ಉಡುಪಿ ಕೃಷ್ಣಮಠದ ಸ್ವಾಧೀನಕ್ಕೆ ಯತ್ನಿಸಿತ್ತು ಸಿದ್ದರಾಮಯ್ಯ ಸರ್ಕಾರ: ಪ್ರಮೋದ್ ಮಧ್ವರಾಜ್

ಕೃಷ್ಣಮಠವನ್ನು ಸರ್ಕಾರದ ಅಧೀನಕ್ಕೆ ತರಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ವಿಷಯವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗಪಡಿಸಿದರು.

ಉಡುಪಿ ಕೃಷ್ಣಮಠದ ಸ್ವಾಧೀನಕ್ಕೆ ಯತ್ನಿಸಿತ್ತು ಸಿದ್ದರಾಮಯ್ಯ ಸರ್ಕಾರ: ಪ್ರಮೋದ್ ಮಧ್ವರಾಜ್
ಉಡುಪಿ ಶ್ರೀಕೃಷ್ಣ ಮಠ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 24, 2021 | 4:02 PM

ಉಡುಪಿ: ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ಮೂಲಕ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸಿತ್ತು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಕೃಷ್ಣಮಠದಲ್ಲಿ ನಡೆದ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಕಾರ್ಯಕ್ರಮ ‘ವಿಶ್ವಾರ್ಪಣಂ’ನಲ್ಲಿ ಮಾತನಾಡಿದ ಅವರು, ಕೃಷ್ಣಮಠವನ್ನು ಸರ್ಕಾರದ ಅಧೀನಕ್ಕೆ ತರಲು ಸಿದ್ದರಾಮಯ್ಯ ಮುಂದಾಗಿದ್ದರು ಎಂಬ ವಿಷಯವನ್ನು ಬಹಿರಂಗಪಡಿಸಿದರು. ಸಭೆಯಲ್ಲಿ ನೆರೆದಿದ್ದ ಜನರ ನಡುವೆ ಈ ಹೇಳಿಕೆಯು ಚರ್ಚೆ ಹುಟ್ಟುಹಾಕಿತು.

ಈ ವಿಷಯ ಗೊತ್ತಾದಾಗ ನಾನೇ ಸಿದ್ಧರಾಮಯ್ಯ ಬಳಿಗೆ ಹೋಗಿ ವಿರೋಧ ವ್ಯಕ್ತಪಡಿಸಿದ್ದೆ. ಮಠವನ್ನು ವಶಪಡಿಸಿಕೊಂಡರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಹೇಳಿದ್ದೆ. ಕೃಷ್ಣಮಠದ ಬೆಳವಣಿಗೆಗಳನ್ನು ನೆನಪಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅದರ ನಾಯಕರಿಗೆ ಪ್ರಮೋದ್ ಮಧ್ವರಾಜ್ ಮತ್ತೊಮ್ಮೆ ಇರಿಸುಮುರಿಸು ಉಂಟು ಮಾಡಿದರು.

ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಉಡುಪಿ ಮಠವು ಜನರ ಪಾಲಿಗೆ ಒಂದು ಭಾಗ್ಯವೇ ಸರಿ. ಆದರೆ ನಮ್ಮದೇ ಸರಕಾರ ಇದನ್ನು ವಶಪಡಿಸಿಕೊಳ್ಳಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಎಚ್ಚರಿಸಿದ್ದೆ. ಇಲ್ಲಿಯವರೆಗೆ ಈ ವಿಚಾರ ನನ್ನೊಳಗೇ ಇತ್ತು. ಇದನ್ನು ಎಲ್ಲಿಯೂ ಹೇಳುವುದಿಲ್ಲ ಎಂದುಕೊಂಡಿದ್ದೆ. ಆದರೆ ಇಂದು ಹೇಳಬೇಕಾಯಿತು ಎಂದರು.

ತಾಂತ್ರಿಕವಾಗಿ ಇಂದಿಗೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಅವರು ಬಿಜೆಪಿ ಬಾಗಿಲಲ್ಲಿ ನಿಂತಿದ್ದಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ಸಾಮಾನ್ಯ ವ್ಯಕ್ತಿಗಳನ್ನು ಗುರುತಿಸಿ ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ನೀಡಿದಾಗಲೂ ಬಹಿರಂಗವಾಗಿಯೇ ಪ್ರಮೋದ್ ಮಧ್ವರಾಜ್ ಪ್ರಧಾನಿ ಮೋದಿ ಅವರನ್ನು ಹೊಗಳಿದ್ದರು.

ಇದನ್ನೂ ಓದಿ: ವಿದೇಶಿ ಟ್ರಾವೆಲ್ ಹಿಸ್ಟರಿ ಇಲ್ಲ! ಭದ್ರಾವತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿಗೆ, ಉಡುಪಿಯಲ್ಲಿ ವೃದ್ಧ ದಂಪತಿಗೆ ಒಮಿಕ್ರಾನ್! ಇದನ್ನೂ ಓದಿ: ಉಡುಪಿ: ಸುಳ್ಳು ದಾಖಲೆ ನೀಡಿ 2ನೇ ಮದುವೆಗೆ ಮುಂದಾದ 4 ಮಕ್ಕಳ ತಂದೆ; ಮದುವೆ ಅರ್ಜಿ ತಿರಸ್ಕರಿಸಲು ಮನವಿ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ