AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರೂ ಮೂಕಾಂಬಿಕಾ ದೇವಸ್ಥಾನದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ: ಶಾಸಕ ಸುಕುಮಾರ ಶೆಟ್ಟಿ

ಕೊಲ್ಲೂರೂ ಮೂಕಾಂಬಿಕಾ ದೇವಸ್ಥಾನದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಪದ್ದತಿ ನಡೆಯಲ್ಲ ಎಂದು ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಹೇಳಿದ್ದಾರೆ.

ಕೊಲ್ಲೂರೂ ಮೂಕಾಂಬಿಕಾ ದೇವಸ್ಥಾನದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ: ಶಾಸಕ ಸುಕುಮಾರ ಶೆಟ್ಟಿ
ಶಾಸಕ ಸುಕುಮಾರ್​ ಶೆಟ್ಟಿ
TV9 Web
| Edited By: |

Updated on: Oct 08, 2022 | 6:14 PM

Share

ಉಡುಪಿ: ಕೊಲ್ಲೂರೂ ಮೂಕಾಂಬಿಕಾ (Kollur Mukambika) ದೇವಸ್ಥಾನದಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ (Salam Arati) ಪದ್ದತಿ ನಡೆಯಲ್ಲ ಎಂದು ಬೈಂದೂರು ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಹೇಳಿದ್ದಾರೆ. ನಾನು 40 ವರ್ಷದಿಂದ ಕೊಲ್ಲೂರು ದೇವಸ್ಥಾನದ ಭಕ್ತನಾಗಿದ್ದೇನೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಹತ್ತು ವರ್ಷಗಳ ಕಾಲ ಆಡಳಿತ ಮೊಕ್ತೇಸರನಾಗಿದ್ದೆ. ಕೊಲ್ಲೂರು ಮೂಕಾಂಬಿಕಾ ದೇವಿಯ ಭಕ್ತನಾಗಿ ನನಗೆ ತಿಳುವಳಿಕೆ ಇದೆ. ಕೊಲ್ಲೂರಿನಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಜೆ ಆಗುವ ಮಂಗಳಾರತಿ ಅದು ಪ್ರದೋಷ ಪೂಜೆ. ಸಲಾಂ ಮಂಗಳಾರತಿ ಎನ್ನುವುದಕ್ಕೆ ಯಾವುದೇ ದಾಖಲೆಗಳು ಲಿಖಿತ ರೂಪದಲ್ಲಿ ಇಲ್ಲ. ಪ್ರದೋಷ ಪೂಜೆ ಎಂದಿಗೂ ಸಲಾಂ ಆಗಲು ಸಾಧ್ಯವಿಲ್ಲ. ಪ್ರದೋಷ ಪೂಜೆಯನ್ನು ನಾವು ಸಲಾಂ ಎಂದು ಒಪ್ಪಲು ಸಾಧ್ಯವೂ ಇಲ್ಲ ಎಂದು ಹೇಳಿದರು.

ಹಿನ್ನೆಲೆ

ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ: 

ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ನಡೆಯುವ ಸಲಾಂ ಮಂಗಳಾರತಿ ಎಂಬ ಆರತಿಯ ಹೆಸರು ತೆಗೆಯುವಂತೆ ಆಗ್ರಹ ವ್ಯಕ್ತವಾಗಿತ್ತು. ಈ ಬಗ್ಗೆ ದೇಗುಲದ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿತ್ತು. ಟಿಪ್ಪು ಸುಲ್ತಾನ್ ನೆನಪಿಗಾಗಿ ನಡೆಯುವ ಮಂಗಳಾರತಿಯ ಸಲಾಂ ಮಂಗಳಾರತಿ ಎಂಬ ಹೆಸರನ್ನು ತೆಗೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಹೇಳಿತ್ತು.

ಟಿಪ್ಪು ಕ್ರೂರಿ, ಮತಾಂಧ, ಹಿಂದೂ ವಿರೋಧಿ ಎಂದು ವಿಹಿಂಪ ಹೇಳಿದೆ. ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ