ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ

ಶಾಲಾ-ಕಾಲೇಜುಗಳು, ಆಸ್ಪತ್ರೆಗಳಿಗೆ ನಿರಂತರ ಬಾಂಬ್ ಬೆದರಿಕೆ ಸಂದೇಶಗಳನ್ನು ಇ-ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಸಿ ಬಾಂಬ್ ಬೆದರಿಕೆ ಸಂದೇಶಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡ ಅಹಮದಾಬಾದ್ ಪೊಲೀಸರು, ಚೆನ್ನೈ ಮೂಲ್ ಯುವತಿಯನ್ನು ಬಂಧಿಸಿದ್ದಾರೆ. ಈಕೆಯನ್ನು ತನಿಖೆಗಾಗಿ ಹಸ್ತಾಂತರಿಸುವಂತೆ ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ.

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
Edited By:

Updated on: Jun 24, 2025 | 12:17 PM

ಉಡುಪಿ, ಜೂನ್ 24: ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್ ಸಂದೇಶ ಕಳುಹಿಸುತ್ತಿದ್ದ ಯುವತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಚೈನ್ನೈ ಮೂಲದ ರೀನಾ ಜೊಶಿಲ್ಡ ಆಗಿದ್ದು, ಈಕೆಯನ್ನು ಗುಜರಾತ್​ನ ಅಹಮದಾಬಾದ್ ಪೊಲೀಸರು (Ahmedabad Police) ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಂಜಿನಿಯರಿಂಗ್ ಅಧ್ಯಯನ ಮಾಡಿ ಚೆನ್ನೈಯಲ್ಲಿ ಎಂಜಿನಿಯರ್ ಆಗಿದ್ದ ರೀನಾ ಜೊಶಿಲ್ಡ, ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಳು.

ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್​ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

ಬಾಂಬ್ ಬೆದರಿಕೆ ಇ-ಮೇಲ್ ಸಂದೇಶದಲ್ಲೇನಿತ್ತು?

‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ’ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಆರೋಪಿ ಇದೇ ರೀತಿಯ ಇ-ಮೇಲ್ ಸಂದೇಶ ಕಳುಹಿಸಿದ್ದಳು. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಳು.

ಇದನ್ನೂ ಓದಿ
ಬೆಂಗಳೂರು, ಶಿವಮೊಗ್ಗ, ಧಾರವಾಡ ಸೇರಿ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ
ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್​ಐಆರ್
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ನಷ್ಟದಲ್ಲಿದ್ದ ದಾವಣಗೆರೆ ರೈತರ ಕೈ ಹಿಡಿದ ಡ್ರ್ಯಾಗನ್ ಫ್ರೂಟ್

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಮೈಸೂರಿನ ಖಾಸಗಿ ವಸತಿ ಶಾಲೆಗೆ ಬಾಂಬ್​ ಬೆದರಿಕೆ

ಸದ್ಯ, ಗುಜರಾತಿನ ಅಹಮದಾಬಾದ್ ಪೊಲೀಸರಿಂದ ಆರೋಪಿ ರೀನಾ ಜೋಶಿಲ್ಡ ವಿಚಾರಣೆ ನಡೆಯುತ್ತಿದೆ. ಆಕೆಯನ್ನು ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿ ನೀಡಲು ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ. ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಅಹಮದಾಬಾದ್ ಪೊಲೀಸರ ತನಿಖೆ ಮುಗಿದ ನಂತರ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ