ಉಡುಪಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ಗೆ ಇಬ್ಬರು ಸಾವು, ದಾವಣಗೆರೆಯಲ್ಲಿ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢ
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಬ್ಲ್ಯಾಕ್ ಫಂಗಸ್ನಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.
ಉಡುಪಿ: ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಇಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರದುರ್ಗ, ಹಾವೇರಿ ಜಿಲ್ಲೆಯ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಬ್ಲ್ಯಾಕ್ ಫಂಗಸ್ನಿಂದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.
ಮೃತರಲ್ಲಿ ಒಬ್ಬ ವ್ಯಕ್ತಿ 45 ವರ್ಷ ಪ್ರಾಯದ ಪುರುಷ ಮತ್ತೊಬ್ಬರು 43 ವರ್ಷ ಪ್ರಾಯದ ಮಹಿಳೆ. ಜಿಲ್ಲೆಯಲ್ಲಿ ಒಟ್ಟು ಎಂಟು ಮಂದಿ ಕಪ್ಪು ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿಗೆ ಕೆಎಂಸಿ ಮಣಿಪಾಲದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆ 122ಕ್ಕೆ ಏರಿಕೆಯಾಗಿದೆ. 89 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಕರ್ನಾಟಕದಲ್ಲಿ ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢ; 30 ಮಂದಿ ಸಾವು ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 23) ಹೊಸದಾಗಿ 1,705 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,91,699 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,31,226 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 30 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,323 ಜನ ಮೃತರಾಗಿದ್ದಾರೆ. ರಾಜ್ಯದಲ್ಲಿ 24,127 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 400 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,044ಕ್ಕೆ ಏರಿಕೆಯಾಗಿದೆ. 12,24,044 ಸೋಂಕಿತರ ಪೈಕಿ 11,99,859 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,820 ಜನ ಸಾವನ್ನಪ್ಪಿದಂತಾಗಿದೆ. ಬೆಂಗಳೂರಲ್ಲಿ 8364 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
(Two died due to black fungus in Manipal one infected in Davanagere)
ಇದನ್ನೂ ಓದಿ: Black Fungus: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಸಿಗುತಿಲ್ಲ ಔಷಧಿ, ಮಾತ್ರೆಗಳಿಗಾಗಿ ಜಿಲ್ಲಾಸ್ಪತ್ರೆಗೆ ಅಲೆದಾಟ
ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗಡಿಪಡಿಸಿದ ಸರ್ಕಾರ; ಎಷ್ಟು ದರ ಎಂಬ ಮಾಹಿತಿ ಇಲ್ಲಿದೆ