AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ಜಲಸಮಾಧಿ, ಓರ್ವ ವಿದ್ಯಾರ್ಥಿ ಬಚಾವ್

ಅವರು ಕೂಲಿ ಕಾರ್ಮಿಕರ ಮಕ್ಕಳು, ಜೀವನದಲ್ಲಿ ಬೆಟ್ಟದಷ್ಟು ಕನಸಿಟ್ಟುಕೊಂಡ ಪುಟ್ಟ ಮಕ್ಕಳು. ಆದರೆ ವಿಧಿಯಾಟ ಅವರ ಬಾಳನ್ನೇ ಇಲ್ಲವಾಗಿಸಿದೆ. ಮೀನಿಗೆ ಗಾಳ ಹಾಕಲೆಂದು ಸಮುದ್ರದಲ್ಲಿ ಇಳಿದಿದ್ದವರು ಮತ್ತೆ ಜೀವಂತವಾಗಿ ಬರಲೇ ಇಲ್ಲ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಮಕ್ಕಳು ಜಲಸಮಾಧಿಯಾಗಿದ್ದಾರೆ.

ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ಜಲಸಮಾಧಿ, ಓರ್ವ ವಿದ್ಯಾರ್ಥಿ ಬಚಾವ್
ಮಕ್ಕಳು ನೀರುಪಾಲಾದ ಕಿರಿಮಂಜೇಶ್ವರ ಕಡಲತೀರ
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on: Oct 15, 2025 | 7:22 AM

Share

ಉಡುಪಿ, ಅಕ್ಟೋಬರ್ 15: ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಕೊಡೇರಿಯ ಹೊಸಹಿತ್ಲು ಕಡಲ ತೀರದಲ್ಲಿ ನಡೆದಿರುವ ಈ ದುರಂತ, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ನೀರುಪಾಲಾದವರೆಲ್ಲರೂ ವಿದ್ಯಾಭ್ಯಾಸ ಮಾಡುತ್ತಿರುವ ಪುಟ್ಟ ಮಕ್ಕಳು. ನಾಲ್ಕು ಮಂದಿ ಮಕ್ಕಳು ಸಂಜೆ ವಾಲಿಬಾಲ್ ಆಟವಾಡಿ, ನಂತರ ಗಾಳ ಹಾಕಲೆಂದು ಕಡಲ ತೀರಕ್ಕೆ ಹೋಗಿದ್ದರು. ನೀರಿನ ಬಗ್ಗೆ ಅಂದಾಜು ಸಿಗದೆ ಮುಂದೆ ಹೋದ ಕಾರಣ, ಮುಳುಗಡೆಯಾಗಿದ್ದಾರೆ. ಈ ಪೈಕಿ ಈಜಿಕೊಂಡು ಬಚಾವಾಗಿ ಬಂದ ಬಾಲಕ ಸ್ಥಳದಲ್ಲಿ ಇದ್ದ ಮೀನುಗಾರರಿಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಕಡಲಿಗೆ ಹಾರಿ ಮೂವರು ಮಕ್ಕಳನ್ನು ಬಚಾವ್ ಮಾಡಲು ಮೀನುಗಾರರು ಪ್ರಯತ್ನಿಸಿದ್ದಾರೆ. ಕಡಲ ಮಕ್ಕಳ ಈ ಸಾಹಸ ಫಲ ನೀಡಲಿಲ್ಲ. ಅಷ್ಟರಲ್ಲಿಯೇ ಕಡಲ ಅಲೆಗಳಲ್ಲಿ ಮೂವರು ಮಕ್ಕಳು ಉಸಿರು ಚೆಲ್ಲಿದ್ದಾರೆ. ತಕ್ಷಣವೇ ಶವಗಳನ್ನು ಮೇಲಕ್ಕೆತ್ತಲಾಗಿದೆ.

ಕಿರಿಮಂಜೇಶ್ವರ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷ ವಯಸ್ಸಿನ ಆಶಿಶ್ ದೇವಾಡಿಗ, ಕಿರಿ ಮಂಜೇಶ್ವರ ಹೈಸ್ಕೂಲ್ನಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷ ವಯಸ್ಸಿನ ಸೂರಜ್ ಪೂಜಾರಿ ಹಾಗೂ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ 18 ವರ್ಷ ವಯಸ್ಸಿನ ಸಂಕೇತ ದೇವಾಡಿಗ ಮೃತ ಬಾಲಕರು. ಕೂಲಿ ಮಾಡಿ ಜೀವನ ನಡೆಸುವ ಮನೆಯಿಂದ ಬಂದ ಈ ಮಕ್ಕಳ ಈ ಸಾವನ್ನು ಅರಗಿಸಿಕೊಳ್ಳಲು ಕುಟುಂಬ ಮಾತ್ರವಲ್ಲ, ಊರಿನವರಿಗೂ ಸಾಧ್ಯವಾಗುತ್ತಿಲ್ಲ. ವಿಷಯ ತಿಳಿಯುತ್ತಿದ್ದಂತೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಮಕ್ಕಳ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು. ಕುಟುಂಬದವರಿಗೆ ಸಾಂತ್ವನ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಡಲ ತೀರಗಳಿಗೆ ಹೋಗುವ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು. ಹವಾಮಾನದ ವೈಪರೀತ್ಯಗಳನ್ನು ಅಂದಾಜಿಸಲು ಬರುವುದಿಲ್ಲ. ಸ್ಥಳೀಯರೇ ಇಲ್ಲಿ ದುರಂತದಲ್ಲಿ ಮೃತಪಟ್ಟಿರುವುದರಿಂದ ಬೇರೆ ಊರುಗಳಿಂದ ಬಂದವರು ಕಡಲಿಗಿಳಿಯುವಾಗ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ