AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಕೊರತೆ: ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ- ಸುನಿಲ್ ಕುಮಾರ್

ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಳ್ಳಾರಿ, ರಾಯಚೂರಿನಲ್ಲಿ ಸಣ್ಣಪುಟ್ಟ ಸಮಸ್ಯೆಗಳಾಗಿವೆ. 2 ಘಟಕಗಳಿಗೆ ಶೀಘ್ರದಲ್ಲೇ ಕಲ್ಲಿದ್ದಲು ಪೂರೈಕೆ ಮಾಡುತ್ತೇವೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್​ ಹೇಳಿದ್ದಾರೆ.

ಕಲ್ಲಿದ್ದಲು ಕೊರತೆ: ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ- ಸುನಿಲ್ ಕುಮಾರ್
ಸುನಿಲ್ ಕುಮಾರ್
TV9 Web
| Edited By: |

Updated on:Oct 08, 2021 | 4:21 PM

Share

ಉಡುಪಿ: ಮಳೆಗಾಲ ಆಗಿರುವುದರಿಂದ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ 10- 15 ದಿನಗಳಿಂದ ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ಸಂಬಂಧ, ಇಂದು ಬೆಳಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ. ಮಹಾರಾಷ್ಟ್ರ, ಒಡಿಶಾದಿಂದ ಕಲ್ಲಿದ್ದಲು ಪೂರೈಕೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಕಲ್ಲಿದ್ದಲು ಅವಲಂಬಿತ ಉಷ್ಣ ವಿದ್ಯುತ್​ ಸ್ಥಾವರ ಸ್ಥಗಿತ ವಿಚಾರವಾಗಿ ಉಡುಪಿಯಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಬಳ್ಳಾರಿ, ರಾಯಚೂರಿನಲ್ಲಿ ಸಣ್ಣಪುಟ್ಟ ಸಮಸ್ಯೆಗಳಾಗಿವೆ. 2 ಘಟಕಗಳಿಗೆ ಶೀಘ್ರದಲ್ಲೇ ಕಲ್ಲಿದ್ದಲು ಪೂರೈಕೆ ಮಾಡುತ್ತೇವೆ. ಇಂದು ರಾತ್ರಿ ಕೇಂದ್ರ ಸಚಿವರ ಜತೆ ಮತ್ತೊಮ್ಮೆ ಮಾತಾಡುವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸದಲ್ಲಿದ್ದು ಕ್ರಮ ಕೈಗೊಳ್ತಾರೆ ಎಂದು ಸಚಿವ ವಿ. ಸುನಿಲ್ ಕುಮಾರ್​ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಜಾಗತಿಕ ಮಟ್ಟದಲ್ಲೇ ಕಲ್ಲಿದ್ದಲು ಕೊರತೆ ಉಂಟಾಗಿರುವುದರಿಂದ ಬೇಡಿಕೆ ವಿಪರೀತ ಹೆಚ್ಚಾಗಿದೆ. ಇದರಿಂದ ಭಾರತ ಕೂಡ ಹೊರತಾಗಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವವಾದ ಆದೇಶವೊಂದನ್ನು ನೀಡಲಾಗಿದೆ. ಇಲ್ಲಿಯ ತನಕ ಸ್ವಂತ ಬಳಕೆಗಾಗಿ (ಇವುಗಳನ್ನು Captive Mines ಎನ್ನಲಾಗುತ್ತದೆ) ಕಲ್ಲಿದ್ದಲು ಬಳಸುತ್ತಿದ್ದ ಅವುಗಳು ಇನ್ನು ಮುಂದೆ ವಾರ್ಷಿಕ ಉತ್ಪಾದನೆಯಲ್ಲಿ ಶೇಕಡಾ 50ರಷ್ಟನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಕಲ್ಲಿದ್ದಲು ಸಚಿವಾಲಯದಿಂದ ಅಕ್ಟೋಬರ್ 5ನೇ ತಾರೀಕಿನ ಮಂಗಳವಾರದಂದು ಘೋಷಣೆ ಮಾಡಲಾಗಿದೆ. ಅಂದ ಹಾಗೆ, ಭಾರತದಲ್ಲಿ ಈ ಹಿನ್ನೆಲೆಯಲ್ಲಿ ವಿವಿಧ ಸಿಮೆಂಟ್​ ಕಂಪೆನಿಗಳು ಬೆಲೆ ಹೆಚ್ಚಳ ಮಾಡಿದ್ದು, ಶೇ 20ಕ್ಕೂ ಹೆಚ್ಚು ದರ ಮೇಲೇರಿದೆ. ಇದೇ ವೇಳೆ ಕಟ್ಟಡ ನಿರ್ಮಾಣ ಸೇರಿದಂತೆ ಇತರ ಉದ್ದೇಶಗಳಿಗೆ ಬಳಸುವ ಉಕ್ಕಿನ ದರ ಕೂಡ ಹೆಚ್ಚಳವಾಗಿದೆ.

ಕಲ್ಲಿದ್ದಲು ಸಚಿವಾಲಯವು ಹೇಳಿಕೆಯನ್ನು ನೀಡಿ, ಕಲ್ಲಿದ್ದಲು ಅಥವಾ ಲಿಗ್ನೈಟ್ ಮಾರಾಟದ ದೃಷ್ಟಿಯಿಂದ ಖನಿಜ ವಿನಾಯಿತಿ ನಿಯಮಾವಳಿ, 1960 ಇದಕ್ಕೆ ತಿದ್ದುಪಡಿ ತರಲಾಗಿದೆ. ಭೋಗ್ಯಕ್ಕೆ ಪಡೆದವರು ಕ್ಯಾಪ್ಟಿವ್ ಗಣಿಗಳಿಗೆ ಹೆಚ್ಚುವರಿಯಾಗಿ ಮೊತ್ತವನ್ನು ಪಾವತಿ ಮಾಡಿ, ಒಂದು ಹಣಕಾಸು ವರ್ಷದಲ್ಲಿ ಉತ್ಪಾದನೆ ಮಾಡಿದ ಶೇ 50ರ ತನಕದ ಒಟ್ಟಾರೆ ಕಲ್ಲಿದ್ದಲು ಅಥವಾ ಲಿಗ್ನೈಟ್, ಅದು ಕೂಡ ಆ ಗಣಿಗೆ ಜೋಡಣೆಯಾದ ಘಟಕ ಸಂಪೂರ್ಣ ಬಳಕೆ ಅಗತ್ಯಗಳು ಪೂರೈಸಿದ ಮೇಲೆ ಮಾರಾಟ ಮಾಡಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Coal shortage in RTPS: ಆರ್​ಟಿ​ಪಿಎಸ್ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ; ಕತ್ತಲಲ್ಲಿ ಮುಳುಗಲಿದೆ ಅರ್ಧ ರಾಜ್ಯ

ಇದನ್ನೂ ಓದಿ: Coal Shortage Crisis: ಕಲ್ಲಿದ್ದಲು ಕೊರತೆ ನಿವಾರಿಸಲು ‘ಕ್ಯಾಪ್ಟಿವ್ ಮೈನ್ಸ್​’ಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ

Published On - 4:04 pm, Fri, 8 October 21

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ