ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ನಡೆದಿದೆ.

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಉಡುಪಿ: ಈಜಲು ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿರುವ ಶಿವಪುರ ಹೊಳೆಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳು ಹಿರಿಯಡ್ಕ ಸರ್ಕಾರಿ ಪದವಿ ಪೂರ್ವ ಕಾಲೇಜಿನವರು. ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 ) ಸಾವಿಗೀಡಾದ ವಿದ್ಯಾರ್ಥಿಗಳು. ಸ್ಥಳೀಯರು ಮೃತಪಟ್ಟ ಮೂವರ ಮೃತದೇಹಗಳನ್ನೂ ಮೇಲಕ್ಕೆ ಎತ್ತಿದ್ದಾರೆ. ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಯಿಗೆ ಮೊಬೈಲ್‌ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ್ದ ಬಾಲಕಿ ಸೇಫ್​
ಹಾಸನ:ನಗರದ ಹೊರವಲಯದ ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಲಾಗಿದೆ. ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ. ಪೂರ್ವಿಕಾ ಪೊದೆಯೊಂದರಲ್ಲಿ ನಿತ್ರಾಣಗೊಂಡಿದ್ದಳು. ಬಾಲಕಿ ಪೂರ್ವಿಕಾಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಗಿನ ಸುದ್ದಿ:
ಹದಿಹರೆಯದ ಬಾಲಕಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹಾಸನ ಹೊರವಲಯದ ಕೆರೆಯಲ್ಲಿ ಘಟನೆ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಸಾದ್ ಮತ್ತು ಸುಬ್ಬಲಕ್ಷ್ಮಿ ಎಂಬುವವರ ಪುತ್ರಿ ಪೂರ್ವಿಕಾ. ತಾಯಿ ಮೊಬೈಲ್‌ಗೆ ‌ಮೆಸೇಜ್ ಕಳುಹಿಸಿ ಬೆಳಗಿನ ಜಾವ ಮನೆಯಿಂದ ಹೊರ ಹೋಗಿರುವ ವಿದ್ಯಾರ್ಥಿನಿ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ‘ ಎಂದು ತಾಯಿ ಮೊಬೈಲ್ ಗೆ ಪೂರ್ವಿಕಾ ಮೆಸೇಜ್ ಮಾಡಿದ್ದಳು.

ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click on your DTH Provider to Add TV9 Kannada