AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ.

Udupi News: ಮಳೆಗೆ ಉಡುಪಿಯಲ್ಲಿ ಮೊದಲ ಬಲಿ, ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ  ಕೆರೆಗೆ ಬಿದ್ದು ಸಾವು
ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jul 05, 2023 | 11:07 AM

Share

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ಹಿನ್ನಲೆ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದ್ದು, ಮುಂಜಾಗೃತ ಕ್ರಮವಾಗಿ ಈಗಾಗಲೇ ಶಾಲೆ ಕಾಲೇಜುಗಳಿಗೆ ನಿನ್ನೆಯಿಂದ ರಜೆ ನೀಡಲಾಗಿದೆ. ಆದರೀಗ ಮಹಾಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿ(Death)ಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ(Kundapura) ತಾಲೂಕಿನ ತೆಕ್ಕಟ್ಟೆ ಬಳಿ ನಿನ್ನೆ(ಜು.4) ತಡರಾತ್ರಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಮಳೆಯಿಂದಾಗಿ ಆಯತಪ್ಪಿ ಕೆರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ರ್ದುದೈವಿ.

ಹೋಟೆಲ್ ಕೆಲಸ ಮಾಡುವ ಮೃತ ದಿವಾಕರ್​ ಅವರು ನಿನ್ನೆ ರಾತ್ರಿ ಹೋಟೆಲ್ ಕೆಲಸ ಮುಗಿಸಿ ತೆಕ್ಕಟೆಯ ಮಲ್ಯಾಡಿ ಸಮೀಪ ಸ್ಕೂಟರ್​ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅವರಿಗೆ ಕಾಲು ನೋವು ಇದ್ದ ಹಿನ್ನೆಲೆಯಲ್ಲಿ ಇಳಿಯಲಾಗದೇ ಬೈಕ್ ಜೊತೆಗೆ ಜಾರಿ ಕೆರೆಗೆ ಉರುಳಿ ಸಾವನ್ನಪ್ಪಿದ್ದರು. ತಡರಾತ್ರಿ ಘಟನಾ ಸ್ಥಳಕ್ಕೆ ಮುಳುಗುತಜ್ಞ ಈಶ್ವರಮಲ್ಪೆ ಆಗಮಿಸಿ ಕಾರ್ಯಾಚರಣೆ ನಡೆಸಿ ಶವವನ್ನ ಮೇಲಕ್ಕೆ ತಗೆದಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರು-ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಹಟ್ಟಿಕೇಡಿ ಗ್ರಾಮದ ನಿವಾಸಿ ಭೀಮಣ್ಣ ಕಲ್ಲಪ್ಪ ಮುನ್ನೋಳಿ(51) ಮೃತ ವ್ಯಕ್ತಿ. ಆತನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ