ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್, ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಸಿಕ್ಕಿದೆ.

ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್, ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು
ಪ್ರಾತಿನಿಧಿಕ ಚಿತ್ರ
Follow us
H P
| Updated By: ರಮೇಶ್ ಬಿ. ಜವಳಗೇರಾ

Updated on:Jul 28, 2023 | 2:33 PM

ಉಡುಪಿ, (ಜುಲೈ 28): ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದ ಎಬ್ಬಿಸಿದ್ದ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ. ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Udupi New: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿಯರ ವಿರುದ್ಧ ಎಫ್​ಐಆರ್ ದಾಖಲು

ಮತ್ತೊಂದೆಡೆ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆಗಳಿದಿವೆ. ಇದರ ಮಧ್ಯೆ ವಿದ್ಯಾರ್ಥಿನಿಯರು  ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣದ ತನಿಖೆಯ ವರದಿ ಪಡೆದ ಐಜಿಪಿ ಡಾ.ಚಂದ್ರಗುಪ್ತಾ

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ಬಗ್ಗೆ ವರದಿ ಪಡೆಯಲು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತಾ ಉಡುಪಿಗೆ ಭೇಟಿ ನೀಡಿದ್ದಾರೆ. ಪೊಲೀಸರ ತನಿಖೆ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಖುದ್ದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತಾ ಇಂದು (ಜುಲೈ 28) ಉಡುಪಿಗೆ ಭೇಟಿ ನೀಡಿ ಪ್ರಕರಣದ ವರದಿ ಪಡೆದುಕೊಂಡರು. ತನಿಖಾಧಿಕಾರಿ ಮಂಜುನಾಥ ಗೌಡ ಅವರಿಂದ ಪ್ರಕರಣದ ವರದಿ ಪಡೆದುಕೊಂಡರು.

ಈಗಾಗಲೇ ಕಾಲೇಜು ಆಡಳಿತ ಮಂಡಳಿ ಮೂರು ಮೊಬೈಲ್​ಗಳನ್ನು ಪೊಲೀಸ್ ವಶಕ್ಕೆ ನೀಡಿದೆ. ಆದ್ರೆ, ಮೊಬೈಲ್ ಜಾಲಡಿದರೂ ಏನು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು, ಮೊಬೈಲ್​ಗಳನ್ನು ಬೆಂಗಳೂರು ಎಸ್​ಎಸ್​ಎಲ್​ಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಮೊಬೈಲ್ ನಲ್ಲಿ ದಾಖಲಾಗಿರುವ ಎಲ್ಲಾ ವಿಡಿಯೋ ಚಿತ್ರಗಳನ್ನು ರಿಟ್ರೈವ್ ಮಾಡಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನು ರಾಷ್ಟ್ರೀ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಬಳಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣದ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Fri, 28 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ