ಬನ್ನಂಜೆ ನಾರಾಯಣ ಗುರು ಮಂದಿರಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆ: ಅನಾಮಿಕ ವ್ಯಕ್ತಿ ವಿರುದ್ಧ ದೂರು

ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ರಾಮಧ್ವಜ ಅಳವಡಿಸದ ವಿಚಾರವಾಗಿ ಅನಾಮಿಕ ವ್ಯಕ್ತಿ ಓರ್ವ ಉಡುಪಿ ನಗರದ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವಂತಹ ಘಟನೆ ನಡೆದಿದೆ. ಬನ್ನಂಜೆ ರಾಮಮಂದಿರ ಅಧ್ಯಕ್ಷ ಮಾಧವ ಬನ್ನಂಜೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಿಂದಿಸಿದ ವ್ಯಕ್ತಿ ಕ್ಷೇತ್ರಕ್ಕೆ ಬಂದು ಕ್ಷಮೆ ಯಾಚಿಸಬೇಕು. ನಿಂದಿಸಲು ಕಾರಣ ಏನು ಎಂಬುದನ್ನು ನಮಗೆ ಮನವರಿಕೆ ಮಾಡಬೇಕು ಎಂದು ಹೇಳಿದ್ದಾರೆ.

ಬನ್ನಂಜೆ ನಾರಾಯಣ ಗುರು ಮಂದಿರಕ್ಕೆ ಅವಾಚ್ಯ ಶಬ್ದಗಳಿಂದ ನಿಂದನೆ: ಅನಾಮಿಕ ವ್ಯಕ್ತಿ ವಿರುದ್ಧ ದೂರು
ಎಸ್‌ಪಿಗೆ ದೂರು ನೀಡಿದ ಆಡಳಿತ ಮಂಡಳಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 24, 2024 | 3:02 PM

ಉಡುಪಿ, ಜನವರಿ 24: ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ರಾಮಧ್ವಜ ಅಳವಡಿಸದ ವಿಚಾರವಾಗಿ ಅನಾಮಿಕ ವ್ಯಕ್ತಿ ಓರ್ವ  ಉಡುಪಿ ನಗರದ ಬನ್ನಂಜೆ ನಾರಾಯಣ ಗುರು ಮಂದಿರ (Narayana Guru Mandir) ಕ್ಕೆ ಅವಾಚ್ಯ ಶಬ್ದಗಳಿಂದ  ನಿಂದಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ವಿಚಾರವಾಗಿ ಮಂದಿರದ ಆಡಳಿತ ಮಂಡಳಿಯಿಂದ ಉಡುಪಿ ಎಸ್‌ಪಿಗೆ ದೂರು ನೀಡಲಾಗಿದ್ದು, ಆರೋಪಿ ಯಾರೆಂದು ಕೂಡಲೇ ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದೆ. ಬನ್ನಂಜೆ ರಾಮಮಂದಿರ ಅಧ್ಯಕ್ಷ ಮಾಧವ ಬನ್ನಂಜೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ನಿಂದಿಸಿದ ವ್ಯಕ್ತಿ ಕ್ಷೇತ್ರಕ್ಕೆ ಬಂದು ಕ್ಷಮೆ ಯಾಚಿಸಬೇಕು. ನಿಂದಿಸಲು ಕಾರಣ ಏನು ಎಂಬುದನ್ನು ನಮಗೆ ಮನವರಿಕೆ ಮಾಡಬೇಕು ಎಂದು ಹೇಳಿದ್ದಾರೆ.

ಬನ್ನಂಜೆ ನಾರಾಯಣ ಗುರು ಸಂಘ 80 ವರ್ಷದಿಂದ ಸಾಮಾಜಿಕ ಚಟುವಟಿಕೆ ಮಾಡುತ್ತಿದೆ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರತಿಷ್ಠಾಪನೆ ದಿನ ನಾವು ವಿಶೇಷ ಪೂಜೆ ನೆರವೇರಿಸಿದ್ದೇವೆ. ಆದರೆ ಮಂದಿರದ ಆವರಣದಲ್ಲಿ ಧ್ವಜ ಮಾತ್ರ ಅಳವಡಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಎಫ್​ಐಆರ್​ ಮಾಡುವ ಬಗ್ಗೆ ಚಿಂತನೆ: ಉಡುಪಿ ಎಸ್​ಪಿ ಅರುಣ್

ಉಡುಪಿ ಎಸ್​ಪಿ ಅರುಣ್​ ಮಾತನಾಡಿ, ಬನ್ನಂಜೆ ನಾರಾಯಣ ಗುರು ಮಂದಿರದ ಆಡಳಿತ ಮಂಡಳಿ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ದೂರಿನ ಆಧಾರದ ಮೇಲೆ ತಾಂತ್ರಿಕವಾಗಿ ತನಿಖೆ ನಡೆಸುತ್ತೇವೆ. ಈ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಎಫ್​ಐಆರ್​ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಶ್ರೀರಾಮನ ಅವಹೇಳನ: ಇಬ್ಬರು ಆರೋಪಿಗಳು ವಶಕ್ಕೆ 

ಕೋಲಾರ: ಅಯೋಧ್ಯ ಶ್ರೀರಾಮನ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯ ಪೋಸ್ಟ್​ ಮಾಡಿದ ಇಬ್ಬರು ಆರೋಪಿಗಳನ್ನ ಬೇತಮಂಗಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀರಾಮನ ಅವಹೇಳನ ಮಾಡಿದ ಇಬ್ಬರು ಪುಂಡರನ್ನ ಕೋಲಾರ ಜಿಲ್ಲೆಯ ಕೆಜಿಎಫ್‌ನ ಬೇತಮಂಗಲ ಪೊಲೀಸರು ವಶಕ್ಕೆ ಪಡೆದಿದ್ದು, ಶ್ರೀರಾಮನ ಪೋಟೊ ಹಾಕಿ ಅನ್ಯ ಧರ್ಮದ ಗುಂಬಜ್ ಫೊಟೊ ಹಾಕಿ ಅಶ್ಲೀಲವಾಗಿ ಕಾಮೆಂಟ್ ಮಾಡಿ ವಿಡಿಯೊ ಹರಿಬಿಟ್ಟಿದ್ದರು.

ಇದನ್ನೂ ಓದಿ: ರಾಯಚೂರು: 50 ಚೀಲ ಜೋಳ ಮಾರಿ ಅಯೋಧ್ಯೆಯ ರಾಮ ಮಂದಿರಕ್ಕೆ ದೇಣಿಗೆ ನೀಡಿದ ರೈತ

ಈ ಹಿನ್ನೆಲೆಯಲ್ಲಿ ಇಬ್ಬರನ್ನ ಹಿಡಿದು ಪೊಲೀಸರಿಗೆ ಬೇತಮಂಗಲದ ಹಿಂದೂ ಸಂಘಟನೆ ಮುಖಂಡರು ಒಪ್ಪಿಸಿದ್ದಾರೆ. ಇನ್ನೂ ಜುಬೇರ್ ಹಾಗೂ ಮುಬಾರಕ್ ಇಬ್ಬರು ಯುವಕರು ಪೊಲೀಸರು ವಶಕ್ಕೆ ಪಡೆದಿದ್ದು, ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಯುವಕರಿಬ್ಬರ ಮೇಲೆ ಕಾನೂನು ಕ್ರಮಕ್ಕೆ ಹಿಂದೂ ಸಂಘಟನೆ ಮುಖಂಡರ ಒತ್ತಾಯ ಮಾಡಿದ್ದು, ಬೇತಮಂಗಲ ಪೊಲೀಸರಿಂದ ಇಬ್ಬರ ಯುವಕರನ್ನ ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ಮಾಡಲಾಗುತ್ತಿದೆ ಎಂದು ಕೆಜಿಎಫ್ ಎಸ್ಪಿ ಶಾಂತರಾಜು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Wed, 24 January 24

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು