ಉಡುಪಿ: ಬ್ರಹ್ಮಾವರದಲ್ಲಿ ಟ್ರಕ್‌ಗೆ ಬೈಕ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಜಿಲ್ಲೆಯ ಬ್ರಹ್ಮಾವರದ ಮಂಜುನಾಥ ಬಂಕ್ ಬಳಿ ಖಾಸಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂ.ಜಿ.ಸಮಿತ್ ಕುಮಾರ್(19), ವಾಗೀಶ್ ಕೆದ್ಲಾಯ(19) ಇಬ್ಬರು ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ ಟ್ರಕ್ ಓವರ್‌ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಧಾರುಣ ಘಟನೆ ನಡೆದಿದೆ.
ಉಡುಪಿ: ಲಾರಿಯೊಂದನ್ನು ಒವರ್ ಟೇಕ್ ಮಾಡುವ ಸಂದರ್ಭದಲ್ಲಿ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಇಂದು(ಜ.17) ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿಗಳು ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಸಂಜೆ 7.30 ರ ಸುಮಾರಿಗೆ ಉಡುಪಿಯಿಂದ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಟ್ರಕ್ವೊಂದನ್ನು ಒವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಂಡು ಟ್ರಕ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದ್ದು ರಸ್ತೆಗೆ ಅಪ್ಪಳಿಸಿದ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದೇಶಿ ಮೂಲದ ಡ್ರಗ್ ಪೆಡ್ಲರ್ನ ಬಂಧಿಸಿದ ಜಯನಗರ ಪೊಲೀಸರು
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಆರೋಪಿ ಆ್ಯಡಮ್ಸ್ನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಜಯನಗರ 6 ನೇ ಬ್ಲಾಕ್ನಲ್ಲಿ ಚಾಕಲೇಟ್ನ ಚಿಕ್ಕಡಬ್ಬದಲ್ಲಿ ಕೊಕೇನ್ ಮಾರಾಟ ಮಾಡಲು ಯತ್ನಿಸ್ತಿದ್ದ. ಖಚಿತ ಮಾಹಿತಿ ತಿಳಿದ ಪೊಲೀಸರು ಆತನನ್ನ ಬಂಧಿಸಿದ್ದಾರೆ. ಬಂಧಿತನಿಂದ 2 ಲಕ್ಷ ರೂ ಮೌಲ್ಯದ 30 ಗ್ರಾಂ ಕೊಕೇನ್ ವಶಪಡೆದುಕೊಂಡಿದ್ದು, NDPS ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಧಾರವಾಡ: ನಗರದ ಮರಾಠಾ ಕಾಲನಿಯಲ್ಲಿದ್ದ ಕಿರಣ ಹಿರೇಮಠ (55) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಮಾಜಿಕ ಕಾರ್ಯಕರ್ತನೆಂದು ಗುರುತಿಸಿಕೊಂಡಿದ್ದ ಕಿರಣ್ ನಿವೇಶನ ಕೊಡಿಸುವುದಾಗಿ ಅನೇಕರಿಂದ ಹಣ ಪಡೆದಿದ್ದಾನೆ. ಆದರೆ ನಿವೇಶನ ಕೊಡಿಸದೇ ವಂಚಿಸಿದ್ದ ಆರೋಪದ ಮೇಲೆ ವಂಚನೆಗೊಳಗಾದವರು ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆ ಒತ್ತಡಕ್ಕೆ ಸಿಲುಕಿದ್ದ ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಪನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಪುಣೆಗೆ ಹೋಗುತ್ತಿದ್ದ ಬಸ್ ಕಣಿವೆಗೆ ಉರುಳಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ಕೊಲೆಗೈದಿದ್ದ ಆರೋಪಿ ಬಂಧನ
ಬೆಂಗಳೂರು: ಬ್ಯಾಟರಾಯನಪುರದ ಟಿಂಬರ್ ಲೇಔಟ್‌ನಲ್ಲಿ ಜಗದೀಶ್(34) ಎಂಬಾತನು ಮದ್ಯದ ಅಮಲಿನಲ್ಲಿ ಜ.14ರಂದು ಬೈಕ್ ಸವಾರ ಹೇಮಂತ್ ಎಂಬುವವನಿಗೆ ಆವಾಜ್ ಹಾಕಿದ್ದನು. ಈ ಹಿನ್ನಲೆ ಹೇಮಂತ್ ಜಗದೀಶ್ ಮೇಲೆ ಹಲ್ಲೆ ಮಾಡಿದ್ದನು. ನಿನ್ನೆ ರಾತ್ರಿ ಆಸ್ಪತ್ರೆಯಿಂದ ಜಗದೀಶ್ನನ್ನು ಮನೆಗೆ ಕರೆತಂದಿದ್ದರು ಇದೀಗ ಮೃತಪಟ್ಟಿದ್ದಾರೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲ್ಲೆ ನಡೆಸಿದ ವ್ಯಕ್ತಿಯನ್ನ ಇದೀಗ ಬ್ಯಾಟರಾಯನಪುರದ ಪೊಲೀಸರು ಬಂಧಿಸಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ