ಬೇಷರತ್ ಆಗಿ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ; ಉಡುಪಿ ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಾದಿತ ಹೇಳಿಕೆಯನ್ನು ನೀಡಿದ್ದರು. ಸದ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು ತಾವು ನೀಡಿದ ಹೇಳಿಕೆ ಹಿಂತೆಗೆದುಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಬೇಷರತ್ ಆಗಿ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ; ಉಡುಪಿ ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
Follow us
| Updated By: ಆಯೇಷಾ ಬಾನು

Updated on:Dec 27, 2021 | 12:30 PM

ಉಡುಪಿ: ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವುದಾಗಿ ಟ್ವೀಟ್ ಮೂಲಕ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದ್ದಾರೆ.

ಹಿಂದೂ ಪುನರುಜ್ಜೀವನ ಮತ್ತು ಭಾರತದ ಇತಿಹಾಸದಲ್ಲಿ ಮತಾಂತರಗೊಂಡವರೆಲ್ಲರನ್ನು ಮರಳಿ ಹಿಂದೂ ಮಡಿಲಿಗೆ ಕರೆತರುವ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುಜ್ಜೀವನ’ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ವಿವಾದವನ್ನು ಸೃಷ್ಟಿಸಿವೆ. ಆದ್ದರಿಂದ ನಾನು ಹೇಳಿಕೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ” ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

ಅಂದು ಮಠದಲ್ಲಿ ತೇಜಸ್ವಿ ಸೂರ್ಯ ಹೇಳಿದ್ದೇನು? ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಕರೆತರಬೇಕು. ಪಾಕ್ಗೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನ್ಗೆ ಮತಾಂತರಗೊಂಡವರನ್ನ ಕರೆತರಬೇಕು. ಟಿಪ್ಪು ಜಯಂತಿಯಂದೇ ನಾವು ಮರುಮತಾಂತರ ಮಾಡಬೇಕು. ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳಾಗಿವೆ. ಅಸಾಧ್ಯ ಎಂಬುವುದು ಯಾವುದೂ ಇಲ್ಲ. ನಮ್ಮ ಮನೆ ಪಕ್ಕ, ಗ್ರಾಮಗಳಲ್ಲಿ ಘರ್ ವಾಪಸಿ ಮಾಡಬೇಕು. ನಾವು ದೊಡ್ಡದಾಗಿ ಕನಸನ್ನು ಕಾಣಬೇಕು ಎಂದು ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು.

ಈ ದೇಶದಲ್ಲಿ ರಾಮಮಂದಿರವನ್ನು ನಿರ್ಮಾಣ ಮಾಡಿದ್ದೇವೆ. ಕಾಶ್ಮೀರದಲ್ಲಿ 370 ಕಾಯ್ದೆಯನ್ನು ತೆಗೆದುಹಾಕಿದ್ದೇವೆ. ಪಾಕ್ ಮುಸಲ್ಮಾನರನ್ನ ಹಿಂದೂಗಳಾಗಿ ಪರಿವರ್ತಿಸಬೇಕು. ಆದ್ಯ ಕರ್ತವ್ಯದ ರೀತಿಯಲ್ಲಿ ಘರ್ ವಾಪಸಿ ಮಾಡಬೇಕು. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನೂ ಓದಿ: ಜೀವ ವೀಣೆ ಮೀಟಿದ ಜಾಣೆ; “ನಾನು ಮತ್ತು ನನ್ನ ಗೀಚು” ಬಳಗದ 20 ಕಥೆಗಾರರಿಂದ ಸಿದ್ಧವಾಗುತ್ತಿದೆ ಕಥಾ ಸಂಗ್ರಾಮ

Published On - 12:22 pm, Mon, 27 December 21