ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ; ದೂರು ದಾಖಲು
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ, ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ.
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ (Udupi Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ (Video Record) ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಮಾತನಾಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವಿದ್ಯಾರ್ಥಿನಿ ಪ್ರತಿಭಟನೆಯಲ್ಲಿ ಕಾಲೇಜಿನ ಅವ್ಯವಸ್ಥೆಗಳ ಹೇಳಿದ್ದಳು.
ಈ ಹಿನ್ನೆಲೆ ಜು. 28 ರಂದು ಇನ್ಸ್ಟಾಗ್ರಾಮ್ನಲ್ಲಿ ಜಿಗರ್ ಕೋಬ್ರಾ ಎಂಬ ಹೆಸರಿನ ಖಾತೆಯಿಂದ ಬೆದರಿಕೆ, ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ. ಇದು ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ತಂದಿದೆ. ಈ ವಿಚಾರ ಹಿಂದೂ ಸಂಘಟನೆಗಳಿಗೆ ತಿಳಿದಿದೆ. ನಂತರ ಹಿಂದೂ ಸಂಘಟನೆಗಳು ಸಂದೇಶದ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Udupi News: ಉಡುಪಿ ಚಿತ್ರೀಕರಣ ಕೇಸ್: ತನಿಖಾಧಿಕಾರಿ ಬದಲಾಯಿಸಿದ ಉಡುಪಿ ಎಸ್‌ಪಿ ಅಕ್ಷಯ್
ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಸ್‌ಪಿ ಜೊತೆ ಸಮಾಲೋಚನೆ ಮಾಡಿದ ಬಳಿಕ ಕೆಟ್ಟ ಹಾಗೂ ಅಶ್ಲೀಲ ಸಂದೇಶ ಕಳುಹಿಸಿದವರ ವಿರುದ್ಧ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.