ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ ನಿಧನ

| Updated By: ಆಯೇಷಾ ಬಾನು

Updated on: Jul 31, 2022 | 10:10 PM

ಡಾ ಟಿಎಂಎಪೈ ಫೌಂಡೇಶನ್ - ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ(89)ನಿಧನರಾಗಿದ್ದಾರೆ. ನಾಳೆ ಎಂಜಿಎಂ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಪೈ ನಿಧನ
ಮೋಹನ್ ದಾಸ್ ಪೈ
Follow us on

ಉಡುಪಿ: ಮಣಿಪಾಲದ ಶಿಲ್ಪಿ ಡಾ. ಟಿಎಮ್ಎಪೈ ಅವರ ಹಿರಿಯ ಪುತ್ರ ಮೋಹನ್ ದಾಸ್ ಪೈ(89)ನಿಧನರಾಗಿದ್ದಾರೆ. ಭಾನುವಾರ(ಜುಲೈ 31) ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಡಾ ಟಿಎಂಎಪೈ ಫೌಂಡೇಶನ್ – ಎಂಜಿಎಂ ಕಾಲೇಜ್ ಟ್ರಸ್ಟ್ ನ ಅಧ್ಯಕ್ಷರಾಗಿದ್ದರು. ನಾಳೆ ಎಂಜಿಎಂ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿಗೆ ಟಿ ಮೋಹನ್ ದಾಸ್ ಎಂಪೈ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ, ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೋಹನ್ ದಾಸ್ ತಮ್ಮ ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.

ಆಧುನಿಕ ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆೆ ಎಂಜಿಎಂ ಕಾಲೇಜಿನ ಟ್ರಸ್ಟ್‌, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ ಇವರು ಮುಖ್ಯ ಕಾರಣರಾಗಿದ್ದರು.

Published On - 9:59 pm, Sun, 31 July 22