ಉಡುಪಿ, ಡಿಸೆಂಬರ್ 30: ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿ ಆದೇಶ ಹೊರಡಿಸಿದೆ. ಆರೋಪಿ ಪ್ರವೀಣ್ ಚೌಗುಲೆ (Praveen Chowgule) ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಡಿಸೆಂಬರ್ 14ರಂದು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಅರ್ಜಿ ಸಲ್ಲಿಸಿದ್ದ.
ಜಾಮೀನಿಗೆ ಸರ್ಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಧೀಶ ದಿನೇಶ್ ಹೆಗ್ಡೆ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಒಂದೇ ಕುಟುಂಬದ 4 ಹತ್ಯೆ ಕೇಸ್: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಪ್ರವೀಣ್ ಚೌಗುಲೆ
ಒಂದೇ ಕಂಪನಿಯಲ್ಲಿ ಜೊತೆ ಜೊತೆಗೆ ಕೆಲಸ ಮಾಡ್ತಿದ್ದವನೇ ಇರಿದು ಇರಿದು ಕೊಂದಿದ್ದ. ಹಲವಾರು ಬಾರಿ ಸಹಾಯ ಮಾಡಿದ್ದವನೇ ಮಾಡ ಬಾರದ ಕೆಲಸ ಮಾಡಿದ್ದ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನಾಲ್ವರ ಹತ್ಯೆ ಪ್ರಕರಣದಲ್ಲಿ ಮತ್ತಷ್ಟು ಸಂಗತಿಗಳು ಬಯಲಾಗಿವೆ. ಪೊಲೀಸರು ಒಂದು ಹಂತದ ತನಿಖೆ ಮುಗಿಸಿದ್ದಾರೆ.
ಇದನ್ನೂ ಓದಿ: ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಕೇಸ್: ಒಬ್ಬಳ ಮೇಲಿನ ದ್ವೇಷ ನಾಲ್ವರನ್ನ ಹತ್ಯೆಗೈದಿದ್ದ ಹಂತಕ ಮಾಜಿ ಪೊಲೀಸ್
ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಮಾಡಿದ್ದ ಆರೋಪಿ ಪೊಸೆಸಿವ್ನೆಸ್ನಿಂದ ಕೊಲೆ ಮಾಡಬೇಕೆಂದು ಪೂರ್ವಸಿದ್ಧತೆ ಮಾಡಿಕೊಂಡಿದ್ನಂತೆ. ಆರೋಪಿ ಪ್ರವೀಣ್ ಜತೆ ಅಯ್ನಾಝ್ ಒಂದು ತಿಂಗಳಿಂದ ಸರಿಯಾಗಿ ಮಾತನಾಡ್ತಿರಲಿಲ್ವಂತೆ. ಹೀಗಾಗಿ ಕೊಲೆ ಮಾಡಬೇಕೆಂದು ಸ್ಕೆಚ್ ಹಾಕಿದ್ನಂತೆ. ಕೊಲೆ ಮಾಡುವ ದಿನ ಟೋಲ್ ಗೇಟ್ ಬಳಿ ಕಾರು ಬಿಟ್ಟು ಬೇರೆ ವಾಹನದಲ್ಲಿ ಡ್ರಾಪ್ ಪಡೆದುಕೊಂಡು ತೃಪ್ತಿನಗರಕ್ಕೆ ಬಂದಿದ್ನಂತೆ. ಹತ್ಯೆ ಬಳಿಕ ಚಾಕು ಮನೆಯಲ್ಲೇ ಇಟ್ಟು ಹೆಂಡತಿಯ ಸಂಬಂಧಿಕರ ಮನೆಗೆ ಹೋಗಿದ್ನಂತೆ.
ಪ್ರಕರಣ ಸಂಬಂಧ ಕುಟುಂಬಸ್ಥರು ಮಾತನಾಡಿ, ಹಂತಕನ ವಿರುದ್ಧ ಕಠಿಣ ಕ್ರಮಕ್ಕೆ ಪಟ್ಟು ಹಾಕಿದ್ದರು. ಇನ್ನು, ಕೆಲಸ ಮಾಡೋ ಸ್ಥಳದಲ್ಲಿ ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ. ಇದು ಕೊನೆ ಆಗ್ಬೇಕೆಂದು ಆಗ್ರಹಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:55 pm, Sat, 30 December 23