Ramadan Eid 2021 Date: ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ

Eid in Coastal Karnataka: ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು ರಂಜಾನ್ ಹಬ್ಬ ಆಚರಿಸಲಾಗುತ್ತದೆ.

Ramadan Eid 2021 Date: ಕರಾವಳಿ ಕರ್ನಾಟಕದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಆಚರಣೆ
ಪ್ರಾರ್ಥನೆ (ಸಾಂದರ್ಭಿಕ ಚಿತ್ರ)
Follow us
guruganesh bhat
| Updated By: ಆಯೇಷಾ ಬಾನು

Updated on:May 12, 2021 | 6:43 AM

ಮಂಗಳೂರು: ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಮೇ 13ರಂದು ಗುರುವಾರವೇ ರಂಜಾನ್ ಹಬ್ಬ ಆಚರಿಸುವಂತೆ ಉಳ್ಳಾಲ ಖಾಜಿ ಸೈಯದ್​ ಕೂರತ್ ತಂಗಲ್ ಘೋಷಿಸಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ದುಬೈನಲ್ಲಿ ಗುರುವಾರದಂದು ರಂಜಾನ್ ಹಬ್ಬ ಆಚರಿಸಲಾಗುತ್ತದೆ.

ಈ ಬಾರಿ ಕೊವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಕಾರಣ ಈದುಲ್ ಫಿತ್ರ್ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸಬೇಕು. ಅತ್ಯಂತ ಸರಳವಾಗಿ ಆಚರಿಸಬೇಕು. ಬಡವರಿಗೆ ಹೆಚ್ಚಿನ ದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ ಹಾಝ್ ಅಹ್ಮದ್ ಮುಸ್ಲಿಯರ್ ಕರೆ ನೀಡಿದ್ದಾರೆ.

ಪವಿತ್ರ ಹಬ್ಬದ ಸಂಭ್ರಮಾಚರಣೆಯ ಸಮಯದಲ್ಲೇ ಕೊವಿಡ್ ಸೋಂಕು ಸಹ ಇರುವುದರಿಂದ ಹಬ್ಬದ ಆಚರಣೆ ಸೋಂಕಿನ ಹೆಚ್ಚಳ ಆಗಬಾರದು. ಎಲ್ಲರೂ ಮನೆಯಲ್ಲಿಯೇ  ಬೆಳಗಿನ ಪ್ರಾರ್ಥನೆ ಸಲ್ಲಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ರಂಜಾನ್ ಇಸ್ಲಾಮಿಕ್ ಕ್ಯಾಲೆಂಡರ್ನ್​ ಒಂಬತ್ತನೇ ತಿಂಗಳು, ಮತ್ತು ಇಸ್ಲಾಮಿಕ್ ನಂಬಿಕೆಗಳ ಪ್ರಕಾರ, ರಂಜಾನ್ ತಿಂಗಳಲ್ಲಿ ಪವಿತ್ರ ಕುರಾನ್ ಅನ್ನು ಪ್ರವಾದಿ ಮುಹಮ್ಮದ್ ಅವರಿಗೆ ಬಹಿರಂಗಪಡಿಸಲಾಯಿತು ಎಂದು ಹೇಳಲಾಗುತ್ತದೆ. ಈ ಪವಿತ್ರ ಹಬ್ಬವನ್ನು ಜಗತ್ತಿನಾದ್ಯಂತ ಮುಸ್ಲಿಮರು ಆಚರಿಸುತ್ತಾರೆ. ಜನರು ಮಸೀದಿಗಳಲ್ಲಿ ಒಟ್ಟುಗೂಡುತ್ತಾರೆ ಮತ್ತು ಈ ದಿನದಂದು ಸರ್ವಶಕ್ತನಾದ ಅಲ್ಲಾಹ್​ಗೆ ಪ್ರಾರ್ಥನೆ ಸಲ್ಲಿಸುತ್ತಾರೆ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಕೆಲವು ನಿರ್ಬಂಧನೆಗಳನ್ನು ಹೇರಲಾಗಿದ್ದು ಈ ಸಂಭ್ರಮಕ್ಕೆ ಕೊಂಚ ತಡೆ ಬಿದ್ದಿದೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ | ಕೊವಿಡ್ ಸುನಾಮಿ ಮಧ್ಯೆ ನಾಯಕತ್ವ ಬದಲಾವಣೆ ಚರ್ಚೆ ಹುಟ್ಟಿದ್ದೆಲ್ಲಿ? ರಾಜ್ಯ ಬಿಜೆಪಿ ಮುಂದಿನ ದಾರಿ ಯಾವುದು?

ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

9The top religious leaders of Coastal Karnataka have announced that the Eid will be celebrated on May 13)

Published On - 9:46 pm, Tue, 11 May 21

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್