ಉಡುಪಿ, (ಜುಲೈ 28): ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದ ಎಬ್ಬಿಸಿದ್ದ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ. ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Udupi New: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲು
ಮತ್ತೊಂದೆಡೆ ವಿದ್ಯಾರ್ಥಿನಿಯರನ್ನು ಬಂಧಿಸುವಂತೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆಗಳಿದಿವೆ. ಇದರ ಮಧ್ಯೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.
ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ಬಗ್ಗೆ ವರದಿ ಪಡೆಯಲು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತಾ ಉಡುಪಿಗೆ ಭೇಟಿ ನೀಡಿದ್ದಾರೆ. ಪೊಲೀಸರ ತನಿಖೆ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಖುದ್ದು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತಾ ಇಂದು (ಜುಲೈ 28) ಉಡುಪಿಗೆ ಭೇಟಿ ನೀಡಿ ಪ್ರಕರಣದ ವರದಿ ಪಡೆದುಕೊಂಡರು. ತನಿಖಾಧಿಕಾರಿ ಮಂಜುನಾಥ ಗೌಡ ಅವರಿಂದ ಪ್ರಕರಣದ ವರದಿ ಪಡೆದುಕೊಂಡರು.
ಈಗಾಗಲೇ ಕಾಲೇಜು ಆಡಳಿತ ಮಂಡಳಿ ಮೂರು ಮೊಬೈಲ್ಗಳನ್ನು ಪೊಲೀಸ್ ವಶಕ್ಕೆ ನೀಡಿದೆ. ಆದ್ರೆ, ಮೊಬೈಲ್ ಜಾಲಡಿದರೂ ಏನು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು, ಮೊಬೈಲ್ಗಳನ್ನು ಬೆಂಗಳೂರು ಎಸ್ಎಸ್ಎಲ್ಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಮೊಬೈಲ್ ನಲ್ಲಿ ದಾಖಲಾಗಿರುವ ಎಲ್ಲಾ ವಿಡಿಯೋ ಚಿತ್ರಗಳನ್ನು ರಿಟ್ರೈವ್ ಮಾಡಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನು ರಾಷ್ಟ್ರೀ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿ ಬಳಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣದ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:01 pm, Fri, 28 July 23