Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಗಂಡನಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರಚಿದ ಪತ್ನಿ; ಯಾಕೆ ಗೊತ್ತಾ?

ಗಂಡನ ಅಕ್ರಮ ಸಂಬಂಧದ ಬಗ್ಗೆ ಶಂಕೆ ವ್ಯಕ್ತಪಡಿಸಿ, ಪತ್ನಿ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಎರಚಿದ್ದಾರೆ. ಪತಿ ಆಸೀಫ್ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಾ ಜೋರಾಗಿ ಕಿರುಚಿಕೊಂಡಿದ್ದಾನೆ. ಈ ವೇಳೆ ಕೂಗಿಕೊಂಡಿದ್ದ ಆಸೀಫ್​ನನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಡುಪಿ: ಗಂಡನಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರಚಿದ ಪತ್ನಿ; ಯಾಕೆ ಗೊತ್ತಾ?
ಪತಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 20, 2023 | 2:48 PM

ಉಡುಪಿ, ಸೆ.20: ಗಂಡನ ಅಕ್ರಮ ಸಂಬಂಧದ ಬಗ್ಗೆ ಹೆಂಡತಿಗೆ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನಲೆ ಪತ್ನಿ ಆತನಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರೆಚಿದ ಘಟನೆ ಉಡುಪಿ (Udupi) ಜಿಲ್ಲೆಯ ಕಾಪು ತಾಲೂಕಿನ ಮಣಿಪುರದಲ್ಲಿ ನಡೆದಿದೆ. ಮೊಹಮ್ಮದ್ ಆಸೀಫ್(22) ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹೌದು, ಪತಿ ಬಾತ್ ರೂಮ್‌ನಲ್ಲಿರುವಾಗ ಪತ್ನಿ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಎರಚಿದ್ದಾರೆ. ಬಿಸಿ ನೀರಿನ ಪರಿಣಾಮ ಆಸೀಫ್ ದೇಹದ ಎಡಭಾಗ ಸಂಪೂರ್ಣ ಸುಟ್ಟ ಗಾಯಗಳಾಗಿವೆ. ಇನ್ನು ಗಾಯಗೊಂಡಿದ್ದ ಆಸೀಫ್​ನನ್ನು ಹೆಂಡತಿ ಮನೆಯವರು ಕೂಡಿ ಹಾಕಿ ಕ್ರೌರ್ಯ ಮೆರೆದಿದ್ದಾರೆ.

ಸ್ಥಳೀಯರಿಂದ ರಕ್ಷಣೆ

ಇನ್ನು ಗಂಡನ ಅಕ್ರಮ ಸಂಬಂಧದ ಬಗ್ಗೆ ಶಂಕೆ ವ್ಯಕ್ತಪಡಿಸಿ, ಪತ್ನಿ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಎರಚಿದ್ದಾರೆ. ಪತಿ ಆಸೀಫ್ ತೀವ್ರ ಸುಟ್ಟ ಗಾಯಗಳಿಂದ ನರಳುತ್ತಾ ಜೋರಾಗಿ ಕಿರುಚಿಕೊಂಡಿದ್ದಾನೆ. ಈ ವೇಳೆ ಕೂಗಿಕೊಂಡಿದ್ದ ಆಸೀಫ್​ನನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಆತನ ಮುಖ, ಎಡಗೈ, ಎದೆ, ಹೊಟ್ಟೆ ಸುಟ್ಟು ಗುಳ್ಳೆ ಎದ್ದಿವೆ. ಈ ಕುರಿತು ಆಸೀಫ್ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

ಇದನ್ನೂ ಓದಿ:Adultery: ಅತ್ತೆ ಜೊತೆ 22 ವರ್ಷಗಳಿಂದ ಸುದೀರ್ಘವಾದ ಅಕ್ರಮ ಸಂಬಂಧ, ಅವರಿಬ್ಬರೂ ಪಲ್ಲಂಗದಾಟದಲ್ಲಿ ತೊಡಗಿದ್ದಾಗ ಪತ್ನಿಗೆ ಸಿಕ್ಕಿಬಿದ್ದ! ಈಗೇನಾಯ್ತು?

ರೈಲಿಗೆ ಸಿಲುಕಿ ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಬಲಿ

ಹಾವೇರಿ: ರೈಲಿ​ಗೆ ಸಿಲುಕಿ ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಬಲಿಯಾದ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಸವಣೂರು ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿಯತ್ತ ಈ ರೈಲು ಸಾಗುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಕುರಿ ಕಳೆದುಕೊಂಡ ಕುರಿಗಾಹಿ ರಮೇಶ್​ ಮಗ್ಲಪ್ಪ ಲಮಾಣಿ ಹಾಗೂ ಆತನ ಹತ್ತಿಮತ್ತೂರು ತಾಂಡದವರು ಲಕ್ಷಾಂತರ ರೂ.ಮೌಲ್ಯದ ಕುರಿ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಈ ಘಟನೆ ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Wed, 20 September 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ