ಉಡುಪಿ, ಜುಲೈ 22: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪದ(Placement of Mobile in Ladies Toilet) ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ. ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಘಟನೆ ನಡೆದಿದೆ.
ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಕೆಲ ಅನ್ಯ ಕೋಮಿನ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇನ್ನು ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಈ ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ಸಂಭವಿಸಿದೆ.
ಕಾಲೇಜಿನಲ್ಲಿ ವಿಡಿಯೋ ಶೂಟ್ ಮಾಡಿದ ಮೂವರು ವಿದ್ಯಾರ್ಥಿನಿಯರ ಜೊತೆ ಇತರೆ ವಿದ್ಯಾರ್ಥಿನಿಯರು ವಾಗ್ವಾದ ಮಾಡಿದ್ದಾರೆ. ಬಳಿಕ ಮಧ್ಯೆ ಪ್ರವೇಶ ಮಾಡಿದ ಆಡಳಿತ ಮಂಡಳಿ ಕ್ರಮ ತೆಗೆದುಕೊಂಡಿದೆ. ವಿಡಿಯೋ ಶೂಟ್ ಮಾಡಿದ ಮೂವರು ವಿದ್ಯಾರ್ಥಿನಿಯರ ಅಮಾನತು ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿವೆ. ಆದ್ರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪ್ರಕರಣ ದಾಖಲಿಸಿಲ್ಲ. ಸದ್ಯ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಯಿಂದ ಸೂಕ್ತ ತನಿಖೆ ಮಾಡಲು ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಯವರಿಗೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಇಂಟರ್ಸಿಟಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ; 25ಕ್ಕೂ ಹೆಚ್ಚು ಮಂದಿಗೆ ಗಾಯ
ಉಡುಪಿ, (ಜುಲೈ.20): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನಪ್ರಿಯ ದೈವ ಕೊರಗಜ್ಜ ಕರಾವಳಿ ಭಾಗದ ಆರಾಧ್ಯ ದೈವ. ಜನರು ಬೆಲೆ ಬಾಳುವ ವಸ್ತು ಕಳೆದು ಹೋದರೆ, ಆರೋಗ್ಯ ಸಮಸ್ಯೆ ಬಂದರೆ ಮೊದಲು ಹರಕೆ ಹೊತ್ತುಕೊಳ್ಳುವುದು ಕೊರಗಜ್ಜನಿಗೆ. ಹಲವೆಡೆ ಹರಕೆ ಈಡೇರಿದ ಉದಾಹರಣೆಗಳು ಸಹ ಇವೆ. ತನ್ನನ್ನು ಭಕ್ತಿಯಿಂದ ಪ್ರಾರ್ಥಿಸಿದವರಿಗೆ ಕ್ಷಿಪ್ರ ಫಲಿತಾಂಶ ಪರಿಹಾರವನ್ನು ಒದಗಿಸುವ ಮೂಲಕ ಕಾರಣಿಕ ಶಕ್ತಿಯನ್ನು ಮೆರೆಯುತ್ತಿರುವ ಕೊರಗಜ್ಜನ ಪವಾಡಕ್ಕೆ ಬೇಕಾದಷ್ಟು ನಿದರ್ಶನಗಳು ಸಿಕ್ಕಿವೆ. ಇದರ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜ ಪವಾಡ ನಡೆದಿದೆ. ರಾತ್ರಿ ನಿದ್ದೆ ಕಣ್ಣಿನಲ್ಲಿ ನಡೆಯುತ್ತಿದ್ದ ಮಗುವನ್ನು ತಡೆದು ನಿಲ್ಲಿಸಿದ ಕೊರಗಜ್ಜ ಪವಾಡ ಮೆರೆದಿದ್ದಾರೆ. ಉಡುಪಿಯ ಕುಂದಾಪುರ ಕೆದೂರು ಸಮೀಪದ ದಬ್ಬೆಕಟ್ಟೆಯಲ್ಲಿ ಮುಂಜಾನೆ 3 ಗಂಟೆಗೆ ಈ ಪವಾಡ ನಡೆದಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:57 am, Sat, 22 July 23