ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಯಶ್​​ಪಾಲ್ ಸುವರ್ಣ ವಿರುದ್ಧ ಕೇಸ್​

ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಯನ್ನು ತಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಕ್ಕೆ ಶಾಸಕ ಯಶ್​ಪಾಲ್​ ಸುವರ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಯಶ್​​ಪಾಲ್ ಸುವರ್ಣ ವಿರುದ್ಧ ಕೇಸ್​
ಶಾಸಕ ಯಶ್​​ಪಾಲ್ ಸುವರ್ಣ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on: Sep 09, 2024 | 1:03 PM

ಉಡುಪಿ, ಸೆಪ್ಟೆಂಬರ್​​ 09: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್​​ಪಾಲ್ ಸುವರ್ಣ (Yashpal Suvarna) ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ (Manipal Police Station) ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ ಎ5 ಆಗಿದ್ದಾರೆ.

ಏನಿದು ಪ್ರಕರಣ

ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ, ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಹಿಜಾಬ್ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜಿನ ಒಳಗಡೆ ಬಿಟ್ಟುಕೊಳ್ಳದೆ ಪ್ರಾಂಶುಪಾಲರು​ ಗೇಟ್ ಬಳಿ ತಡೆದಿದ್ದರು.

ವಿದ್ಯಾರ್ಥಿಯರನ್ನು ಗೇಟ್ ಬಳಿ ಪ್ರಾಂಶುಪಾಲರು ತಡೆದಿದ್ದ ಫೋಟೋ ವೈರಲ್ ಆಗಿತ್ತು. ಹೀಗಾಗಿ ಪ್ರಶಸ್ತಿ ಹಿಂಪಡೆಯುವಂತೆ ಹಿಜಾಬ್ ಪರ ಹೋರಾಟಗಾರರು ಒತ್ತಡ ಹಾಕಿದ್ದು, ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಪ್ರಶಸ್ತಿ ತಡೆ ಹಿಡಿದಿತ್ತು.

ಇದನ್ನೂ ಓದಿ: ರಾಮಕೃಷ್ಣರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ತಡೆಹಿಡಿದ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು. ಹಿಂದೂ ವಿರೋಧಿ ಸಿದ್ದರಾಮಯ್ಯರನ್ನು ತೊಲಗಿಸಿ ಎಂದು ಘೋಷಣೆ ಕೂಗಿದ್ದರು.

ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್​ಎಸ್​ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್​​ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ