜನೇಯ ಅವರ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಚ್​ ಆಂಜನೇಯ ಅವರ ಹೇಳಿಕೆಯನ್ನು ವಿರೋಧಿಸಿ ವಿಜಯಪುರ ಬಿಜೆಪಿ ಶಾಕಸ ಬಸನಗೌಡ ಪಾಟೀಲ್​ ಯತ್ನಾಳ್​ ಟ್ವೀಟ್​ ಮಾಡಿ ” ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ” ಎಂದು ವಾಗ್ದಾಳಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್