AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಹರಕೆ ಈಡೇರಿತೆಂದು ಕೊರಗಜ್ಜನಿಗೆ 1002 ಬಾಟಲಿ ಮದ್ಯ ಅರ್ಪಿಸಿದ ಭಕ್ತ! ಆತನ ಹರಕೆ ಏನಿತ್ತು?

ಉಡುಪಿಯ ಪೇಟೆ ಬೆಟ್ಟು ಶ್ರೀ ಭಗವಾನ್ ಶ್ರೀ ಬಬ್ಬು ಸ್ವಾಮಿ ದೇವಸ್ಥಾನ ಕಟಪಾಡಿ ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಪ್ರತಿ ದಿನ ಭಕ್ತರು ಹರಕೆಯ ರೂಪದಲ್ಲಿ ಚಕ್ಕುಲಿ, ಬೀಡಾ, ವೀಳ್ಯದೆಲೆ, ಮದ್ಯದ ಬಾಟಲಿ ಸಲ್ಲಿಸುತ್ತಾರೆ. ಹರಕೆಯ ರೂಪದಲ್ಲಿ ಸಮರ್ಪಿಸಲಾದ ಮದ್ಯವನ್ನು ನಂತರ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರಿಗೆ ಮನೆಗೆ ತೆಗೆದುಕೊಂಡು ಹೋಗುವಂತೆ ನೀಡಲಾಗುತ್ತದೆ.

ಉಡುಪಿ: ಹರಕೆ ಈಡೇರಿತೆಂದು ಕೊರಗಜ್ಜನಿಗೆ 1002 ಬಾಟಲಿ ಮದ್ಯ ಅರ್ಪಿಸಿದ ಭಕ್ತ! ಆತನ ಹರಕೆ ಏನಿತ್ತು?
ಹರಕೆ ಈಡೇರಿತೆಂದು ಕೊರಗಜ್ಜನಿಗೆ 1002 ಬಾಟಲಿ ಮದ್ಯ ಸಮಾರಾಧನೆ ಮಾಡಿದ ವ್ಯಕ್ತಿ!
ಪ್ರಜ್ವಲ್ ಅಮೀನ್​, ಉಡುಪಿ
| Updated By: ಸಾಧು ಶ್ರೀನಾಥ್​|

Updated on: Dec 08, 2023 | 12:08 PM

Share

ತುಳುನಾಡ ಕೊರಗಜ್ಜ ಸ್ವಾಮಿಗೆ (Koragajja Swamy) ಮದ್ಯದ ಸಮಾರಾಧನೆ ಎಂದರೆ ಬಹಳ ಅಚ್ಚುಮೆಚ್ಚು. ಜೊತೆಗೆ ಚಕ್ಕುಲಿ, ಬೀಡಾ ಕೊಟ್ಟರಂತೂ ಇನ್ನೂ ಪ್ರೀತಿ. ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿಸಿದರು ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮದ್ಯದ (Liquor) ಸಮಾರಾಧನೆ ಮಾಡಿದ್ದಾರೆ! ಉಡುಪಿಯಲ್ಲಿ ನಡೆದ ಅಪರೂಪದ ಹರಕೆ ತೀರಿಸುವ ಕಾರ್ಯಕ್ರಮದ ಬಗ್ಗೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಕರಾವಳಿಯ ದೈವರಾದನೆಯು ಜನರ ನಂಬಿಕೆಯ ಮೇಲೆ ನಿಂತಿದೆ. ಭಕ್ತರ ಬೇಡಿಕೆಯನ್ನು ಕ್ಷಣಮಾತ್ರದಲ್ಲಿ ಈಡೇರಿಸುವ ಕಾರ್ಣಿಕ ಮೆರೆಯುತ್ತಿರುವ ತುಳುನಾಡಿನ ಮೆಚ್ಚಿನ ದೈವ, ಸ್ವಾಮಿ ಕೊರಗಜ್ಜನಿಗೆ ಭಕ್ತರ ಹರಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕರಾವಳಿ ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದಲೂ ಸ್ವಾಮಿ ಕೊರಗಜ್ಜರ ಭಕ್ತರು ಕ್ಷೇತ್ರಗಳಿಗೆ ಬರುತ್ತಾರೆ. ಉಡುಪಿ ಜಿಲ್ಲೆ (Udupi) ಕಟಪಾಡಿ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಮತ್ತು ಶ್ರೀ ಸ್ವಾಮಿಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಹೊತ್ತ ವ್ಯಕ್ತಿಯೊಬ್ಬರು (Devotee) ಪವಾಡವೋ ಎಂಬಂತೆ ತನ್ನ ಬಯಕೆಯನ್ನು ಈಡೇರಿಸಿಕೊಂಡಿದ್ದಾರೆ.

ಉಡುಪಿಯ ಜಿಲ್ಲೆಯ ಸಾಲಿಗ್ರಾಮದ ರವಿಚಂದ್ರ ದಂಪತಿಗಳಿಗೆ ಮದುವೆಯಾಗಿ ವರ್ಷಗಳೆ ಕಳೆದರು ಸಂತಾನ ಪ್ರಾಪ್ತಿಯಾಗಿರುವುದಿಲ್ಲ, ಹಾಗಾಗಿ ಉಡುಪಿಜಿಲ್ಲೆಯ ಕಾಪು ತಾಲೂಕಿನ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಮತ್ತು ಕೊರಗಜ್ಜ ದೈವಸ್ಥಾನಕ್ಕೆ ಬಂದು ಕೊರಗಜ್ಜ ಗುಡಿಯ ಮುಂದೆ ಸಂತಾನ ಪ್ರಾಪ್ತಿಗಾಗಿ ಒಂದು ಸಾವಿರದ ಎರಡು ಮಧ್ಯದ ಬಾಟಲಿಗಳ ಹರಕೆಯನ್ನು ಸಲ್ಲಿಸುತ್ತೆವೆ ಎಂದು ದಂಪತಿಗಳು ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ರವಿಚಂದ್ರ ದಂಪತಿಗಳು ಎಣಿಸಿಕೊಂಡ ಕೆಲಸವನ್ನು ಹರಕೆ ಹೊತ್ತ ಕ್ಷಣಮಾತ್ರದಲ್ಲಿ ಸ್ವಾಮಿ ಕೊರಗಜ್ಜ ಮಾಡಿಕೊಟ್ಟಿದ್ದಾರೆ ಎಂಬ ನಂಬಿಕೆ ಈ ಭಕ್ತರದ್ದು. ಹಾಗಾಗಿ ತಾನು ಹರಕೆ ಹೊತ್ತಂತೆ, ಒಂದು ಸಾವಿರದ ಎರಡು ಮದ್ಯದ ಬಾಟಲಿಗಳನ್ನು ತಂದು ಕೊರಗಜ್ಜನ ಸನ್ನಿಧಾನಕ್ಕೆ ಅರ್ಪಿಸಿದ್ದಾರೆ.

ಉಡುಪಿ ಜಿಲ್ಲೆಯ ಸಾಲಿಗ್ರಾಮದ ರವಿಚಂದ್ರ ಅವರು ಈ ಕೊರಗಜ್ಜ ಸನ್ನಿಧಿಯ ಬಗ್ಗೆ ಅಪಾರ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಹರಕೆ ಸಲ್ಲಿಸಲು ಸುಮಾರು ಒಂದು ವರ್ಷ ಹಿಡಿಸಿದೆ. ಹಣ ಹೊಂದಿಸಿಕೊಂಡು ನಿಧಾನವಾಗಿ ಮದ್ಯದ ಬಾಟಲಿಗಳನ್ನು ಒಟ್ಟುಗೂಡಿಸಿಕೊಂಡು ದೇವರಿಗೆ ಸಲ್ಲಿಸಿದ್ದಾರೆ. ಕುಟುಂಬ ಸಮೇತವಾಗಿ ಬಂದು ಹರಕೆಯನ್ನು ಸಲ್ಲಿಸಿದ್ದಾರೆ. ಕೊರಗಜ್ಜ ಸನ್ನಿಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಮದ್ಯದ ಹರಕೆ ಸಲ್ಲಿಕೆ ಆಗಿರುವುದು ಇದೇ ಮೊದಲ ಬಾರಿಯಾಗಿದೆ.

ಪೇಟೆ ಬೆಟ್ಟು ಶ್ರೀ ಭಗವಾನ್ ಶ್ರೀ ಬಬ್ಬು ಸ್ವಾಮಿ ದೇವಸ್ಥಾನ ಕಟಪಾಡಿ ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಪ್ರತಿ ದಿನ ಭಕ್ತರು ಹರಕೆಯ ರೂಪದಲ್ಲಿ ಚಕ್ಕುಲಿ, ಬೀಡಾ, ವೀಳ್ಯದೆಲೆ, ಮದ್ಯದ ಬಾಟಲಿ ಸಲ್ಲಿಸುತ್ತಾರೆ. ಹರಕೆಯ ರೂಪದಲ್ಲಿ ಸಮರ್ಪಿಸಲಾದ ಮದ್ಯವನ್ನು ನಂತರ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರಿಗೆ ಮನೆಗೆ ತೆಗೆದುಕೊಂಡು ಹೋಗುವಂತೆ ನೀಡಲಾಗುತ್ತದೆ. ಉಳಿದ ಮದ್ಯವನ್ನು ಕೊರಗಜ್ಜ ದೈವದ ಗುಡಿಯ ಹತ್ತಿರ ಸಮರ್ಪಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
ಮುಕಳಪ್ಪ ಹಿಂದೂ ಹುಡ್ಗಿಯನ್ನು ಕರೆದೊಯ್ದು ಮದ್ವೆಯಾಗಿದ್ದೆಲ್ಲಿ?
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ