Udupi News: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಕಾನೂನು ವಿದ್ಯಾರ್ಥಿಗಳು; ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್​​

ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು.

Udupi News: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಮೂವರು ಕಾನೂನು ವಿದ್ಯಾರ್ಥಿಗಳು; ಇಬ್ಬರು ಅರೆಸ್ಟ್, ಓರ್ವ ಎಸ್ಕೇಪ್​​
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 11:44 AM

ಉಡುಪಿ: ಇತ್ತೀಚೆಗೆ ಡ್ರಗ್ಸ್(Drugs)​ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದನ್ನ ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಬಿಳುತ್ತಿಲ್ಲ. ಅದರಂತೆ ನೂತನ ಗೃಹ ಸಚಿವ ಜಿ.ಪರಮೇಶ್ವರ್(G. Parameshwara) ಅವರು ಡ್ರಗ್ಸ್ ಮುಕ್ತ ರಾಜ್ಯ ಮಾಡಲು ಪಣ ತೊಟ್ಟಿದ್ದೇನೆ ಎಂದಿದ್ದರು. ಅದರ ಬೆನ್ನಲ್ಲೇ ಇದೀಗ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ ತಲೆಮರೆಸಿಕೊಂಡಿದ್ದು, ಹುಡುಕಾಟ ಆರಂಭಿಸಿದ್ದಾರೆ.

ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್‌ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು

ಹೌದು ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ಚರ ನಗರದಲ್ಲಿ ಈ ಮೂವರು ಗಾಂಜಾ ಮಾರುತ್ತಿದ್ದರು. ಈ ವೇಳೆ ದಾಳಿದ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಬರೊಬ್ಬರಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್‌ (MDMA) ಮಾದಕ ದ್ರವ್ಯವನ್ನ ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್‌ ಬೈಕ್‌ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್‌ ಫೋನ್​ಗಳನ್ನ ವಶಕ್ಕೆ ಪಡೆಯಲಾಗಿದೆ. ಈ ವೇಳೆ ತಲೆಮರೆಸಿಕೊಂಡ ಮತ್ತೋರ್ವ ಆರೋಪಿ ಅಪ್ಸಿನ್ ಗಾಗಿ ಪೊಲೀಸರು ಬಲೆಬೀಸಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:KP Chowdary: ಡ್ರಗ್ಸ್​ ಮಾರಾಟ ಮಾಡುತ್ತಿದ್ದ ‘ಕಬಾಲಿ’ ಸಿನಿಮಾ ನಿರ್ಮಾಪಕ ಕೆ.ಪಿ. ಚೌದರಿ ಬಂಧನ; 90 ಪಾಕೆಟ್​ ಮಾದಕ ವಸ್ತು ವಶ

ಡ್ರಗ್ಸ್​ ಮುಕ್ತ ರಾಜ್ಯ ಮಾಡಲು ಪಣತೊಟ್ಟ ಗೃಹ ಸಚಿವರು

ಇತ್ತೀಚೆಗಷ್ಟೇ ತುಮಕೂರಿನಲ್ಲಿ ಗೃಹ ಸಚಿವ ಜಿ.ಪರಮೇಶ್ವರ್​ ಅವರು ರಾಜ್ಯದಲ್ಲಿ ಡ್ರಗ್ಸ್ ವಿಚಾರವಾಗಿ ದೊಡ್ಡ ಆಂದೋಲನವನ್ನು ಆರಂಭ ಮಾಡುತ್ತದ್ದೇನೆ. ರಾಜ್ಯಾದ್ಯಂತ ಡ್ರಗ್ಸ್​ ದಂಧೆಗೆ ಕಡಿವಾಣ ಹಾಕಲು ಮಾಸ್ಟರ್ ಪ್ಲಾನ್ ಮಾಡಿದ್ದು, ತುಮಕೂರು‌ನಿಂದಲೇ ಆರಂಭ ಮಾಡಬೇಕೆಂದು ನಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದಿದ್ದರು. ಇನ್ನು ಇನ್ಸ್​ಪೆಕ್ಟರ್​ನಿಂದ ಮೇಲಿನ ಹಂತದ ಅಧಿಕಾರಿಗಳು ತಿಂಗಳಿಗೊಮ್ಮೆ ಶಾಲಾ ಕಾಲೇಜುಗಳಿಗೆ ಭೇಟಿ ಕೊಡಬೇಕು. ವಿದ್ಯಾರ್ಥಿಗಳಿಗೆ ಕಾನೂನು ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ