ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲು
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಅಳ್ವೆ ಗದ್ದೆ ಬಳಿ ಮೀನುಗಾರಿಕೆಗೆ ತೆರಳಿದ ಇಬ್ಬರು ಮೀನುಗಾರರು ಆಯತಪ್ಪಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ನಡೆದಿದೆ. ಮೀನುಗಾರರು ಸಮುದ್ರ ಪಾಲದ ಕುರಿತು ಉಳಿದ ಇಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ, ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಉಡುಪಿ, ಆಗಸ್ಟ್ 27: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲಾದ ಘಟನೆ ಜಿಲ್ಲೆಯ (Udupi) ಬೈಂದೂರು ತಾಲೂಕಿನ ಶಿರೂರು ಅಳ್ವೆ ಗದ್ದೆ ಬಳಿ ನಡೆದಿದೆ. ಗಂಗೊಳ್ಳಿ ಗ್ರಾಮದ ಮುಸಾಬ್ (22) ಮತ್ತು ನಜಾನ್ (24) ಕಾಣೆಯಾದ ಮೀನುಗಾರರು.
ನಾಲ್ವರು ಮೀನುಗಾರರು ಕೈರಂಪಣಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದರು. ಅದರಂತೆ ಬಲೆ ಬೀಸುತ್ತಿದ್ದಾಗ ನಾಲ್ವರ ಪೈಕಿ ಇಬ್ಬರು ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಉಳಿದ ಇಬ್ಬರು ಕೂಡಲೇ ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಿಲ್ಲ. ಹೀಗಾಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಆನೇಕಲ್ನ ಮಾಯಸಂದ್ರ ಕೆರೆಯಲ್ಲಿ ಬಲೆಗೆ ಬಿದ್ದ ವಿಚಿತ್ರ ಮೀನುಗಳು
ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಮುಸಾಬ್ ಮತ್ತು ನಜಾನ್ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ