Udupi News: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ತೆಲಂಗಾಣ ಶಾಸಕ ರೋಹಿತ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.

Udupi News: ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಅಪಘಾತಗೊಂಡಿರುವ ಕಾರು (ಎಡಚಿತ್ರ) ಶಾಸಕ ರೋಹಿತ್​ ರೆಡ್ಡಿ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Jun 24, 2023 | 1:00 PM

ಉಡುಪಿ: ಜಿಲ್ಲೆಯ ಕಾರ್ಕಳ (Karkala) ತಾಲೂಕಿನ ಮಿಯ್ಯಾರು ಬಳಿ ತೆಲಂಗಾಣ ಶಾಸಕ ರೋಹಿತ್ ರೆಡ್ಡಿ (Rohit Reddy) ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ (Mangaluru) ಶೃಂಗೇರಿಗೆ (Sringeri) ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿರುವ ಹಿನ್ನೆಲೆ ಕಾರಿನ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪತಿಯಿಂದ ನಿರಂತರ ಕಿರುಕುಳ; ಬೇಸತ್ತು ಪತ್ನಿ ಆತ್ಮಹತ್ಯೆ

ದಾವಣಗೆರೆ: ಪತಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾಂತಮ್ಮ(30) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ತಾಲೂಕಿನ ಗೌರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೋಮಶೇಖರ್ ನಿತ್ಯ ಮದ್ಯಸೇವಿಸಿ ಬಂದು ಪತ್ನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂಸಿಸುತ್ತಿದ್ದ. ಇದರಿಂದ ಪತ್ನಿ ಮನನೊಂದು ನೇಣಿಗೆ ಶರಣಾಗಿದ್ದು, ತೀವ್ರ ಅಸ್ವಸ್ಥಗೊಂಡ ಮಹಿಳೆಯನ್ನ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆದಲ್ಲಿಯೇ ಶಾಂತಮ್ಮ ಸಾವನ್ನಪ್ಪಿದ್ದಾಳೆ. ಈ ಕುರಿತು ಆರೋಪಿ ಸೋಮಶೇಖರ್ ವಿರುದ್ಧ ಜಗಳೂರು ಠಾಣೆಗೆ ಮೃತ ಶಾಂತಮ್ಮ ತಂದೆ ರಾಮಪ್ಪ ಎಂಬುವವರು ದೂರು ನೀಡಿದ್ದಾರೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಖದೀಮರು

ಮೈಸೂರು: ಜಿಲ್ಲೆಯ ಸರ್ದಾರ್ ವಲ್ಲಭಾಯಿ ಪಟೇಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ‌ ಮಾಡಿದ ಘಟನೆ‌ ನಡೆದಿದೆ. ಖದೀಮರು ಸ್ವಾಮಿ ಎಂಬುವವರಿಗೆ ಸೇರಿದ ಕಿಯಾ ಕಾರಿನ ಟೈರ್ ಕಳ್ಳತನ ಮಾಡಿ, ಕೆಳಗೆ ಕಲ್ಲು ಇಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Sat, 24 June 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ