ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇಗುಲಗಳಲ್ಲಿ ಆಗಸ್ಟ್ 5ರಿಂದ 15ರವರೆಗೆ ಸೇವೆ ಸ್ಥಗಿತ
ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗಿರುವ ಕಾರಣ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಗಳಲ್ಲಿ ಆಗಸ್ಟ್ 5 ಶುಕ್ರವಾರದಿಂದ ಆಗಸ್ಟ್ 15ರವರೆಗೆ ಸೇವೆ ಸ್ಥಗಿತಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಶನಿವಾರ, ಭಾನುವಾರದಂದು ಭಕ್ತರ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ.
ನಿತ್ಯ ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಮಾತ್ರ ಭಕ್ತರಿಗೆ ಅವಕಾಶ. ದೇವರ ದರ್ಶನ, ವಸತಿ ಗೃಹಗಳಲ್ಲಿ ತಂಗುವುದಕ್ಕೂ ನಿಷೇಧ. ದೇಗುಲಗಳಲ್ಲಿ ತೀರ್ಥಪ್ರಸಾದ, ಸೇವೆ, ಅನ್ನಸಂತರ್ಪಣೆ ಬಂದ್ ಮಾಡಲಾಗಿದೆ. ವಸತಿ ಗೃಹಗಳಲ್ಲಿ ತಂಗುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಆದೇಶದಲ್ಲಿ ಹೇಳಿದೆ
ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ
ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗಿರುವ ಕಾರಣ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ. ಉಡುಪಿ ಜಿಲ್ಲೆಗಳಲ್ಲಿ ಪಬ್ಗಳಿಗೆ, ಈಜುಕೊಳ, ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ, ರಾಜಕೀಯ, ಸಾರ್ವಜನಿಕ ಸಮಾರಂಭಗಳಿಗೆ ಅವಕಾಶವಿಲ್ಲ.
ಕೌಟುಂಬಿಕ ಕಾರ್ಯಕ್ರಮಗಳಿಗೆ 100 ಜನರಿಗೆ ಅವಕಾಶ ನೀಡಲಾಗಿದ್ದು, ದೇವಸ್ಥಾನಗಳಲ್ಲಿ ಜಾತ್ರೆ, ಉತ್ಸವ ಮೆರವಣಿಗೆಗೆ ಅವಕಾಶವಿಲ್ಲ.
ಸಾರ್ವಜನಿಕ ಸಾರಿಗೆಯಲ್ಲಿ ನಿಂತು ಪ್ರಯಾಣಿಸಿದರೆ ದಂಡ ವಿಧಿಸಲಾಗುವುದು. ಚಿತ್ರಮಂದಿರದಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್
ಇದನ್ನೂ ಓದಿ: ಪ್ರತಿಪಕ್ಷಗಳನ್ನು ವಿಭಜಿಸಲು ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆ: ಟಿಎಂಸಿ
(Three temple closed Dakshina Kannada district from August 5 to 15)